Crime News

ವ್ಯಕ್ತಿ ಆತ್ಮಹತ್ಯೆ

            ದಿನಾಂಕ: 06-09-2019 ರಂದು ವಿರಾಜಪೇಟೆ ತಾಲ್ಲೂಕು ಭದ್ರಗೊಳ ಗ್ರಾಮದ ಹೊಸಳ್ಳಿ ತೋಟದ ನಿವಾಸಿ ನಾಗರಾಜು ಎಂಬುವವರಿಗೆ ಮದ್ಯಸೇವನೆ ಅಭ್ಯಾಸವಿದ್ದು ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ಕ್ರಿಮಿನಾಶಕ ಸೇವಿಸಿ ಅಸ್ವಸ್ಥಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದು ಈ ಬಗ್ಗೆ ಮೃತನ ಪತ್ನಿ ಶ್ರೀಮತಿ ಜಯಮ್ಮ ಎಂಬುವವರು ನೀಡಿದ ದೂರಿನ ಮೇರೆ ಗೋಣಿಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಕಳವು ಪ್ರಕರಣ            

ದಿನಾಂಕ: 06-09-2019 ರಂದು ವಿರಾಜಪೇಟೆ ತಾಲ್ಲೂಕು ಕಣ್ಣಂಗಾಲ ಗ್ರಾಮದ ನಿವಾಸಿ ಶ್ರೀಮತಿ ರೇಣುಕ ಎಂಬುವವರ ಮನೆಯ ಬಾಗಿಲಿನ ಬೀಗವನ್ನು ಯಾರೋ ಕಳ್ಳರು ಮುರಿದು ಮನೆಯೊಳಗೆ ಕಪಾಟಿನಲ್ಲಿ ಇಟ್ಟಿದ್ದ 2,50,000 ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.