Crime News

ಅಪಘಾತ ಪ್ರಕರಣ

           ಸೋಮವಾರಪೇಟೆ ತಾಲೋಕಿನ ಬೀಟಿಕಟ್ಟೆಯ ನಿವಾಸಿ ವಾರಿಜರವರು ಮನೆಗೆ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಸೋಮವಾರಪೇಟೆ ಕಡೆಯಿಂದ ಬಂದ ಟಿಪ್ಪಲ್ ಲಾರಿ ವಾರಿಜರವರಿಗೆ ಡಿಕ್ಕಿಯಾಗಿ ಗಾಯಗೊಂಡಿದ್ದು,  ಈ ಬಗ್ಗೆ ಶನಿವಾರಸಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ವ್ಯಕ್ತಿಯ ಆತ್ಮ ಹತ್ಯೆ

            ಸೋಮವಾರಪೇಟೆ ತಾಲೋಕಿನ ತೊಳೂರುಶೆಟ್ಟಳ್ಳಿ ಗ್ರಾಮದ ನಿವಾಸಿಯಾದ ಪುಟ್ಟರಾಜು ಎಂಬುವವರು ಜೀವನದಲ್ಲಿ ಜುಗುಪ್ಸೆಗೊಂಡು ದಿನಾಂಕ 25-05-2019 ರಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ಸೋಮವಾರಪೇಟೆ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿರುತ್ತದೆ.

ಅಪಘಾತ ಪ್ರಕರಣ

           ಶನಿವಾರಸಂತೆಯ ನಿವಾಸಿ ಅಕ್ಕಮ್ಮ ಎಂಬುವವರು ಕೆ.ಆರ್.ಸಿ ಸರ್ಕಲ್ ಬಳಿ ನಡೆದುಕೊಂಡು ಹೋಗುತ್ತಿರುವಾಗ ಮಾರ್ಕೆಟ್ ಕಡೆಯಿಂದ ಬಂದ ಮಾರುತಿ ವ್ಯಾನನ್ನು ಅದರ ಚಾಲಕ ಅಜಾಗರೂಕತೆಯಿಂದ ಚಾಲನೆ ಮಾಡಿ ಅಕ್ಕಮ್ಮನವರಿಗಗೆ ಡಿಕ್ಕಿಪಡಿಸಿದ ಪರಿಣಾಮ ಗಾಯಗೊಂಡಿದ್ದು,  ಈ ಬಗ್ಗೆ ಶನಿವಾರಸಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ವ್ಯಕ್ತಿಯ ಆತ್ಮ ಹತ್ಯೆ

            ಸೋಮವಾರಪೇಟೆ ತಾಲೋಕಿನ ಸಿದ್ದಲಿಂಗಪುರ ಗ್ರಾಮದ ನಿವಾಸಿಯಾದ ವಿನಯ್ ಕುಮಾರ್ ಎಂಬುವವರು ಜೀವನದಲ್ಲಿ ಜುಗುಪ್ಸೆಗೊಂಡು ದಿನಾಂಕ 24-05-2019 ರಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿರುತ್ತದೆ.