Crime News

ಜೀಪು ಡಿಕ್ಕಿ – ಪಾದಚಾರಿಗೆ ಗಾಯ

            ದಿನಾಂಕ: 20-10-2019 ರಂದು ರಾತ್ರಿ 10.30 ಗಂಟೆಗೆ ಸೋಮವಾರಪೇಟೆ ತಾಲ್ಲೂಕು ಕೂಡಿಗೆ ಗ್ರಾಮದ ಬಳಿ ಹೆದ್ದಾರಿ ರಸ್ತೆಯಲ್ಲಿ ಕೆಎ-29-8131 ರ ಜೀಪನ್ನು ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಶಿರಂಗಾಲ ಗ್ರಾಮದ ನಿವಾಸಿ ಶಿವಣ್ಣ ಎಂಬುವವರಿಗೆ ಡಿಕ್ಕಿಪಡಿಸಿದ ಪರಿಣಾಮ ಗಾಯಗೊಂಡಿದ್ದು , ಚಾಲಕನು ಜೀಪನ್ನು ನಿಲ್ಲಿಸದೇ ಹೋಗಿದ್ದು ಈ ಬಗ್ಗೆ ಅವರ ಪತ್ನಿ ಶ್ರೀಮತಿ ಮಂಜುಳ ಎಂಬುವವರು ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಆಕಸ್ಮಿಕ ಸಾವು

            ದಿನಾಂಕ:20-10-2019 ರಂದು ಮಡಿಕೇರಿ ನಗರದ ಜಯನಗರ ನಿವಾಸಿ ಸಂತೋಷ್ ಎಂಬುವವರು ಮನೆಯಲ್ಲಿ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದು ಈ ಬಗ್ಗೆ ಮೃತರ ಪತ್ನಿ ಶ್ರೀಮತಿ ಸವಿತಾ ಎಂಬುವವರು ನೀಡಿದ ದೂರಿನ ಮೇರೆ ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

            ದಿನಾಂಕ:16-10-2019 ರಂದು ಸೋಮವಾರಪೇಟೆ ತಾಲ್ಲೂಕು ಶಿವಪುರ ನಿವಾಸಿ ಮಹೇಂದ್ರ ಎಂಬುವವರು ಮದ್ಯಸೇವನೆ ಅಭ್ಯಾಸದಿಂದ ಜೀವನದಲ್ಲಿ ಜಿಗುಪ್ಸೆಗೊಂಡು  ವಿಷ ಸೇವನೆ ಮಾಡಿ ಅಸ್ವಸ್ಥಗೊಂಡಿದ್ದವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೇ ದಿನಾಂಕ: 21-10-2019 ರಂದು ಮೃತಪಟ್ಟಿದ್ದು ಈ ಬಗ್ಗೆ ಮೃತರ ಸಹೋದರ ಗಜೇಂದ್ರ ಎಂಬುವವರು ನೀಡಿದ ದೂರಿನ ಮೇರೆ ಶನಿವಾರಸಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ರಸ್ತೆ ಅಪಘಾತ

            ದಿನಾಂಕ: 20-10-2019 ರಂದು ಸೋಮವಾರಪೇಟೆ ತಾಲ್ಲೂಕು ಹರದೂರು ಗ್ರಾಮದ ಬಳಿ ಸಾರ್ವಜನಿಕ ರಸ್ತೆಯಲ್ಲಿ ಕೆಎ-12-ಜೆ-1425 ರ ಬೈಕನ್ನು ಸವಾರ ಜಾನ್ ಪೌಲ್ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿದ್ದರಿಂದ ನಿಯಂತ್ರಣ ತಪ್ಪಿ ಎದುರುಗಡೆಯಿಂದ ಬರುತ್ತಿದ್ದ ಕೆಎ-05-ಎಂಎ-5014 ರ ಕಾರಿಗೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಾಯಗೊಂಡಿದ್ದು ಈ ಬಗ್ಗೆ ಅಶ್ರಫ್ ಎಂಬುವವರು ನೀಡಿದ ಪುಕಾರಿನ ಮೇರೆ ಸುಂಟಿಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.