Crime News

ಹಲ್ಲೆ ಪ್ರಕರಣ

            ದಿನಾಂಕ: 13-09-2019 ರಂದು ಸೋಮವಾರಪೇಟೆ ತಾಲ್ಲೂಕು ಚಿಕ್ಕ ಬೆಟ್ಟಗೇರಿ ಗ್ರಾಮದ ನಿವಾಸಿ ಗ್ರಾಮ ಪಂಚಾಯತಿ ಸದಸ್ಯರಾದ ಶ್ರೀಮತಿ ಹೇಮಾವತಿ ಎಂಬುವವರಿಗೆ  ರಸೂಲ್ ಪುರ ನಿವಾಸಿ ಗಣೇಶ ಎಂಬುವವರು ರಸ್ತೆ ಕಾಮಗಾರಿ ವಿಚಾರದಲ್ಲಿ ಕೋವಿಯೊಂದಿಗೆ ಮನೆಯ ಬಳಿ ಬಂದು ಜಗಳ ಮಾಡಿ ಅವಾಚ್ಯ ಪದಗಳಿಂದ ಬೈದು ಬೆದರಿಕೆ ಹಾಕಿ ಹಲ್ಲೆ ಮಾಡಿದ್ದು ಈ ಬಗ್ಗೆ ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಹಲ್ಲೆ ಪ್ರಕರಣ

            ದಿನಾಂಕ: 12-09-2019 ರಂದು ಸೋಮವಾರಪೇಟೆ ತಾಲ್ಲೂಕು ದೊಡ್ಡ ಕಣಗಾಲು ಗ್ರಾಮದ ನಿವಾಸಿ ಮಲ್ಲಿಕಾರ್ಜುನ ಎಂಬುವವರಿಗೆ ಅದೇ ಗ್ರಾಮದ ನಿವಾಸಿ  ರವಿಕುಮಾರ್ ಎಂಬುವವರು ವೈಯಕ್ತಿಕ ವಿಚಾರದಲ್ಲಿ ಜಗಳ ಮಾಡಿ ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿದ್ದು ಈ ಬಗ್ಗೆ ಶನಿವಾರಸಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ರಸ್ತೆ ಅಪಘಾತ ಪ್ರಕರಣ          

  ದಿನಾಂಕ: 14-09-2019 ರಂದು ವಿರಾಜಪೇಟೆ ತಾಲ್ಲೂಕು ಚೆಂಬೆ ಬೆಳ್ಳೂರು ಗ್ರಾಮದ ಸಾರ್ವಜನಿಕ ರಸ್ತೆಯಲ್ಲಿ ಕೆಎ-12-ಜೆಡ್-8828 ರ ಕಾರಿನ ಚಾಲಕ ಮೊಸಿನ್ ಅಹಮ್ಮದ್ ಎಂಬುವವರು ಕಾರನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿ ಎದುರುಗಡೆಯಿಂದ ಬರುತ್ತಿದ್ದ ಕೆಎ-05- ಇವೈ-7344 ರ ಬೈಕ್ ಗೆ ಡಿಕ್ಕಿಪಡಿಸಿದ ಪರಿಣಾಮ ಬೈಕ್ ಸವಾರ ಕವನ್ ಮತ್ತು ಹಿಂಬದಿ ಸವಾರ ಮಂಜು ಎಂಬುವವರು ಕೆಳಗೆ ಬಿದ್ದು ಗಾಯಗೊಂಡವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಿದ್ದು ವೈದ್ಯರು ಪರೀಕ್ಷಿಸಿ ಬೈಕ್ ಸವಾರ ಕವನ್ ಎಂಬುವವರು ಮೃತಪಟ್ಟಿರುವುದಾಗಿ ತಿಳಿಸಿದ್ದು ಈ ಬಗ್ಗೆ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.