Crime News
ಬಸ್ಸುಗಳು ಡಿಕ್ಕಿ
ಬಸ್ಸುಗಳು ಮುಖಾಮುಖಿ ಡಿಕ್ಕಿಯಾಗಿ ಎರಡೂ ಬಸ್ಸುಗಳು ಜಖಂಗೊಂಡ ಘಟನೆ ಮಡಿಕೇರಿ ಮೈಸೂರು ರಾಜ್ಯ ಹೆದ್ದಾರಿಯ ಬೋಯಿಕೇರಿ ಎಂಬಲ್ಲಿಂದ ವರದಿಯಾಗಿದೆ. ದಿನಾಂಕ 07-05-2018 ರಂದು ಮಡಿಕೇರಿಯ ಕೆ.ಎಸ್.ಆರ್.ಟಿ.ಸಿ ಡಿಪೋಕ್ಕೆ ಸೇರಿದ ಕೆಎ-21-ಎಫ್-0025 ರ ಕೆ.ಎಸ್.ಆರ್.ಟಿ.ಸಿ ಬಸ್ಸು ಬೆಂಗಳೂರಿನಿಂದ ಮಡಿಕೇರಿಗೆ ಬರುತ್ತಿರುವಾಗ ಬೋಯಿಕೇರಿ ಗ್ರಾಮದ ಸಿಂಕೋನ ಎಂಬಲ್ಲಿಗೆ ತಲುಪುವಾಗ ಎದುರುಗಡೆಯಿಂದ ಬಂದ ವಿ.ಆರ್.ಎಲ್ ಬಸ್ಸನ್ನು ಅದರ ಚಾಲಕ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಡಿಕ್ಕಿಪಡಿಸಿದ ಪರಿಣಾಮ ಎರಡೂ ಬಸ್ಸುಗಳು ಜಖಂಗೊಂಡಿದ್ದು, ಈ ಬಗ್ಗೆ ಕೆ.ಎಸ್.ಆರ್.ಟಿ.ಸಿ ಬಸ್ಸಿನ ಚಾಲಕ ಧನರಾಜ್ ರವರು ನೀಡಿದ ದೂರಿನ ಮೇರೆಗೆ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಕಟ್ಟಡದಿಂದ ಬಿದ್ದು ಸಾವು
ವ್ಯಕ್ತಿಯೊಬ್ಬರು ಕಟ್ಟಡದಿಂದ ಬಿದ್ದು ಮೃತಪಟ್ಟ ಘಟನೆ ಸಿದ್ದಾಪುರದ ನೆಲ್ಲಿಹುದಿಕೇರಿ ಗ್ರಾಮದಲ್ಲಿ ವರದಿಯಾಗಿದೆ. ಕೇರಳ ರಾಜ್ಯದ ಮಲಪುರಂ ಜಿಲ್ಲೆಯ ನಿವಾಸಿ ಸುದೀರ್ ಎಂಬುವವರು ನೆಲ್ಲಿಹುದಿಕೇರಿ ಗ್ರಾಮದಲ್ಲಿ ಹೊಸದಾಗಿ ನಿರ್ಮಿಸುತ್ತಿರುವ ಕಟ್ಟಡಲ್ಲಿ ಗಾರೆ ಕೆಲಸ ಮಾಡಿಕೊಂಡು ಅದೇ ಕಟ್ಟಡದಲ್ಲಿ ಇತರೆ ಇಬ್ಬರೊಂದಿಗೆ ಮಲಗುತ್ತಿದ್ದು, ದಿನಾಂಕ 07-05-2018 ರಂದು ರಾತ್ರಿ ಕಟ್ಟಡದ ಮೇಲ್ಬಾಗಕ್ಕೆ ಹೋದವರು ಆಕಸ್ಮಿಕವಾಗಿ ಕೆಳಗೆ ಬಿದ್ದು ಗಂಬೀರ ಗಾಯಗೊಂಡು ಮೃತಪಟ್ಟಿದ್ದು ಈ ಬಗ್ಗೆ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.