Crime News

ಕರ್ತವ್ಯಕ್ಕೆ ಅಡ್ಡಿ, ಪ್ರಕರಣ ದಾಖಲು

            ದಿನಾಂಕ: 04-11-2019 ರಂದು ಗೋಣಿಕೊಪ್ಪ ಮೈಸೂರು ರಸ್ತೆಯಲ್ಲಿ ಪೊಲೀಸ್ ಇಲಾಖೆಯ ವಾಹನದಲ್ಲಿ ಹೆದ್ದಾರಿ ಗಸ್ತು ಕರ್ತವ್ಯದಲ್ಲಿದ್ದ ಎ.ಎಸ್.ಐ ಚಂದ್ರಯ್ಯ ಜಿ.ಎಸ್ ಮತ್ತು ವಾಹನ ಚಾಲಕ ಅನಿಲ್ ವೈ.ಎಸ್ ರವರು ಪಾಲಿಬೆಟ್ಟ-ತಿತಿಮತಿ ಜಂಕ್ಷನ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಆಟೋರಿಕ್ಷಾ ನಿಲ್ಲಿಸಿಕೊಂಡು ಮೂವರು ವ್ಯಕ್ತಿಗಳು ಮದ್ಯ ಸೇವನೆ ಮಾಡುತ್ತಿದ್ದುದನ್ನು ಪರಿಶೀಲಿಸಲು ಹೋದಾಗ ಮನು ಎಂಬುವವನು ಅವಾಚ್ಯ ಪದಗಳಿಂದ ಬೈದು, ಹಲ್ಲೆ ಮಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು ಈ ಬಗ್ಗೆ ಅನಿಲ್ ವೈ.ಎಸ್ ರವರು ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ವ್ಯಕ್ತಿ ಆತ್ಮಹತ್ಯೆ

            ದಿನಾಂಕ: 04-11-2019 ರಂದು ಸೋಮವಾರಪೇಟೆ ತಾಲ್ಲೂಕು ಕೂತಿ ಗ್ರಾಮದ ನಿವಾಸಿ ಶಾಂತಪ್ಪ ಎಂಬುವವರು ಅನಾರೋಗ್ಯಕ್ಕೆ ಚಿಕಿತ್ಸೆ ಪಡೆದರೂ ಗುಣಮುಖವಾಗದೇ ಇದ್ದುದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ವಿಷ ಸೇವಿಸಿ ಅಸ್ವಸ್ಥಗೊಂಡಿದ್ದವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು ಈ ಬಗ್ಗೆ ಮೃತರ ಪತ್ನಿ ನೀಡಿದ ದೂರಿನ ಮೇರೆ ಸೋಮವಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಕಾರು ಡಿಕ್ಕಿ ಪಾದಚಾರಿಗೆ ಗಾಯ

            ದಿನಾಂಕ: 03-11-2019 ರಂದು ಕುಶಾಲನಗರ ಪಟ್ಟಣದ ಕಾರು ನಿಲ್ದಾಣದ ಬಳಿ ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಗುಮ್ಮನಕೊಲ್ಲಿ ಗ್ರಾಮ ನಿವಾಸಿ ಉತ್ತಯ್ಯ ಎಂಬುವವರಿಗೆ ಕೆಎ-12-ಪಿ-6106 ರ ಕಾರನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಡಿಕ್ಕಿಪಡಿಸಿದ್ದರಿಂದ ಗಾಯಗೊಂಡಿದ್ದು ಈ ಬಗ್ಗೆ ಗಾಯಾಳುವಿನ ಪತ್ನಿ ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಹಲ್ಲೆ ಪ್ರಕರಣ

            ದಿನಾಂಕ: 14-11-2019 ರಂದು ಕುಶಾಲನಗರ ಪಟ್ಟಣದಲ್ಲಿ ನಂಜರಾಯಪಟ್ಟಣ ನಿವಾಸಿ ಶ್ರೀಮತಿ ರೇವತಿ ಮತ್ತು ವೇಣು, ಹಾಗೂ ಶ್ರೀಮತಿ ಅನಿತಾ ಮತ್ತು ಪ್ರೇಮಾನಂದ ಎಂಬುವವರು ಆಸ್ತಿ ವೈಷಮ್ಯದಿಂದ ಪರಸ್ಪರ ಹಲ್ಲೆ ಮಡಿಕೊಂಡಿ ಬೆದರಿಕೆ ಹಾಕಿದ್ದು ಈ ಬಗ್ಗೆ ಉಭಯ ಕಡೆಯವರು ನೀಡಿದ ಪುಕಾರಿನ ಮೇರೆ ಕುಶಾಲನಗರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಹಲ್ಲೆ ಪ್ರಕರಣ

            ದಿನಾಂಕ: 02-11-2019 ರಂದು ಸೋಮವಾರಪೇಟೆ ತಾಲ್ಲೂಕು ಚೇರಳ ಶ್ರಿಮಂಗಲ ಗ್ರಾಮದ ಕಂಡಕೆರೆ ನಿವಾಸಿಗಳಾದ ಅನಿಲ್.ಸುನಿಲ್ ಎಂಬುವವರು ಹಳೆ ವೈಷಮ್ಯದಿಂದ ಹಲ್ಲೆ ಮಾಡಿ ಗಾಯಗೊಳಿಸಿದ್ದು ಈ ಬಗ್ಗೆ ಸುಧೀಶ್ ರವರು ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ದ್ವಿಚಕ್ರ ವಾಹನ ಕಳವು ಪ್ರಕರಣ

            ದಿನಾಂಕ: 26-10-2019 ರಂದು ಮಡಿಕೇರಿ ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಮಡಿಕೇರಿ ತಾಲ್ಲೂಕು ಬೆಟ್ಟಗೇರಿ ಗ್ರಾಮದ ನಿವಾಸಿ ಯತೀಶ್ ಎಂಬುವವರು ನಿಲ್ಲಿಸಿದ್ದ ಕೆಎ-12-ಆರ್-4999 ದ್ವಿಚಕ್ರ ವಾಹನವನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ದಿನಾಂಕ: 04-11-2019 ರಂದು ನೀಡಿದ ಪುಕಾರಿನ ಮೇರೆ ಮಡಿಕೇರಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕಾಳು ಮೆಣಸು ಕಳವು ಆರೋಪಿ ಬಂಧನ

            ದಿನಾಂಕ: 02-11-2019 ರಂದು ಮಡಿಕೇರಿ ಗ್ರಾಮದ ಕುಂಜಿಲ ಗ್ರಾಮದ ನಿವಾಸಿ ಸುಭಾಷ್ ಎಂಬುವವರು ಗೋದಾಮಿನಿಂದ 13,000 ರೂ. ಬೆಲೆಯ ಕಾಳು ಮೆಣಸನ್ನುಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು, ತೋಟದ ಕೆಲಸಕ್ಕೆ ಬರುತ್ತಿದ್ದ ಅಶ್ರಫ್ ಎಂಬುವವರ ಮೇಲೆ ಗುಮಾನಿ ಇರುವುದಾಗಿ ನೀಡಿದ ಪುಕಾರಿನ ಮೇರೆ ನಾಪೋಕ್ಲು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಕಳವು ಮಾಡಿದ ಕಾಳುಮೆಣಸನ್ನು ವಿರಾಜಪೇಟೆ ಪಟ್ಟಣದಲ್ಲಿ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾಗ ವಿರಾಜಪೇಟೆ ಪೊಲೀಸರ ಸಹಕಾರದೊಂದಿಗೆ ಪ್ರಕರಣದ ಆರೋಪಿ ಅಶ್ರಫ್ ನನ್ನು ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.