Crime News

ಹಳೇ ವೈಷಮ್ಯ ವ್ಯಕ್ತಿ ಮೇಲೆ ಹಲ್ಲೆ:

ವಿರಾಜಪೇಟೆ ನಗರದ ಅರಸು ನಗರದಲ್ಲಿ ವಾಸವಿರುವ ಎಸ್.ಆರ್. ಮದನ್ ರವರು ದಿನಾಂಕ 30-1-2019 ರಂದು ಅವರ ಸಂಬಂಧಿಕರ ಮನೆಗೆ ಮದುವೆ ಕಾರ್ಯಕ್ರಮಕ್ಕೆ ಹೋಗಿದ್ದು ಅಲ್ಲಿಗೆ ಬಂದ ಅವರ ದೊಡ್ಡಮ್ಮನ ಮಗ ಮಂಜು ಎಂಬವರು ಹಳೇ ವೈಷಮ್ಯದಿಂದ ಜಗಳ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ಕತ್ತಿಯಿಂದ ಕಡಿದು ಗಾಯಪಡಿಸಿದ್ದು ಅಲ್ಲದೆ ಕೊಲೆ ಮಾಡುವುದಾಗಿ ಬೆದರಿಕೆ ಒಡ್ಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ವಿರಾಜಪೇಟೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಹೋಂಡಾ ಸ್ರ್ಪೇ ಮಿಷನ್ ಕಳ್ಳತನ:

ಸೋಮವಾರಪೇಟೆ ಪೊಲೀಸ್ ಠಾಣಾ ಸರಹದ್ದಿನ ಶಾಂತಳ್ಳಿ ಗ್ರಾಮದ ಬಸವನಕಟ್ಟೆ ಎಂಬಲ್ಲಿ ವಾಸವಾಗಿರುವ ಹೆಚ್.ಡಿ. ಸುರೇಶ್ ಎಂಬವರಿಗೆ ಸೇರಿದ ಅವರ ಮನೆಯ ಪಕ್ಕದ ಕೊಟ್ಟಿಗೆಯಲ್ಲಿಟ್ಟಿದ್ದ ಸ್ರ್ಪೇ ಮಿಷನ್ ನ್ನು  ದಿನಾಂಕ 03.12.2018 ರಂದು ರಾತ್ರಿ ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿದ್ದು  ಇದರ ಅಂದಾಜು ಬೆಲೆ 19,500/- ರೂ ಗಳು ಆಗಿರುತ್ತದೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ಕೈಗೊಂಡಿದ್ದಾರೆ.