Crime News

ನೇಣು ಬಿಗಿದುಕೊಂಡು ವ್ಯಕ್ತಿಯ ಆತ್ಮಹತ್ಯೆ:

ಜೀವನದಲ್ಲಿ ಜುಗುಪ್ಸೆಗೊಂಡು ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಟ್ಟೆಮಾಡು ಗ್ರಾಮದಿಂದ ವರದಿಯಾಗಿದೆ.  ಮಡಿಕೇರಿ ತಾಲೋಕು ಕಟ್ಟೆಮಾಡು ಗ್ರಾಮದ ನಿವಾಸಿ ಎನ್‍.ಸಿ. ಮಾದಪ್ಪ ಎಂಬವರ ಲೈನು ಮನೆಯಲ್ಲಿ ವಾಸವಾಗಿರುವ ಸುರೇಶ ಎಂಬವರ ಮಗ ಶ್ಯಾಮ್ ಎಂಬಾತ ಜೀವನದಲ್ಲಿ ಜುಗುಪ್ಸೆಗೊಂಡು ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು , ಈ ಬಗ್ಗೆ ಸುರೇಶನವರು ನೀಡಿದ ದೂರಿನ ಮೇರೆಗೆ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.