Crime News

ವ್ಯಕ್ತಿಯ ಆತ್ಮಹತ್ಯೆ

          ವ್ಯಕ್ತಿಯೊಬ್ಬರು ಜೀವನದಲ್ಲಿ ಜುಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಡಿಕೇರಿ ತಾಲೋಕಿನ ಮರಗೋಡು ಗ್ರಾಮದಲ್ಲಿ ವರದಿಯಾಗಿದೆ. ಮರಗೋಡು ಗ್ರಾಮದ ನಿವಾಸಿಯಾದ ರಾಜನ್ ಎಂಬುವವರು ಅನಾರೋಗ್ಯದಿಂದ ಬಳಲುತ್ತಿದ್ದವರು ಜೀವನದಲ್ಲಿ ಜುಗುಪ್ಸೆಗೊಂಡು ದಿನಾಂಕ 30-03-2019 ರಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಈ ಬಗ್ಗೆ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ವ್ಯಕ್ತಿಯ ಆತ್ಮಹತ್ಯೆ

           ದಿನಾಂಕ 29-03-2019 ರಂದು ಕೊಡ್ಲಿಪೇಟೆಯ ಮನಗನಹಳ್ಳಿಯ ನಿವಾಸಿ ವೀರರಾಜು ಎಂಬುವವರು ಜೀವನದಲ್ಲಿ ಜುಗುಪ್ಸೆಗೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಮಹಿಳೆಯ ಆತ್ಮಹತ್ಯೆ

           ದಿನಾಂಕ 29-03-2019 ರಂದು ವಿರಾಜಪೇಟೆ ತಾಲೋಕಿನ ಗೋಣಿಕೊಪ್ಪಲುವಿನ 1ನೇ ಬ್ಲಾಕ್ ನಲ್ಲಿರುವ ಪಂಜರಿಯರವರ ನಂಜಿ ಎಂಬುವವರು ಜೀವನದಲ್ಲಿ ಜುಗುಪ್ಸೆಗೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ಗೋಣಿಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.