ಪ್ರವಾಹದಲ್ಲಿ ಸಿಲುಕಿದವರ ರಕ್ಷಣೆ

ಕೊಡಗು ಜಿಲ್ಲೆಯ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಹೊದ್ದೂರು ಗ್ರಾಮದ ಹೊದವಾಡ ಸಮೀಪ ಪ್ರವಾಹದಲ್ಲಿ ಸಿಲುಕಿದ್ದ ಬೊಳಿಬಾಣೆ ಜೋಯಿ ಎಂಬವರ ಕಾರ್ಮಿಕ ಕುಟುಂಬವೊಂದನ್ನು ಎನ್.ಡಿ.ಆರ್.ಎಫ್ ತಂಡದ ಸಹಾಯದಲ್ಲಿ ರಕ್ಷಿಸಲಾಯಿತು.

Crime News

ಅಪಘಾತ ಪ್ರಕರಣ          

ದಿನಾಂಕ 06-08-2019 ರಂದು ಕೆದಕಲ್ ಗ್ರಾಮದ ನಿವಾಸಿಯಾದ ಶರತ್ ಕುಮಾರ್ ಎಂಬುವವರು ಅಣ್ಣ ಸತೀಶ್ ರವರೊಂದಿಗೆ ಸುಂಟಿಕೊಪ್ಪಕ್ಕೆ ಮೋಟಾರು ಸೈಕಲಿನಲ್ಲಿ ಹೋಗುತ್ತಿರುವಾಗ ಎದುರಿನಿಂದ ಬಂದ ಮಾರುತಿ ಓಮಿನಿ ವ್ಯಾನನ್ನು ಅದರ ಚಾಲಕ ಅಜಾಗರೂಕತೆಯಂದ ಚಾಲನೆ ಮಾಡಿ ಡಿಕ್ಕಿ ಪಡಿಸಿದ ಪರಿಣಾಮ ಕೆಳಗೆ ಬಿದ್ದು ಇಬ್ಬರಿಗೂ ಗಾಯವಾಗಿದ್ದು, ಈ ಬಗ್ಗೆ ಶರತ್ ರವರು ನೀಡಿದ ದೂರಿನ ಮೇರೆಗೆ ಸುಂಟಿಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಅಪರಿಚಿತ ವ್ಯಕ್ತಿಗೆ ವಾಹನ ಡಿಕ್ಕಿ

          ದಿನಾಂಕ 04-08-2019 ರಂದು ವಿರಾಜಪೇಟೆ ತಾಲೋಕಿನ ಬಾಳೆಲೆ ಗ್ರಾಮದ ಬೀಳೂರು ಜಂಕ್ಷನ್ ಬಳಿ ವ್ಯಕ್ತಿಯೊಬ್ಬರು ನಡೆದುಕೊಂಡು ಹೋಗುತ್ತಿರುವಾಗ ಯಾವುದೋ ವಾಹನ ಡಿಕ್ಕಿಪಡಿಸಿ ನಿಲ್ಲಿಸದೇ ಹೋಗಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ  ವ್ಯಕ್ತಿಯನ್ನು ಮಡಿಕೇರಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಯ ಬಗ್ಗೆ ದಾಖಲಿಸಿದ್ದು, ವಾರಿಸುದಾರರು ಪತ್ತೆಯಾಗದೇ ಇದ್ದು, ಈ ಬಗ್ಗೆ ಪೊನ್ನಂಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.