Crime News

ವ್ಯಕ್ತಿ ಆತ್ಮಹತ್ಯೆ

ದಿನಾಂಕ 07/10/2018ರಂದು ಕುಶಾಲನಗರ ಸಮೀಪದ ಬಸವನಹಳ್ಳಿ ನಿವಾಸಿ ಭೀಮಯ್ಯ ಎಂಬವರು ವಿಷ ಸೇವಿಸಿ ಮನೆಯ ಬಳಿ ಇರುವ ಚಿಕ್ಲಿಹೊಳೆ ಕಾಲುವೆಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೃತ ಭೀಮಯ್ಯ ಮೂಲತಃ ಸೂರ್ಲಬ್ಬಿ ಗ್ರಾಮದ ನಿವಾಸಿಯಾಗಿದ್ದು ಆಗಸ್ಟ್ ತಿಂಗಳಿನಲ್ಲಿ ಸುರಿದ ಭಾರೀ ಮಳೆಗೆ ಅವರ ಮನೆಗೆ ಹಾನಿಯಾಗಿ ಬಿದ್ದು ಹೋದ ಕಾರಣಕ್ಕೆ ಬಸವನಹಳ್ಳಿ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರೆನ್ನಲಾಗಿದೆ. ಭಿಮಯ್ಯನವರು ಮಾಡಿದ್ದ ಸಾಲಗಳನ್ನು ತೀರಿಸಲಾಗದೆ ಜುಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ನೀಡಿದ ದೂರಿನ ಮೇರೆಗೆ ಕುಶಾಲನಗರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. Read more

1 157 158 159 160 161 341