Crime News

ಅಕ್ರಮ ಮದ್ಯ ಮಾರಾಟ

            ದಿನಾಂಕ 07-06-2019 ರಂದು ಮಡಿಕೇರಿ ತಾಲೋಕಿನ ಕರ್ಣಂಗೇರಿ ಗ್ರಾಮದ ನಿವಾಸಿ ಸುಬ್ರಮಣಿ ಎಂಬುವವರು ತನ್ನ ಮನೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದಾಗಿ ಸಿಕ್ಕಿದ ಮಾಹಿತಿ ಮೇರೆಗೆ ಮಡಿಕೇರಿ ಗ್ರಾಮಾಂತರ ಠಾಣೆಯ ಪಿಎಸ್ಐ ರವರು ಸಿಬ್ಬಂದಿಯವರೊಂದಿಗೆ ಹೋಗಿ ದಾಳಿ ಮಾಡಿ ಮದ್ಯ ಮಾರಾಟ ಮಾಡುತ್ತಿದ್ದ ಸುಬ್ರಮಣಿಯವರನ್ನು ವಶಕ್ಕೆ ಪಡೆದುಕೊಂಡು ಮದ್ಯದ ಪ್ಯಾಕೆಟ್ ಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿರುತ್ತಾರೆ

ಅಪಘಾತ ಪ್ರಕರಣ

           ದಿನಾಂಕ 05-06-2019 ರಂದು ಮೂರ್ನಾಡುವಿನ ನಿವಾಸಿ ಆನಂದ ರಾಚಪ್ಪ ತೊಟಗಿ ಎಂಬುವವರು ಕಾಂತೂರುವಿನಿಂದ ಐಕೊಳಕ್ಕೆ ಮೋಟಾರು ಸೈಕಲಿನಲ್ಲಿ ಹೋಗುತ್ತಿರುವಾಗ ಹಿಂದಿನಿಂದ ಬಂದ ಮೋಟಾರು ಸೈಕಲನ್ನು ಬಿಳಿಗೇರಿ ಗ್ರಾಮದ ಕವಿನ್ ಎಂಬುವವರು ಅಜಾಗರೂಕತೆಯಿಂದ ಚಾಲನೆ ಮಾಡಿ ಡಿಕ್ಕಿಪಡಿಸಿದ ಪರಿಣಾಮ ಡಿಕ್ಕಿಪಡಿಸಿದ ಮೋಟಾರು ಸೈಕಲಿನ ಹಿಂಭಾಗದಲ್ಲಿ ಕುಳಿತ್ತಿದ್ದ ವ್ಯಕ್ತಿಗೆ ಗಾಯವಾಗಿದ್ದು, ಈ ಬಗ್ಗೆ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಹಲ್ಲೆ ಪ್ರಕರಣ

           ದಿನಾಂಕ 06-06-2019 ರಂದು ಕುಶಾಲನಗರದ ನಿವಾಸಿಯಾದ ಇಬ್ರಾಹಿಂ ಸೂಫಿ ಎಂಬುವವರೊಂದಿಗೆ ಕಲೀಂ ಪಾಷ, ಅಬೀದ್, ಆಸಿಂ ಮತ್ತು ಅಕ್ರಂ ಪಾಷ ಎಂಬುವವರು ಹಣದ ವಿಚಾರದಲ್ಲಿ ಜಗಳ ಮಾಡಿ ಹಲ್ಲೆ ನಡೆಸಿದ್ದು, ಈ ಬಗ್ಗೆ ಕುಶಾಲನಗರ ಪಟ್ಟಣ ಠಾಣೆಯಲ್ಲಿ ಪ್ರರಕಣ ದಾಖಲಾಗಿರುತ್ತದೆ.