Crime News

ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ:

ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ಜೀವನದಲ್ಲಿ ಜುಗುಪ್ಸೆಗೊಂಡು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿದ್ದಾಪುರ ಠಾಣಯಲ್ಲಿ ವರದಿಯಾಗಿದೆ. ಸಿದ್ದಾಪುರ ಠಾಣಾ ವ್ಯಾಪ್ತಿಯ ಅರೆಕಾಡು ಗ್ರಾಮದಲ್ಲಿರುವ ಬಳಂಜಿಗೆರೆ ಟಾಟಾ ಕಾಫಿ ತೋಟದದ ಲೈನು ಮನೆಯಲ್ಲಿ ವಾಸವಾಗಿದ್ದ ಕೂಲಿ ಕಾರ್ಮಿಕ 67 ವರ್ಷ ಪ್ರಾಯದ ಪಿ. ಬಾಬು ಎಂಬವರು ಅನಾರೋಗ್ಯದಿಂದ ಬಳಲುತ್ತಿದ್ದು ಇದರಿಂದ ಮನನೊಂದ ಸದರಿಯವರು ದಿನಾಂಕ 5-7-2019 ರಂದು ತಾನು ವಾಸವಾಗಿರುವ ಲೈನು ಮನೆಯ ಹತ್ತಿರದ ಕಾಫಿ ತೋಟದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಸದರಿ ಮೃತರ ಪತ್ನಿ ಶ್ರೀಮತಿ ಸುಶೀಲರವರು ನೀಡಿದ ದೂರಿನ ಮೇರೆಗೆ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಯುವಕ ಕಾಣೆ:

ಮಡಿಕೇರಿ ನಗರದ ಗೌಳಿಬೀದಿ ನಿವಾಸಿ ಯು.ಎಸ್. ಮಡಿವಾಳ ಎಂಬವರ ಮಗ ತೇಜ್ ಕುಮಾರ್‍ ಎಂಬವರು ದಿನಾಂಕ 5-7-2019 ರಂದು ದ್ವಿತೀಯ ಪಿ.ಯು.ಸಿ ಫಲಿತಾಂಶ ನೋಡಲೆಂದು ಹೋಗಿ ಮತ್ತೆ ಮನೆಗೆ ಬಾರದೆ ಕಾಣೆಯಾಗಿರುವುದಾಗಿ ಯು.ಎಸ್‍. ಮಡಿವಾಳ ರವರು ನೀಡಿದ ದೂರಿನ ಮೇರೆಗೆ ಮಡಿಕೇರಿ ನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.