Crime News
ನೇಣುಬಿಗಿದುಕೊಂಡು ಮಹಿಳೆ ಆತ್ಮಹತ್ಯೆ:
ಸೋಮವಾರಪೇಟೆ ಪೊಲೀಸ್ ಠಾಣಾ ಸರಹದ್ದಿನ ಬಜೆಗುಂಡಿ ಯಲ್ಲಿ ವಾಸವಾಗಿರುವ ನಾಗೇಶ್ ಎಂಬವರ ಪತ್ನಿ ಶ್ರೀಮತಿ ಪಾರ್ವತಿ ಎಂಬವರು ಜೀವನದಲ್ಲಿ ಜುಗುಪ್ಸೆಗೊಂಡು ದಿನಾಂಕ 30-7-2019 ರಂದು ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ನಾಗೇಶ್ರವರು ನೀಡಿದ ದೂರಿನ ಮೇರೆಗೆ ಸೋಮವಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಕಾರು ಅಪಘಾತ:
ಮೈಸೂರಿನ ಜೆ.ಎಸ್.ಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಜಿ.ಪುನೀತ್ ಹಾಗು ಸ್ನೇಹಿತರಾದ ಓಂಕಾರ್, ಸಚಿನ್, ರೋಹಿತ್ ಹಾಗು ಅಭಿಶೇಕ್ ರವರುಗಳು ದಿನಾಂಕ 30-7-2019 ರಂದು ಕೊಡಗು ಜಿಲ್ಲೆಗೆ ಪ್ರವಾಸಕ್ಕೆಂದು ಕಾರಿನಲ್ಲಿ ಬರುತ್ತಿದ್ದಾಗ ಸುಂಟಿಕೊಪ್ಪ ಪೊಲೀಸ್ ಠಾಣಾ ಸರಹದ್ದಿನ ಮಡಿಕೇರಿ-ಕುಶಾಲನಗರ ರಾಷ್ಟ್ರೀಯ ಹೆದ್ದಾರಿ ಬಾಳೆಕಾಡು ಎಸ್ಟೇಟ್ ಬಳಿ ಕಾರನ್ನು ಚಲಾಯಿಸುತ್ತಿದ್ದ ಓಂಕಾರ್ ರವರು ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ ಪರಿಣಾಮ ಕಾರು ರಸ್ತೆಯ ಬದಿಯ ಬರೆಗೆ ಡಿಕ್ಕಿಯಾದ ಪರಿಣಾಮ ಕಾರು ಜಖಂಗೊಂಡಿದ್ದು, ಈ ಸಂಬಂಧ ಸುಂಟಿಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಕಳವು ಪ್ರಕರಣ:
ಮಡಿಕೇರಿ ನಗರದ ಗಣಪತಿ ಬೀದಿಯಲ್ಲಿರುವ ಜಾನ್ ಎಂಬವರಿಗೆ ಸೇರಿದ ಮನೆಯ ಹಿಂಬಾಗಿಲನ್ನು ತೆರೆದು ಒಳ ಪ್ರವೇಶಿಸಿದ ಯಾರೋ ಕಳ್ಳರು ಮನೆಯೊಳಗಿಂದ ಗೋಡೆ ಗಡಿಯಾರ, ಬೆಡ್ಸ್ಪ್ರೆಡ್, ಸುಗಂಧ ಬಾಟಲಿಗಳು ಇತ್ಯಾದಿ ಸಾಮಾಗ್ರಿಗಳನ್ನು ಕಳವುಮಾಡಿಕೊಂಡು ಹೋಗಿದ್ದು, ಈ ಸಂಬಂಧ ಬಿ.ಎ.ಮಹಾಬಲ ರವರು ನೀಡಿದ ದೂರಿನ ಮೇರೆಗೆ ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.