Crime News

ವ್ಯಕ್ತಿ ಆತ್ಮಹತ್ಯೆ

            ದಿನಾಂಕ: 03-09-2019 ರಂದು ವಿರಾಜಪೇಟೆ ತಾಲ್ಲೂಕು ತೋರ ಗ್ರಾಮದ ನಿವಾಸಿ ಲೋಹಿತ್ ಎಂಬುವವರು ಜೀವನದಲ್ಲಿ ಜಿಗುಪ್ಸೆಗೊಂಡು ಅವರು ವಾಸವಿದ್ದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ಮೃತನ ಸಹೋದರಿ ಶ್ರೀಮತಿ ವಾಣಿ ಎಂಬುವವರು ನೀಡಿದ ದೂರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಅಕ್ರಮ ಗಾಂಜಾ ಮಾರಾಟ ಪ್ರಕರಣ

            ದಿನಾಂಕ: 04-09-2019 ರಂದು ವಿರಾಜಪೇಟೆ ತಾಲ್ಲೂಕು ಬಾಳಾಜಿ ಗ್ರಾಮದ ಚೆನ್ನಂಗೊಲ್ಲಿ ಬಸ್ ತಗುದಾಣದ ಬಳಿ ಸಾರ್ವಜನಿಕರಿಗೆ  ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಗೋಣಿಕೊಪ್ಪ ನಗರದ 1 ನೇ ವಿಭಾಗದ ನಿವಾಸಿ ಮೋಹನ್ @ ಮಣಿ ಎಂಬುವವರನ್ನು ವಶಕ್ಕೆ ತೆಗೆದುಕೊಂಡು ಗೋಣಿಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುತ್ತಾರೆ.

ಅಸಹಜ ಸಾವು

            ವಿರಾಜಪೇಟೆತಾಲ್ಲೂಕು ಗೋಣಿಕೊಪ್ಪ ನಗರದಲ್ಲಿ ಗುಜರಿ ವಸ್ತುಗಳನ್ನು ಸಂಗ್ರಹಿಸುವ ಕೆಲಸ ಮಾಡಿಕೊಂಡಿದ್ದ ಕೃಷ್ಣ ಎಂಬುವವರು ದಿನಾಂಕ: 04-09-2019 ರಂದು  ಅರವತ್ತೊಕ್ಲು ರಸ್ತೆಯ ಅಬ್ದುಲ್ಲಾ ಎಂಬುವವರ ಗುಜರಿ ಅಂಗಡಿಯ ಪಕ್ಕದಲ್ಲಿ ಮಲಗಿದ್ದವರುಅನಾರೋಗ್ಯದಿಂದ ಅಸ್ವಸ್ಥಗೊಂಡು ಮೃತಪಟ್ಟಿದ್ದು ಈ ಬಗ್ಗೆ ಅಬ್ದುಲ್ಲಾ ರವರು ನೀಡಿದ ದೂರಿನ ಮೇರೆ ಗೋಣಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ರಸ್ತೆ ಅಪಘಾತ ಪ್ರಕರಣ           

ದಿನಾಂಕ: 02-09-2019 ರಂದು ಸೋಮವಾರಪೇಟೆ ತಾಲ್ಲೂಕು ಮುಳ್ಳೂರು ಗ್ರಾಮದ ಸಾರ್ವಜನಿಕ ರಸ್ತೆಯಲ್ಲಿ ಪ್ರದೀಪ್ ಎಂಬುವವರು ಚಾಲನೆ ಮಾಡಿಕೊಂಡು ಹೋಗುತ್ತಿದ್ದ ಬೈಕ್ ಗೆ ಎದುರುಗಡೆಯಿಂದ ಬಂದ ಪಿಕ್ ಅಪ್ ವಾಹನವನ್ನು ಅದರ ಚಾಲಕನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಪಡಿಸಿದ ಪರಿಣಾಮ ಕೆಳಗೆ ಬಿದ್ದು ಗಾಯಗೊಂಡಿದ್ದು, ಚಾಲಕನು ವಾಹನವನ್ನು ನಿಲ್ಲಿಸದೇ ಹೋಗಿದ್ದು ಈ ಬಗ್ಗೆ ಪ್ರದೀಪ್ ರವರು ನೀಡಿದ ಪುಕಾರಿಗೆ ಶನಿವಾರಸಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.