Crime News

ಅಪಘಾತ ಪ್ರಕರಣ 
           ಸ್ಕೂಟರಿಗೆ ಜೀಪು ಡಿಕ್ಕಿಯಾಗಿ ಗಾಯಗೊಂಡ ಘಟನೆ ಮಡಿಕೇರಿ ತಾಲೂಕಿನ ಕರ್ಣಂಗೇರಿ ಗ್ರಾಮದಲ್ಲಿ ವರದಿಯಾಗಿದೆ. ದಿನಾಂಕ 18-05-2018 ರಂದು ಮೈಸೂರಿನ ಕುವೆಂಪು ನಗರದ ನಿವಾಸಿ ಶಿವಕುಮಾರರವರು ಮಡಿಕೇರಿಯಿಂದ ಕರ್ಣಂಗೇರಿಗೆ ಸ್ಕೂಟರಿನಲ್ಲಿ ಹೋಗುತ್ತಿರುವಾಗ ಮೂರನೇ ಮೈಲು ಎಂಬಲ್ಲಿಗೆ ತಲುಪುವಾಗ ಎದುರುಗಡೆಯಿಂದ ಜಿಪ್ಸಿ ಜೀಪನ್ನು ಅದರ ಚಾಲಕ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಸ್ಕೂಟರಿಗೆ ಡಿಕ್ಕಿಪಡಿಸಿದ ಪರಿಣಾಮ ಶಿವಕುಮಾರರವರಿಗೆ ಗಾಯವಾಗಿದ್ದು ಈ ಬಗ್ಗೆ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
 
ಕಳವು ಪ್ರಕರಣ 
           ಮನೆಯ ಬೀಗ ಮುರಿದು ಚಿನ್ನಾಭರಣಗಳನ್ನು ಕಳವು ಮಾಡಿರುವ ಘಟನೆ ಸೋಮವಾರಪೇಟೆ ತಾಲೂಕಿನ ತಣ್ಣೀರಹಳ್ಳ ಗ್ರಾಮದಲ್ಲಿ ವರದಿಯಾಗಿದೆ. ತಣ್ಣೀರಹಳ್ಳ ಗ್ರಾಮದ ನಿವಾಸಿಯಾದ ಜಯಮ್ಮ ಎಂಬುವವರು ದಿನಾಂಕ 15-05-2018 ರಂದು ಮನೆಗೆ ಬೀಗ ಹಾಕಿ ಕುಶಾಲನಗರದಲ್ಲಿರುವ ಮಗಳ ಮನೆಗೆ ಹೋಗಿದ್ದು ಈ ಸಮಯದಲ್ಲಿ ಯಾರೋ ಕಳ್ಳರು ಮನೆಯ ಬೀಗ ಮುರಿದು ಒಳನುಗ್ಗಿ ಬೀರುವಿನಲ್ಲಿ ಇಟ್ಟಿದ್ದ ಅಂದಾಜು ಒಂದು ಲಕ್ಷ ಬೆಲೆಯ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ಜಯಮ್ಮನವರು ದಿನಾಂಕ 19-05-2018 ರಂದು ನೀಡಿದ ದೂರಿನ ಮೇರೆಗೆ ಸೋಮವಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುತ್ತಾರೆ.
ಪಾದಚಾರಿಗೆ ಕಾರು ಡಿಕ್ಕಿ 
              ಪಾದಚಾರಿಗೆ ಕಾರು ಡಿಕ್ಕಿಯಾಗಿ ಗಾಯಗೊಂಡ ಘಟನೆ ಕುಶಾಲನಗರದಲ್ಲಿ ವರದಿಯಾಗಿದೆ. ಕುಶಾಲನಗರದ ಕೂಡುಮಂಗಳೂರುವಿನ ನಿವಾಸಿಯಾದ ಶಿವಲಿಂಗರವರು ದಿನಾಂಕ 18-05-2018 ರಂದು ತನ್ನ ಸಂಸಾರದೊಂದಿಗೆ ಬೈಚನಹಳ್ಳಿಯಲ್ಲಿರುವ ಬಾವನ ಮನೆಗೆ ಹೋಗಿ ವಾಪಾಸ್ಸು ಸಮಯ ರಾತ್ರಿ 10-35 ಗಂಟೆಗೆ ಕುಶಾಲನಗರದ ಬಸ್ಸು ನಿಲ್ದಾಣದ ಕಡೆ ನಡೆದುಕೊಂಡು ಹೋಗುತ್ತಿರುವಾಗ ಅಥಿತಿ ಹೊಟೆಲ್ ಹತ್ತಿರ ತಲುಪುವಾಗ ಕಾರನ್ನು ಅದರ ಚಾಲಕ ಕುಶಾಲನಗರದ ನಿವಾಸಿಯಾದ ಮಂಜುನಾಥರವರು ಅಜಾಗರೂಕತೆಯಿಂದ ಚಾಲನೆ ಮಾಡಿ ನಡೆದುಕೊಂಡು ಹೋಗುತ್ತಿದ್ದ ಶಿವಲಿಂಗರವರ ಮಗಳು ಇಂಚರಳಿಗೆ ಡಿಕ್ಕಿ ಪಡಿಸಿದ ಪರಿಣಾಮ ಇಂಚರಳಿಗೆ ಗಾಯವಾಗಿದ್ದು, ಈ ಬಗ್ಗೆ ಕುಶಾಲನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ವ್ಯಕ್ತಿಯ ಆತ್ಮಹತ್ಯೆ 
            ವ್ಯಕ್ತಿಯೊಬ್ಬರು ಜೀವನದಲ್ಲಿ ಜುಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿರಾಜಪೇಟೆಯ ಚಿಕ್ಕಪೇಟೆ ಎಂಬಲ್ಲಿ ವರದಿಯಾಗಿದೆ. ಬೇಟೋಳಿ ಗ್ರಾಮದ ನಿವಾಸಿಯಾದ ರಾಮಚಂದ್ರರವರು ಜೀವನದಲ್ಲಿ ಜುಗುಪ್ಸೆಗೊಂಡು ದಿನಾಂಕ 19-05-2018 ರಂದು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು ಈ ಬಗ್ಗೆ ಮಗ ಶ್ರೀನಿವಾಸರವರು ನೀಡಿದ ದೂರಿನ ಮೇರೆಗೆ ವಿರಾಜಪೇಟೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಅಪಘಾತ ಪ್ರಕರಣ 
           ಸ್ಕೂಟರಿಗೆ ಜೀಪು ಡಿಕ್ಕಿಯಾಗಿ ಗಾಯಗೊಂಡ ಘಟನೆ ವಿರಾಜಪೇಟೆ ನಗರದಲ್ಲಿ ವರದಿಯಾಗಿದೆ. ದಿನಾಂಕ 17-05-2018 ರಂದು ವಿರಾಜಪೇಟೆ ತಾಲೂಕಿನ ಕೋಣಂಗಾಲ ಗ್ರಾಮದ ನಿವಾಸಿಯಾದ ನಾಚಪ್ಪನವರು ತನ್ನ ತಂದೆ ಲತೇಶ್ ರವರೊಂದಿಗೆ ಸ್ಕೂಟರಿನಲ್ಲಿ ವಿರಾಜಪೇಟೆಗೆ ಸಂಬಂದಿಕರ ಮದುವೆಗೆ ಹೋಗಿ ವಾಪಾಸ್ಸು ಮನೆಗೆ ಹೋಗುತ್ತಿದ್ದಾಗ ಚಿಕ್ಕಪೇಟೆ ಜಂಕ್ಷನ್ ತಲುಪುವಾಗ ಎದುರುಗಡೆಯಿಂದ ಬೊಲೆರೋ ಪಿಕ್ ಅಪ್ ಜೀಪನ್ನು ಅದರ ಚಾಲಕ ರಘು ಎಂಬುವವರು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಸ್ಕೂಟರಿಗೆ ಡಿಕ್ಕಿಪಡಿಸಿದ ಪರಿಣಾಮ ಸ್ಕೂಟರಿನ ಹಿಂಭಾಗದಲ್ಲಿ ಕುಳಿತ್ತಿದ್ದ ಲತೇಶ್ ರವರ ತಲೆಗೆ ಗಾಯವಾಗಿದ್ದು, ಲತೇಶ್ ರವರನ್ನು ಚಿಕಿತ್ಸೆಯ ಬಗ್ಗೆ ಮೈಸೂರಿನ ನಾರಾಯಣ ಆಸ್ಪತ್ರೆಗೆ ದಾಖಲಿಸಿದ್ದು, ನಾಚಪ್ಪನವರು ನೀಡಿದ ದೂರಿನ ಮೇರೆಗೆ ವಿರಾಜಪೇಟೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Leave a Reply

Your email address will not be published.