Crime News

ಹಲ್ಲೆ ಪ್ರಕರಣ            

                ದಿನಾಂಕ: 16-09-2019 ರಂದುಸೋಮವಾರಪೇಟೆ ತಾಲ್ಲೂಕು ಕಿರಿಕೊಡ್ಲಿ ಗ್ರಾಮದ ನಿವಾಸಿ ಪ್ರಸನ್ನ ಎಂಬುವವರು ಅವರ ಮನೆಯ ಬಳಿ ಸ್ನೇಹಿತರೊಂದಿಗೆ ಮಾತನಾಡಿಕೊಂಡಿರುವಾಗ ಪ್ರವೀಣಾಚಾರಿ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಅವಾಚ್ಯ ಪದಗಳಿಂದ ಬೈದು ಕತ್ತಿಯಿಂದ ಹಲ್ಲೆ ಮಾಡಿ ಗಾಯಗೊಳಿಸಿದ್ದು ಈ ಬಗ್ಗೆ ಶನಿವಾರಸಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ರಸ್ತೆ ಅಪಘಾತ ಪ್ರಕರಣ

                ದಿನಾಂಕ: 16-09-2019 ರಂದು ಸೋಮವಾರಪೇಟೆ ತಾಲ್ಲೂಕು ಚಿಕ್ಕಾಕುಂದ ಗ್ರಾಮದ ಬಳಿ ಸಾರ್ವಜನಿಕ ರಸ್ತೆಯಲ್ಲಿ ಕೆಎ-13-ಬಿ- 6425 ರ ಪಿಕ್ ಅಪ್ ವಾಹನವನ್ನು ಚಾಲಕ ಫಿರೋಜ್ ಖಾನ್ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ್ದರಿಂದ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಮಗುಚಿ ಬಿದ್ದ ಪರಿಣಾಮ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಸಲ್ಮಾನ್ ಎಂಬುವವರು ಮೃತಪಟ್ಟಿದ್ದು ಈ ಬಗ್ಗೆ ಚೆಸ್ಕಾಂ ಇಂಜಿನಿಯರ್ ಮನುಕುಮಾರ್ ಎಂಬುವವರು ನೀಡಿದ ಪುಕಾರಿನ ಮೇರೆ ಶನಿವಾರಸಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ವ್ಯಕ್ತಿ ಆತ್ಮಹತ್ಯೆ

                ದಿನಾಂಕ: 17-09-2019 ರಂದು ಮಡಿಕೇರಿ ನಗರದ ಕನ್ನಂಡಬಾಣೆ ನಿವಾಸಿ ಸೋಮಯ್ಯ ಎಂಬುವವರು ಅನಾರೋಗ್ಯವಿದ್ದುದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಈ ಬಗ್ಗೆ ಮೃತರ ಮಗ ಗೌತಮ್ ಎಂಬುವವರು ನೀಡಿದ ದೂರಿನ ಮೇರೆ ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಅಕ್ರಮ ಗಾಂಜಾ ಪ್ರಕರಣ            

    ಮಡಿಕೇರಿ ತಾಲ್ಲೂಕಿನ ಬೆಟ್ಟಗೇರಿ ಗ್ರಾಮದ ನಿವಾಸಿ ಮೋಹನ್ ಎಂಬುವವರು ಅವರ ವಾಸದ ಮನೆಯ ಬಳಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿರುವುದನ್ನು ಮಡಿಕೇರಿ ಗ್ರಾಮಾಂತರ ವೃತ್ತ ನಿರೀಕ್ಷಕರವರಾದ ಶ್ರೀ ಅನೂಪ್ ಮಾದಪ್ಪ ರವರು ಪತ್ತೆ ಮಾಡಿದ್ದು ಈ ಬಗ್ಗೆ ದಿನಾಂಕ: 17-09-2019 ರಂದು ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.