Crime News

ಹಲ್ಲೆ ಪ್ರಕರಣ

            ದಿನಾಂಕ: 23-09-2019 ರಂದು ಸೋಮವಾರಪೇಟೆ ಪಟ್ಟಣದ ಮಾರುಕಟ್ಟೆ ಬಳಿ ಕುಮಾರಳ್ಳಿ ಗ್ರಾಮದ ನಿವಾಸಿ ಪ್ರಸನ್ನ ಎಂಬುವವರಿಗೆ ಕೂಡು ರಸ್ತೆ ನಿವಾಸಿ ಲಿಂಗರಾಜು ಎಂಬುವವರು ಹಳೆ ವೈಷಮ್ಯದಿಂದಹಲ್ಲೆ ಮಾಡಿ ಗಾಯಗೊಳಿಸಿದ್ದು ಈ ಬಗ್ಗೆ ಸೋಮವಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 23-09-2019 ರಂದು ಕುಶಾಲನಗರ ಪಟ್ಟಣದ ಫಾತಿಮ ಕಾನ್ವೆಂಟ್ ಬಳಿ ಹೆದ್ದಾರಿ ರಸ್ತೆಯಲ್ಲಿ ಮಧು ಎಂಬುವವರು ಆಟೋ ರಿಕ್ಷಾವನ್ನು ಅಜಾಗರೂಕತೆಯಿಂದ ಚಾಲನೆ ಮಾಡಿ ಕೆಎ-05-ಎಂಎಂ-3676 ರ ಕಾರಿಗೆ ಡಿಕ್ಕಿಪಡಿಸಿದ್ದರಿಂದ ರಿಕ್ಷಾ ಚಾಲಕ ರಸ್ತೆಗೆ ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ಕಾರು ಚಾಲಕ ಅಪ್ಪಯ್ಯ ಎಂಬುವವರು ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಅಕ್ರಮ ಜೂಜಾಟ ಪ್ರಕರಣ

            ದಿನಾಂಕ: 23-09-2019 ರಂದು ವಿರಾಜಕಪೇಟೆ ಪಟ್ಟಣದ ತೆಲುಗರ ಬೀದಿ ಜಂಕ್ಷನ್ ಸಾರ್ವಜನಿಕ ಬಸ್ ತಂಗುದಾಣದ ಬಳಿ ಅಕ್ರಮವಾಗಿ ಇಸ್ಪೀಟ್ ಜೂಜಾಟವಾಡುತ್ತಿದ್ದ ಪ್ರಕರಣವನ್ನು ವಿರಾಜಪೇಟೆ ನಗರ ಠಾಣೆ ಪೊಲೀಸರು ಪತ್ತೆ ಮಾಡಿ  ದಿಲೀಪ್, ಸುನಿಲ್ ಜೋಸೆಫ್, ಗುರುಮಣಿ, ಮೋಹನ್ ಎಂಬುವವರ ವಿರುದ್ದ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿರುತ್ತಾರೆ.

ರಸ್ತೆ ಅಪಘಾತ ಪ್ರಕರಣ

ದಿನಾಂಕ: 23-09-2019 ರಂದು ವಿರಾಜಪೇಟೆ ತಾಲ್ಲೂಕು ಪೂಜೆಕಲ್ಲು ಗ್ರಾಮದ ಬಳಿ ಸಾರ್ವಜನಿಕ ರಸ್ತೆಯಲ್ಲಿ ಕೆಎ-12-ಎಂ-2884 ರ ಜೀಪನ್ನು ಚಾಲಕ ಬೋಪಣ್ಣ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-12-ಎಸ್-2395 ರ ಬೈಕ್ ಗೆ ಡಿಕ್ಕಿಪಡಿಸಿದ ಪರಿಣಾಮ ಬೈಕ್ ಸವಾರ ಅಕ್ಷಯ ಮತ್ತು ಹಿಂಬದಿ ಸವಾರ ಹರೀಶ ಎಂಬುವವರು ಕೆಳಗ ಬಿದ್ದು ಗಾಯಗೊಂಡಿದ್ದು, ಈ ಬಗ್ಗೆ ಕುಟ್ಟ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಕಳವು ಪ್ರಕರಣ            

ವಿರಾಜಪೇಟೆ ತಾಲ್ಲೂಕು ಕಡಂಗ ಮರೂರು ಗ್ರಾಮದ ನಿವಾಸಿ ಶ್ರೀಮತಿ ಉಷಾ ಎಂಬುವವರ ಮನೆಗೆ ಮನೆ ಕೆಲಸಕ್ಕಾಗಿ ಬರುತ್ತಿದ್ದ ಮಹಿಳೆಯೊಬ್ಬರು ಮನೆಯ ಕಪಾಟಿನಲ್ಲಿ ಇಟ್ಟಿದ್ದ 76,600 ರೂ ಬೆಲೆಬಾಳುವ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ದಿನಾಂಕ: 23-09-2019 ರಂದು ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.