Crime News

ಕಳವು ಪ್ರಕರಣ

            ದಿನಾಂಕ: 30-08-2019 ರಂದು ವಿರಾಜಪೇಟೆ ತಾಲ್ಲೂಕು ನೋಕ್ಯ ಸಿದ್ದಾಪುರ ಗ್ರಾಮದ ನಿವಾಸಿ ಶ್ರೀನಿವಾಸ್ ಎಂಬುವವರ ಮನೆಯ ಬಾಗಿಲನ್ನು ಯಾರೋ ಕಳ್ಳರು ಒಡೆದು ಮನೆಯೊಳಗೆ ಇಟ್ಟಿದ್ದ ಕೋವಿ ಮತ್ತು ಕೋವಿಯ ತೋಟಗಳನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ಗೋಣಿಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಹಲ್ಲೆ ಪ್ರಕರಣ            

ದಿನಾಂಕ: 26-08-2019 ರಂದು ವಿರಾಜಪೇಟೆ ತಾಲ್ಲೂಕು ಬೀರುಗ ಗ್ರಾಮದ ನಿವಾಸಿ ಬೊಳಕ ಎಂಬುವವರಿಗೆ ಅದೇ ಗ್ರಾಮದ ನಿವಾಸಿ ಜವಾನ ಎಂಬುವವರು ವೈಯಕ್ತಿಕ ಕಾರಣಕ್ಕೆ ಜಗಳ ಮಾಡಿ ಹಲ್ಲೆ ಮಾಡಿದ್ದು ಈ ಬಗ್ಗೆ ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.