Crime News

ಹಲ್ಲೆ ಪ್ರಕರಣ

ದಿನಾಂಕ: 22-09-2019 ರಂದು ವಿರಾಜಪೇಟೆ ತಾಲ್ಲೂಕು ಮಾಲ್ದಾರೆ ಗ್ರಾಮದ ದೊಡ್ಡಹಡ್ಲು ನಿವಾಸಿ ಉಮೇಶ್ ಎಂಬುವವರು ಮನೆಗೆ ಹೋಗುತ್ತಿರುವಾಗ ಅದೇ ಗ್ರಾಮದ ನಿವಾಸಿಗಳಾದ ಜಡೆ @ ಚಂದ್ರ ಮತ್ತು ದಿನೇಶ್ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಅವಾಚ್ಯ ಪದಗಳಿಂದ ಬೈದು ಕತ್ತಿಯಿಂದ ಹಲ್ಲೆ ಮಾಡಿ ಗಾಯಗೊಳಿಸಿದ್ದು ಈ ಬಗ್ಗೆ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಅಪರಿಚಿತ ವ್ಯಕ್ತಿ ಸಾವು                

ದಿನಾಂಕ: 21-09-2019 ರಂದು ವಿರಾಜಪೇಟೆ ತಾಲ್ಲೂಕು ಗೋಣಿಕೊಪ್ಪ ಬಸ್ ನಿಲ್ದಾಣದಲ್ಲಿ ಮಲಗಿದ್ದ ಅಂದಾಜು 55 ರಿಂದ 60 ವರ್ಷ ಪ್ರಾಯದ ಅಪರಿಚಿತ ಪುರುಷರೊಬ್ಬರು ಅನಾರೋಗ್ಯದಿಂದ ಮೃತಪಟ್ಟಿದ್ದು ಈ ಬಗ್ಗೆ ಸಚಿನ್ ಎಂಬುವವರು ನೀಡಿದ ದೂರಿನ ಮೇರೆ ಗೋಣಿಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.