Crime News

ರಸ್ತೆ ಅಪಘಾತ ಪ್ರಕರಣ

ದಿನಾಂಕ: 01-10-2019 ರಂದು ವಿರಾಜಪೇಟೆ ತಾಲ್ಲೂಕು ಹುದಿಕೇರಿ ಗ್ರಾಮದ ಬಳಿ ಸಾರ್ವಜನಿಕ ರಸ್ತೆಯಲ್ಲಿ ಒಂದು ಕಾರನ್ನು ಚಾಲಕನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿ ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಹುದಿಕೇರಿ ಗ್ರಾಮದ ನಿವಾಸಿ ಚುಂಡೆ ಎಂಬುವವರಿಗೆ ಡಿಕ್ಕಿಪಡಿಸಿದ ಪರಿಣಾಮ ಕೆಳಗೆ ಬಿದ್ದುಗಾಯಗೊಂಡಿದ್ದು, ಕಾರನ್ನು ಚಾಲಕನು ನಿಲ್ಲಿಸದೇ ಹೋಗಿದ್ದು  ಈ ಬಗ್ಗೆ ಗಾಯಾಳು ಚುಂಡೆ ರವರು ನೀಡಿದ ಪುಕಾರಿನ ಮೇರೆ ಶ್ರೀಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಅಪರಿಚಿತ ವ್ಯಕ್ತಿ ಸಾವು

            ದಿನಾಂಕ: 02-10-2019 ರಂದು ವಿರಾಜಪೇಟೆ  ಪಟ್ಟಣದ ಎಫ್.ಎಂ.ಸಿ ರಸ್ತೆಯ ಬದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿರುತ್ತದೆ. ಪಟ್ಟಣ ಪಂಚಾಯತಿಯ ಸಿಬ್ಬಂದಿಯವರು ರಸ್ತೆಬದಿ ಸ್ಚಚ್ಚತಾ ಕಾರ್ಯ ಮಾಡುತ್ತಿರುವಾಗ ಚರಂಡಿ ಬದಿಯಲ್ಲಿ ಒಬ್ಬ ವ್ಯಕ್ತಿ ಇದ್ದುದನ್ನು ಗಮನಿಸಿ ಆತನನ್ನು ಎಚ್ಚರಿಸಲು ಪ್ರಯತ್ನಿಸಿದಾಗ ಮೃತಪಟ್ಟಿರುವುದು ತಿಳಿದುಬಂದಿರುತ್ತದೆ. ಮೃತ ವ್ಯಕ್ತಿಯು ಸ್ಥಳಿಯವಾಗಿ ಯಾರಿಗೂ ಪರಿಚಯವಿಲ್ಲದೇ ಇದ್ದು ನೀಲಿ ಬಣ್ಣದ ಶರ್ಟ್ ಹಾಗೂ ನೀಲಿ ಬಣ್ಣದ ಲುಂಗಿ ಧರಿಸಿದ್ದು ವಿಳಾಸ ತಿಳಿದುಬಂದಿರುವುದಿಲ್ಲ. ಈ ಬಗ್ಗೆ ಮೋಹನ್ ಕುಮಾರ್ ಎಂಬುವವರು ನೀಡಿದ ದೂರಿನ ಮೇರೆ ವಿರಾಜಪೇಟೆ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ            

ದಿನಾಂಕ: 02-10-2019 ರಂದು ವಿರಾಜಪೇಟೆ ತಾಲ್ಲೂಕುಅಂಬಟ್ಟಿ ಗ್ರಾಮದ ಬಳಿ ವಿರಾಜಪೇಟೆಗೋಣಿಕೊಪ್ಪ ಮುಖ್ಯರಸ್ತೆಯಲ್ಲಿ ಶ್ರೀಮತಿ ಕೌಶಿ ಕಾವೇರಮ್ಮ ಎಂಬುವವರು ಕೆಎ-12-ಎಂ– 6684 ರಕಾರನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ ಪರಿಣಾಮ ಕಾರು ನಿಯಂತ್ರಣ ತಪ್ಪಿ ಕಾಫಿ ತೋಟದ ಗುಂಡಿಯೊಳಗೆ ಬಿದ್ದ ಪರಿಣಾಮ ಚಾಲಕಿ ಹಾಗೂ ಕಾರಿನಲ್ಲಿದ್ದ ಅವರ ಮಗ ಗಾಯಗೊಂಡಿದ್ದು ಈ ಬಗ್ಗೆ ಕಾರ್ಯಪ್ಪ ಎಂಬುವವರು ನೀಡಿದ ದೂರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.