Crime News
ವ್ಯಕ್ತಿ ಆತ್ಮಹತ್ಯೆ
ದಿನಾಂಕ: 16-09-2019 ರಂದುಸೋಮವಾರಪೇಟೆ ತಾಲ್ಲೂಕು ಸಂಪಿಗೆದಾಳು ಗ್ರಾಮದ ನಿವಾಸಿ ಮಂಜುನಾಥ ಎಂಬುವವರು ಹಲವು ವರ್ಷಗಳಿಂದ ಅನಾರೋಗ್ಯವಿದ್ದು ಗುಣಮುಖವಾಗದೇ ಇದ್ದುದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಈ ಬಗ್ಗೆ ಮೃತರ ಸಂಬಂದಿಕರಾದ ಕುಮಾರ್ ಎಂಬುವವರು ನೀಡಿದ ದೂರಿನ ಮೇರೆ ಶನಿವಾರಸಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಕಳವು ಪ್ರಕರಣ
ದಿನಾಂಕ: 16-09-2019 ರಂದು ಸೋಮವಾರಪೇಟೆ ತಾಲ್ಲೂಕು ಕೂಗೂರು ಗ್ರಾಮದ ನಿವಾಸಿ ಕುಮಾರಪ್ಪ ಎಂಬುವವರ ಮನೆಯ ಬಾಗಿಲಿನ ಬೀಗವನ್ನು ಯಾರೋ ಕಳ್ಳರು ಮುರಿದು ಮನೆಯೊಳಗೆ ಇಟ್ಟಿದ್ದ 3 ಲಕ್ಷ ರೂ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ಶನಿವಾರಸಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.