Crime News

ರಸ್ತೆ ಅಪಘಾತ

            ದಿನಾಂಕ: 30-08-2019 ರಂದು ಮಡಿಕೇರಿ ತಾಲ್ಲೂಕು ಜೋಡುಪಾಲ ಗ್ರಾಮದ ಬಳಿ ಮೈಸೂರು-ಬಂಟ್ವಾಳ ಹೆದ್ದಾರಿ ರಸ್ತೆಯಲ್ಲಿ ಕಾರನ್ನು ಚಾಲಕ ಸನತ್ ಕುಮಾರ್ ಶೆಟ್ಟಿ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ ಪರಿಣಾಮ ಕಾರು ರಸ್ತೆ ಬದಿಗೆ ಮಗುಚಿ ಬಿದ್ದುದರಿಂದ ಕಾರಿನಲ್ಲಿದ್ದ ನಂದಕುಮಾರ್ ಮತ್ತು ನಾಗರಾಜು ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ರಸ್ತೆ ಅಪಘಾತ , ವ್ಯಕ್ತಿ ಸಾವು           

  ದಿನಾಂಕ: 30-08-2019 ರಂದು ವಿರಾಜಪೇಟೆ ತಾಲ್ಲೂಕು ಕುಂದ ಗ್ರಾಮದ ರಸ್ತೆಯಲ್ಲಿ ಸತೀಶ್ ಎಂಬುವವರು ಬೈಕನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ ಪರಿಣಾಮ ರಸ್ತೆಯಲ್ಲಿ ಬಿದ್ದು ಗಾಯಗೊಂಡು ಮೃತಪಟ್ಟಿದ್ದು ಈ ಬಗ್ಗೆ ಮೃತನ ಸಹೋದರ ಮೋಹನ್ ಎಂಬವರು ನೀಡಿದ ದೂರಿನ ಮೇರೆ ಗೋಣಿಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.