Crime News

ಅಕ್ರಮ ಜೂಜಾಟ ಪ್ರಕರಣ

            ದಿನಾಂಕ: 14-09-20149 ರಂದು ಮಡಿಕೇರಿ ತಾಲ್ಲೂಕು ಅಯ್ಯಂಗೇರಿ ಗ್ರಾಮದ ನಿಶಾ ಎಲೆಕ್ಟ್ರಿಕಲ್ಸ್ ಮೊಬೈಲ್ ಅಂಗಡಿಯಲ್ಲಿ ಕೇರಳ ರಾಜ್ಯದ ಲಾಟರಿ ಫಲಿತಾಂಶ ಆಧಾರಿಸಿ ಅಕ್ರಮವಾಗಿ ಲಾಟರಿ ಜೂಜಾಟವಾಡುತ್ತಿದ್ದ ಪ್ರಕರಣವನ್ನು ಭಾಗಮಂಡಲ ಪೊಲೀಸರು ಪತ್ತೆ ಮಾಡಿ ಅಯ್ಯಂಗೇರಿ ಗ್ರಾಮದ ನಿವಾಸಿಗಳಾದ ರಫೀಕ್, ಲತೀಫ್, ರಂಶೀದ್ ಎಂಬುವವವರ ವಿರುದ್ದ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿರುತ್ತಾರೆ.

ರಸ್ತೆ ಅಪಘಾತ, ವ್ಯಕ್ತಿ ಸಾವು

                ದಿನಾಂಕ: 14-09-2019 ರಂದುವಿರಾಜಪೇಟೆ ಗ್ರಾಮದ ಬಿಟ್ಟಂಗಾಲ ಗ್ರಾಮದ ಬಳಿ ಸಾರ್ವಜನಿಕ ರಸ್ತೆಯಲ್ಲಿ ಕಾರನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ರಸ್ತೆ ಬದಿಯಲ್ಲಿ ನಿಂತಿದ್ದ ಪೊನ್ನಪ್ಪ ಎಂಬುವವರಿಗೆ ಡಿಕ್ಕಿ ಪಡಿಸಿದ ಪರಿಣಾಮ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದಾಗ ವೈದ್ಯರು ಪರೀಕ್ಷಿಸಿ ಗಾಯಾಳು ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ. ಡಿಕ್ಕಿಪಡಿಸಿದ ನಂತರ ಚಾಲಕನು ಕಾರನ್ನು ನಿಲ್ಲಿಸದೇ ಹೋಗಿದ್ದು ಈ ಬಗ್ಗೆ ಮೃತರ ಮಗ ಸೋಮಯ್ಯ ಎಂಬುವವರು ನೀಡಿದ ಪುಕಾರಿಗೆ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಕಳವು ಪ್ರಕರಣ

                ವಿರಾಜಪೇಟೆ ತಾಲ್ಲೂಕು ಟಿ.ಶೆಟ್ಟಿಗೇರಿ ಗ್ರಾಮದ ನಿವಾಸಿ ಚಿಣ್ಣಪ್ಪ ಎಂಬುವವರ ಮನೆಯ ಬಾಗಿಲಿನ ಬೀಗವನ್ನು ಯಾರೋ ಕಳ್ಳರು ಮುರಿದು ಮನೆಯಲ್ಲಿದ್ದು 12,000 ರೂ. ಮೌಲ್ಯದ ಕಾಫಿಯನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದಿನಾಂಕ:15-09-2019ರಂದು ನೀಡಿದ ಪುಕಾರಿಗೆ ಶ್ರೀಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ರಸ್ತೆ ಅಪಘಾತ ಪ್ರಕರಣ          

   ದಿನಾಂಕ: 15-09-2019 ರಂದು ಸೋಮವಾರಪೇಟೆ ತಾಲ್ಲೂಕು ಹಂಡ್ಲಿ ಗ್ರಾಮದ ಸಾರ್ವಜನಿಕ ರಸ್ತೆಯಲ್ಲಿ ಕೆಎ-12-ಎನ್-2043 ರ ಕಾರನ್ನು ಚಾಲಕನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿ ಎದುರುಗಡೆಯಿಂದ ಬರುತ್ತಿದ್ದ ಕೆಎ-05-ಹೆಚ್ ಜೆ-2615 ರ ಬೈಕ್ ಗೆ ಡಿಕ್ಕಿಪಡಿಸಿದ ಪರಿಣಾಮ ಹಿಂಬದಿ ಸವಾರ ಹರೀಶ ಎಂಬುವವರು ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ಹ್ಯಾರಿಸ್ ಎಂಬುವವರು ನೀಡಿದ ಪುಕಾರಿನ ಮೇರೆ ಶನಿವಾರಸಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.