Crime Newes
ರಸ್ತೆ ಅಪಘಾತ ಪ್ರಕರಣ
ದಿನಾಂಕ: 11-11-2020 ರಂದು ವಿರಾಜಪೇಟೆ ತಾಲ್ಲೂಕು ಪೆರುಂಬಾಡಿ ಗ್ರಾಮದ ನವನಗರ ರಸ್ತೆ ಬಳಿ ಕೆಎ-04-ಎಂಎ-5616 ರ ಬಲೆನೋ ಕಾರನ್ನು ಅದರ ಚಾಲಕ ಕಲಂದರ್ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಆಟೋ ರಿಕ್ಷಾಕ್ಕೆ ಡಿಕ್ಕಿಪಡಿಸಿದ ಪರಿಣಾಮ ಆಟೋ ಮಗುಚಿ ಬಿದ್ದು ಮೂವರು ಗಾಯಗೊಂಡಿದ್ದು ಈ ಬಗ್ಗೆ ಆಟೋ ಚಾಲಕ ಸುಬ್ರಮಣಿ ಎಂಬುವವರು ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಸಿ ತನಿಖೆ ಕೈಗೊಂಡಿದ್ದಾರೆ.