Crime News

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 17-08-2019 ರಂದು ಸೋಮವಾರಪೇಟೆ ತಾಲ್ಲೂಕು ಬೈರಪ್ಪನಗುಡಿ ಗ್ರಾಮದ ರಸ್ತೆಯಲ್ಲಿ ಸಚಿನ್ ಎಂಬುವರು ಮೋಟಾರ್ ಬೈಕ್ ನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ ಪರಿಣಾಮ ಬೈಕ್ ನ ಹಿಂಬದಿ ಕುಳಿತಿದ್ದ ಬೋಪಯ್ಯ ಎಂಬವರ ಮಗಳು ಕೆಳಗೆ ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಹಲ್ಲೆ ಪ್ರಕರಣ

            ದಿನಾಂಕ: 19-08-2019 ರಂದು ಸೋಮವಾರಪೇಟೆ ತಾಲ್ಲೂಕು ಸುಂಟಿಕೊಪ್ಪದ ಮಧುರಮ್ಮ ಬಡಾವಣೆಯ ನಿವಾಸಿ ಶ್ರೀಮತಿ ವೀಣಾ ಎಂಬವರಿಗೆ ಆಕೆಯ ಪತಿ ಶಿವಲಿಂಗಪ್ಪ ಎಂಬವರು ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿ ಕತ್ತಿಯಿಂದ ತಲೆ ಮತ್ತು ಕೈಗೆ ಕಡಿದು ತೀವ್ರ ತರಹದ ಗಾಯಪಡಿಸಿದ್ದು ಈ ಬಗ್ಗೆ ಸುಂಟಿಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.