Crime News

ವ್ಯಕ್ತಿ ಆತ್ಮಹತ್ಯೆ

ದಿನಾಂಕ 03/05/2019ರಂದು ಸೋಮವಾರಪೇಟೆ ಸಮೀಪದ ಕೂತಿ ನಿವಾಸಿ ಕೆ.ಟಿ.ದೇವಕ್ಕಿ ಎಂಬವರು ಮನೆಯಲ್ಲಿ ತೊಟದ ಕೆಲಸಕ್ಕೆಂದು ತಂದಿಟ್ಟಿದ್ದ ಯಾವುದೋ ವಿಷವನ್ನು ಸೇವಿಸಿ ಅಸ್ವಸ್ಥರಾಗಿದ್ದು ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ದಿನಾಂಕ 06/05/2019ರಂದು ಮೃತರಾಗಿರುವುದಾಗಿ ವರದಿಯಾಗಿದೆ. ಮೃತೆ ದೇವಕ್ಕಿರವರು ದೀರ್ಘ ಸಮಯದಿಂಧ ಹೊಟ್ಟೆನೋವಿನಿಂದ ಬಳಲುತ್ತಿದ್ದು ಗುಣಮುಖವಾಗದ ಕಾರಣ ಜುಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ನೀಡಿದ ದೂರಿನ ಮೇರೆಗೆ ಸೋಮವಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ವ್ಯಕ್ತಿ ಆತ್ಮಹತ್ಯೆ

ಕುಶಾಲನಗರದ ಕೆಹೆಚ್‌ಬಿ ಕಾಲೋನಿ ನಿವಾಸಿ ಗಂಗಾಧರ ಎಂಬವರು ದಿನಾಂಕ 05/05/2019ರಂದು ರಾತ್ರಿ ಮನೆಯ ಮಾಡಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ಗಂಗಾಧರವರ ಪತ್ನಿ 5 ತಿಂಗಳ ಹಿಂದೆ ಮೃತರಾಗಿದ್ದು ಅದೇ ಚಿಂತೆಯಲ್ಲಿ ಜುಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ನೀಡಿದ ದೂರಿನ ಮೇರೆಗೆ ಕುಶಾಲನಗರ ಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.