Crime News

ವೃದ್ದನ ಹತ್ಯೆ

            ದಿನಾಂಕ: 20-08-2019 ರಂದು ರಾತ್ರಿ ಮಡಿಕೇರಿ ತಾಲ್ಲೂಕು ಮರಗೋಡು ಗ್ರಾಮದಲ್ಲಿ ವೃದ್ದರೊಬ್ಬರನ್ನು ಯಾರೋ ದುಷ್ಕರ್ಮಿಗಳು ಕತ್ತಿಯಿಂದ ಕಡಿದು ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ. ಮರಗೋಡು ಗ್ರಾಮದಲ್ಲಿ ಕೂಲಿ ಕೆಲಸ ಮಾಡಿಕೊಂಡು ವಾಸವಿದ್ದ ಸಿದ್ದ ಎಂಬ ವ್ಯಕ್ತಿಯನ್ನು ದೊಡ್ಡೋಣಿ ಜಂಕ್ಷನ್ ಬಳಿ ಬಸ್ ನಿಲ್ದಾಣದ ಮುಂಭಾಗದಲ್ಲಿ ದುಷ್ಕರ್ಮಿಗಳು ಮಾರಕ ಆಯುಧದಿಂದ ಹಲ್ಲೆ ಮಾಡಿ ಹತ್ಯೆ ಮಾಡಿದ್ದಿ ಈ ಬಗ್ಗೆ ಗಣಪತಿ ಎಂಬವರು ನೀಡಿದ ಪುಕಾರಿಗೆ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ರಸ್ತೆ ಅಪಘಾತ ವೃದ್ದ ಸಾವು

            ವಿರಾಜಪೇಟೆ ತಾಲ್ಲೂಕು ಬಾಳೆಲೆ ಗ್ರಾಮದ ಬೀಳೂರು ಜಂಕ್ಷನ್ ಬಳಿ ವಾಹನ ಡಿಕ್ಕಿಯಾಗಿ ಅಪರಿಚಿತ ವ್ಯಕ್ತಿ ಸಾವಿಗೀಡಾಗಿರುವ ಘಟನೆ ನಡೆದಿದೆ. ದಿನಾಂಕ: 04-08-2019 ರಂದು ಯಾವುದೋ ವಾಹವನ್ನು ಅದರ ಚಾಲಕನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿ ವೃದ್ದರೊಬ್ಬರಿಗೆ ಡಿಕ್ಕಿಪಡಿಸಿರುವ ಪರಿಣಾಮ ತೀವ್ರವಾಗಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ  ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೇ ದಿನಾಂಕ: 21-08-2019 ರಂದು ಮೃತಪಟ್ಟಿದ್ದು ಈ ಬಗ್ಗೆ ಪೊನ್ನಂಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಹಲ್ಲೆ ಪ್ರಕರಣ

ದಿನಾಂಕ: 21-08-2019 ರಂದು ವಿರಾಜಪೇಟೆ ತಾಲ್ಲೂಕು ಸಿದ್ದಾಪುರದಲ್ಲಿ ವಿ.ಆರ್ ಪ್ರದೀಪ್ ಎಂಬವರಿಗೆ  ಕ್ಷುಲ್ಲಕ ಕಾರಣಕ್ಕೆ ಸುನಿಲ್ ಎಂಬುವರು ಕಲ್ಲಿನಿಂದ ಹೊಡೆದು ಗಾಯಪಡಿಸಿದ್ದು ಈ ಬಗ್ಗೆ ಪ್ರದೀಪ್ ರವರು ನೀಡಿದ ಪುಕಾರಿಗೆ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಕೊಲೆ ಯತ್ನ ಪ್ರಕರಣ

            ದಿನಾಂಕ: 20-08-2019 ರಂದು ವಿರಾಜಪೇಟೆ ತಾಲ್ಲೂಕು ತಿತಿಮತಿ ಗ್ರಾಮದ ಜಂಗಲಾಡಿ ಕಾಲೋನಿ ಎಂಬಲ್ಲಿ ಸುಬ್ರಮಣಿ ಎಂಬವರು ವೈಯಕ್ತಿಕ ವೈಷಮ್ಯದಿಂದ ಗೋಪಾಲ ಎಂಬವರಿಗೆ ಕತ್ತಿಯಿಂದ ಹಲ್ಲೆ ಮಾಡಿ ಕೊಲೆ ಮಾಡಲು ಪ್ರಯತ್ನಿಸಿದ್ದು ಈ ಬಗ್ಗೆ ಗೋಪಾಲರವರು ನೀಡಿದ ಪುಕಾರಿಗೆ ಪೊನ್ನಂಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.