Crime News

ಅಕ್ರಮ ಗಾಂಜಾ ಮಾರಾಟ, ವ್ಯಕ್ತಿಗಳ ಬಂಧನ

           ದಿನಾಂಕ 09-07-2019 ರಂದು ಬಾಡಗ ಬಾಣಂಗಾಲ ಗ್ರಾಮದ ಘಟ್ಟದಳ್ಳ ಎಂಬಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿರುವುದಾಗಿ ಸಿದ್ದಾಪುರ ಠಾಣೆಯ ಪಿಎಸ್ಐ ರವರಿಗೆ ದೊರೆತ ಮಾಹಿತಿ ಮೇರೆಗೆ ಸಿಬ್ಬಂದಿಯವರೊಂದಿಗೆ ಹೋಗಿ ದಾಳಿ ಮಾಡಿ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಚೆನ್ನಯ್ಯನ ಕೋಟೆಯ ನಿವಾಸಿಯಾದ ಮಂಜು ಮತ್ತು ಪ್ರವೀಣರವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿರುತ್ತಾರೆ.

ಅಪರಿಚಿತ ವ್ಯಕ್ತಿಯ ಶವ ಪತ್ತೆ

             ದಿನಾಂಕ 09-07-2019 ರಂದು ಗೋಣಿಕೊಪ್ಪ ನಗರದ ಪಾಲಿಬೆಟ್ಟ ಜಂಕ್ಷನ್ ಹತ್ತಿರ ಅಪರಿಚಿತ ವ್ಯಕ್ತಿಯ ಶವ ದೊರೆತ್ತಿದ್ದು, ಈ ಬಗ್ಗೆ ಸತೀಶರವರು ನೀಡಿದ ದೂರಿನ ಮೇರೆಗೆ ಗೋಣಿಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಅಕ್ರಮ ಗಾಂಜಾ ಮಾರಾಟ, ವ್ಯಕ್ತಿಯ ಬಂಧನ

           ದಿನಾಂಕ 09-07-2019 ರಂದು ಸೋಮವಾರಪೇಟೆ ನಗರದ ಜೂನಿಯರ್ ಕಾಲೇಜು ಹತ್ತಿರ ಕೂಡಿಗೆ ಗ್ರಾಮದ ನಿವಾಸಿಯಾದ ರಂಜಿತ್ ರವರು ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದವನ್ನು ಪೊಲೀಶರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಗಾಂಜಾ ಸೇವನೆ ಪ್ರಕರಣ ದಾಖಲು

            ದಿನಾಂಕ 09-07-2019 ರಂದು ಪೊನ್ನಂಪೇಟೆ ನಗರದ ಆಶ್ರಮ ಶಾಲೆಯ ಬಳಿ ಗಾಂಜಾ ಸೇವನೆ ಮಾಡುತ್ತಿರುವುದಾಗಿ ಪಿ.ಎಸ್.ಐ ರವರಿಗೆ ಸಿಕ್ಕಿದ ಮಾಹಿತಿ ಮೇರೆಗೆ ಸಿಬ್ಬಂದಿಯವರೊಂದಿಗೆ ತೆರಳಿ ಗಾಂಜಾ ಸೇವನೆ ಮಾಡುತ್ತಿದ್ದ ಕಾರ್ಯಪ್ಪ, ಪೈಜಲ್ ಮತ್ತು ವರುಣ್ ರವರನ್ನು ರವರನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿರುತ್ತಾರೆ.

ವ್ಯಕ್ತಿಯ ಆತ್ಮಹತ್ಯೆ

           ವ್ಯಕ್ತಿಯೊಬ್ಬರು ಜೀವನದಲ್ಲಿ ಜುಗುಪ್ಸೆಗೊಂಡು ಆತ್ಮ ಹತ್ಯೆ ಮಾಡಿಕೊಂಡಿರುವ ಘಟನೆ  ವಿರಾಜಪೇಟೆ ತಾಲೋಕಿನ ಬಿಟ್ಟಂಗಾಲ ಗ್ರಾಮದಲ್ಲಿ ವರದಿಯಾಗಿದೆ. ಬಿಟ್ಟಂಗಾಲ ಗ್ರಾಮದ ನಿವಾಸಿ ಸುಧಾಕರ ಎಂಬುವವರು ಜೀವನದಲ್ಲಿ ಜುಗುಪ್ಸೆಗೊಂಡು ದಿನಾಂಕ 09-07-2019 ರಂದು ಆತ್ಮಹತ್ಯೆ ಮಾಡಿಕೊಂಡಿದ್ದು ಈ ಬಗ್ಗೆ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಅಕ್ರಮ ಗಾಂಜಾ ಮಾರಾಟ

           ದಿನಾಂಕ 09-07-2019 ರಂದು ಕುಶಾಲನಗರ ಪಟ್ಟಣದ ಆಂಜನೇಯ ಸ್ವಾಮಿ ದೇವಸ್ಥಾನದ ಹತ್ತಿರ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿರುವುದಾಗಿ ಕುಶಾಲನಗರ ವೃತ್ತ ನಿರೀಕ್ಷಕರಾದ ಆರಾದ್ಯರವರಿಗೆ ದೊರೆತ ಮಾಹಿತಿ ಮೇರೆಗೆ ಸಿಬ್ಬಂದಿಯವರೊಂದಿಗೆ ಹೋಗಿ ದಾಳಿ ಮಾಡಿ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಪಂಚವಳ್ಳಿಯ ನಿವಾಸಿಗಳಾದ ಜಬೀವುಲ್ಲಾ ಮತ್ತು ಅನ್ವರ್ ರವರನ್ನು ವಶಕ್ಕೆ ಪಡೆಕೊಂಡು, ಈ ಬಗ್ಗೆ ಕುಶಾಲನಗರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.