Crime News

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 20-09-2019 ರಂದು ಸೋಮವಾರಪೇಟೆ ತಾಲ್ಲೂಕು ಹೆಬ್ಬಾಲೆ ಗ್ರಾಮದ ಬಳಿ ಹೆದ್ದಾರಿ ರಸ್ತೆಯಲ್ಲಿ ಕೆಎ-13 ಎಫ್-2000 ರ ಕೆ.ಎಸ್.ಆರ್.ಟಿ .ಸಿ ಬಸ್ ಚಾಲಕ ವೆಂಕಟೇಗೌಡ ಎಂಬುವವರು ಬಸ್ಸನ್ನು ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿ ಕೆಎ-09-ವೈ-2153 ರ ಬೈಕ್ ಗೆ ಡಿಕ್ಕಿಪಡಿಸಿದ ಪರಿಣಾಮ ಬೈಕ್ ನಲ್ಲಿದ್ದ ಸಚಿನ್ ರವಿ, ನಿತೀಶ್ ಎಂಬುವವರು ಕೆಳಗೆ ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ಯೋಗೇಶ್ ಎಂಬುವವರು ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ರಸ್ತೆ ಅಪಘಾತ ಪ್ರಕರಣ

                ದಿನಾಂಕ: 20-09-2019 ರಂದು ವಿರಾಜಪೇಟೆ ತಾಲ್ಲೂಕು ಬಾಡಗ ಬಾಣಂಗಾಲ ಗ್ರಾಮದ ಬಳಿ ಸಾರ್ವಜನಿಕ ರಸ್ತೆಯಲ್ಲಿ ಕೆಎ-12-ಎ-8834 ರ ಪಿಕ್ ಅಪ್ ಜೀಪನ್ನು ಚಾಲಕ ಜನಾರ್ಧನ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ . ಸಿ ಬಸ್ ಗೆ ಡಿಕ್ಕಿ ಪಡಿಸಿದ ಪರಿಣಾಮ ವಾಹನಗಳೆರಡೂ ಜಖಂಗೊಂಡು ಬಸ್ ಚಾಲಕ ಜೋಯಪ್ಪಹಾಗೂ ಜೀಪಿನಲ್ಲಿದ್ದ ಜನಾರ್ಧನ  ಹಾಗೂ ಮಣಿ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ಸಿದ್ದಾಪುರ ಠಾಣೆಯಲ್ಲಿ ಪ್ರಕಣ ದಾಖಲಾಗಿರುತ್ತದೆ.

ವೈದ್ಯರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ

            ದಿನಾಂಕ: 19-09-2019 ರಂದು ಸೋಮವಾರಪೇಟೆ ತಾಲ್ಲೂಕು ಕುಶಾಲನಗರ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಯೋಗೇಶ್ ಮತ್ತು ಮಹೇಶ್ ಎಂಬುವವರು ಹೋಗಿ ಅನಾವಶ್ಯಕವಾಗಿ  ಜಗಳ ಮಾಡಿ ಕರ್ತವ್ಯದಲ್ಲಿದ್ದ ವೈದ್ಯಾಧಿಕಾರಿಯವರಿಗೆ ಹಾಗೂ ಆಸ್ಪತ್ರೆ ಸಿಬ್ಬಂದಿಯವರಿಗೆ ಅವಾಚ್ಯ ಪದಗಳಿಂದ ಬೈದು ಆಸ್ಪತ್ರೆಯ ಬಾಗಿಲಿನ ಗಾಜುಗಳನ್ನು ಒಡೆದು  ಹಾಕಿ ವೈದ್ಯರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು ಈ ಬಗ್ಗೆ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಯವರು ನೀಡಿದ ಪುಕಾರಿನ ಮೇರೆ ಕುಶಾಲನಗರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.