Crime News

ರಸ್ತೆ ಅಪಘಾತ ಪ್ರಕರಣ

ದಿನಾಂಕ: 28-08-2019 ರಂದು ಸೋಮವಾರಪೇಟೆ ತಾಲ್ಲೂಕು ತ್ಯಾಗತ್ತೂರು ಗ್ರಾಮದ ರಸ್ತೆಯಲ್ಲಿ ರಜಾಕ್ ಎಂಬುವವರು ಅವರ ಆಟೋ ರಿಕ್ಷಾವನ್ನು ಅತಿವೇಗ ಮತ್ತು ಅಜಾಕರೂಕತೆಯಿಂದ ಚಾಲನೆ ಮಾಡಿದ ಪರಿಣಾಮ ಆಟೋ ರಿಕ್ಷಾ ನಿಯಂತ್ರಣ ಕಳೆದುಕೊಂಡು ಮಗುಚಿಬಿದ್ದ ಪರಿಣಾಮ ರಜಾಕ್ ಮತ್ತು ಅವರೊಂದಿಗೆ ಪ್ರಯಾಣಿಸುತ್ತಿದ್ದ ಅವರ ಪತ್ನಿ ಶ್ರೀಮತಿ ಉಮ್ಮಕುಲ್ಸ್ ಎಂಬುವವರಿಗೆ ಗಾಯವಾಗಿದ್ದು ಈ ಬಗ್ಗೆ ದಿನಾಂಕ: 01-09-2019 ರಂದು ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಅಸಹಜ ಸಾವು ಪ್ರಕರಣ

            ದಿನಾಂಕ: 31-08-2019 ರಂದು ವಿರಾಜಪೇಟೆ ತಾಲ್ಲೂಕು ಚೆನ್ನಯ್ಯನಕೋಟೆ ಹೊಳಮಾಳ ಗ್ರಾಮದ ನಿವಾಸಿ ಮೋಹನ್ ಎಂಬುವವರು ಕೆಲಸ ಮುಗಿಸಿ ಮನೆಗೆ ಬಂದು ಊಟ ಮಾಡಿ ಸ್ವಲ್ಪ ಸಮಯದ ನಂತರ ಎದೆನೋವು ಎಂದು ಹೇಳಿ ಅಸ್ವಸ್ಥಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದು ಈ ಬಗ್ಗೆ ಮೃತರ ಪತ್ನಿ ಶ್ರೀಮತಿ ಅಜಿತ ರವರು ನೀಡಿದ ದೂರಿನ ಮೇರೆ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ರಸ್ತೆ ಅಪಘಾತ ಪ್ರಕರಣ

ದಿನಾಂಕ: 31-08-2019 ರಂದು ಸೋಮವಾರಪೇಟೆ ತಾಲ್ಲೂಕು ಕುಶಾಲನಗರ ಪಟ್ಟಣದ ಬ್ಲೂಮೂನ್ ಸರ್ವಿಸ್ ಸ್ಟೇಷನ್ ಬಳಿ ಕೆಎ-12-ಎಲ್-5469 ರ ಬೈಕ್ ಸವಾರನು ಬೈಕನ್ನು ಅತಿವೇಗ ಮತ್ತು ಅಜಾಗರಕತೆಯಿಂದ ಚಾಲನೆ ಮಾಡಿ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ನಾರಾಯಣಸ್ವಾಮಿ ಎಂಬುವವರಿಗೆ ಡಿಕ್ಕಿಪಡಿಸಿದ ಪರಿಣಾಮ ಗಾಯಗೊಂಡಿದ್ದು ಈ ಬಗ್ಗೆ ಅವರ ಮಗ ರಾಮಮೂರ್ತಿ ಎಂಬುವವರು ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಅಸಹಜ ಸಾವು ಪ್ರಕರಣ

            ದಿನಾಂಕ: 01-09-2019 ರಂದು ಸೋಮವಾರಪೇಟೆ ಪಟ್ಟಣದ ಜನತಾ ಕಾಲೋನಿ ನಿವಾಸಿ ಅರುಣ ಎಂಬುವವರಿಗೆ ಮದ್ಯಪಾನ ಮಾಡುವ ಅಭ್ಯಾಸದಿಂದ ಅನಾರೋಗ್ಯವಿದ್ದು, ಮನೆಯ ಸ್ನಾನದ ಕೋಣೆಯಲ್ಲಿ ಅಸ್ವಸ್ಥರಾಗಿ ಬಿದ್ದಿದ್ದವರನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದುಕೊಂಡು ಹೋದಾಗ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದು ಈ ಬಗ್ಗೆ ಮೃತರ ಪತ್ನಿ ಶ್ರೀಮತಿ ಸುನಿತ ಎಂಬುವವರು ನೀಡಿದ ದೂರಿನ ಮೇರೆ ಸೋಮವಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಹಲ್ಲೆ ಪ್ರಕರಣ

            ದಿನಾಂಕ: 29-08-2019 ರಂದು ಸೋಮವಾರಪೇಟೆ ತಾಲ್ಲೂಕು ಹುಲುಸೆ ಗ್ರಾಮದ ನಿವಾಸಿ ಶ್ರೀಮತಿ ರೇಣುಕ ಎಂಬುವವರಿಗೆ ಅದೇ ಗ್ರಾಮದ ನಿವಾಸಿಗಳಾದ ತೋಟಪ್ಪ, ತೇಜಾವತಿ, ದಯಾನಂದ ಎಂಬುವವರು ಸಾಲದ ವಿಚಾರದಲ್ಲಿ ಜಗಳ ಮಾಡಿ ಅವಾಚ್ಯ ಪದಗಳಿಂದ ಬೈದು  ದೊಣ್ಣೆಯಿಂದ ಹಲ್ಲೆ ಮಾಡಿ ಅವರ ಮಗ ಮಣಿಕಂಠ ಎಂಬುವವರಿಗೆ ಸಹಾ ಬೆದರಿಕೆ ಹಾಕಿದ್ದು ಈ ಬಗ್ಗೆ ದಿನಾಂಕ: 01-09-2019 ರಂದು ಶ್ರೀಮತಿ ರೇಣುಕ ರವರು ನೀಡಿದ ಪುಕಾರಿನ ಮೇರೆ ಶನಿವಾರಸಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ರಸ್ತೆ ಅಪಘಾತ ಪ್ರಕರಣ

ದಿನಾಂಕ: 01-09-2019 ರಂದು ವಿರಾಜಪೇಟೆ ತಾಲ್ಲೂಕು ಬಿಟ್ಟಂಗಾಲ ಜಂಕ್ಷನ್ ಬಳಿ ಬಾಷಾ ಎಂಬುವವರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕೆಎ-01-ಹೆಚ್ಎನ್-1063 ರ ಬೈಕನ್ನು ಸವಾರನು ಅತಿವೇಗ ಮತ್ತು ಅಜಾಗರಕತೆಯಿಂದ ಚಾಲನೆ ಮಾಡಿ ಡಿಕ್ಕಿಪಡಿಸಿದ ಪರಿಣಾಮ ಗಾಯಗೊಂಡಿದ್ದು ಈ ಬಗ್ಗೆ ಸಲ್ಮಾನ್ ಎಂಬುವವರು ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಅಕ್ರಮ ವನ್ಯಜೀವಿ ಭೇಟೆ ಪ್ರಕರಣ            

ವಿರಾಜಪೇಟೆ ತಾಲ್ಲೂಕು ಪರಕಟಗೇರಿ ಗ್ರಾಮದ ಬ್ರಹ್ಮಗಿರಿ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ವನ್ಯಜೀವಿ ಯನ್ನು ಭೇಟೆಯಾಡಿ ಮಾಂಸ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಶ್ರೀಮಂಗಲ ಪೊಲೀಸರು ಪತ್ತೆ ಮಾಡಿ ಆರೋಪಿಗಳನ್ನು ದಸ್ತಗಿರಿ ಮಾಡಿರುತ್ತಾರೆ. ದಿನಾಂಕ: 30-08-2019 ರಂದು ಪ್ರಕರಟಗೇರಿ ಗ್ರಾಮದ ಮುತ್ತಪ್ಪ ಮತ್ತು ಸುಬ್ಬಯ್ಯ ಎಂಬುವವರು ಬ್ರಹ್ಮಗಿರಿ ಅರಣ್ಯ ಪ್ರದೇಶದೊಳಗೆ ಅಕ್ರಮ ಪ್ರವೇಶ ಮಾಡಿ ಕೋವಿಯಿಂದ ಗುಂಡು ಹೊಡೆದು ವನ್ಯಜೀವಿಯನ್ನು ಕೊಂದು ಮಾಂಸ ಮಾಡಿ ಕೆಎ-12-ಎನ್-1562 ನಂಬರಿನ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದಾಗ ಶ್ರೀಮಂಗಲ ಠಾಣೆ ಪಿಎಸ್ಐ ಮತ್ತು ಸಿಬ್ಬಂದಿಯವರು ಪ್ರಕರಣ ಪತ್ತೆ ಮಾಡಿ ಆರೋಪಿಗಳನ್ನು ದಸ್ತಗಿರಿ ಮಾಡಿದ್ದು ಈ ಬಗ್ಗೆ ದಿನಾಂಕ: 01-09-2019 ರಂದು ಶ್ರೀಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.