Crime News
ಹಲ್ಲೆ ಪ್ರಕರಣ
ದಿನಾಂಕ: 11-11-2019 ರಂದು ಮಡಿಕೇರಿ ತಾಲ್ಲೂಕು ಕಡಗದಾಳು ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದ ಕಛೇರಿಗೆ ಅಜ್ಜಿರಂಡ ಗಣಪತಿ ಎಂಬುವವರು ಹೋಗಿ ಸಾಲದ ವಿಚಾರದಲ್ಲಿ ಸಂಘದ ವ್ಯವಸ್ಥಾಪಕರಾದ ಕೆ.ಪಿ ಲೋಕೇಶ್ ಎಂಬುವವರಿಗೆ ಅವಾಚ್ಯ ಪದಗಳಿಂದ ಬೈದು ಕೊಲೆ ಮಾಡುವ ಉದ್ದೇಶದಿಂದ ತಲೆಗೆ ಹಲ್ಲೆ ಮಾಡಿ ಗಾಯಗೊಳಿಸಿದ್ದು ಈ ಬಗ್ಗೆ ಲೋಕೇಶ್ ರವರು ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಮನೆ ಬೀಗ ಮುರಿದು ಚಿನ್ನಾಭರಣ ಕಳವು
ದಿನಾಂಕ: 10-11-2019 ರಂದು ಸೋಮವಾರಪೇಟೆ ತಾಲ್ಲೂಕು ಬಿಳಿಗೇರಿ ಗ್ರಾಮದ ನಿವಾಸಿ ಎಂ.ಬಿ ಪೊನ್ನಪ್ಪ ಎಂಬುವವರ ಮನೆಯ ಬಾಗಿಲಿನ ಬೀಗವನ್ನು ಯಾರೋ ಕಳ್ಳರು ಮುರಿದು ಒಳನುಗ್ಗಿ ಬೀರುವಿನಲ್ಲಿಟ್ಟಿದ್ದ 10,000 ರೂ ಬೆಲೆಬಾಳುವ ಬೆಳ್ಳಿಯ ಆಭರಣಗಳು ಹಾಗೂ ನಗದು ಹಣವನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ. ಹಾಗೂ ಅದೇ ಗ್ರಾಮದ ನಿವಾಸಿ ಬಿ.ಬಿ ಕರುಂಬಯ್ಯ ಎಂಬುವವರ ಮನೆಯ ಬಾಗಿಲಿನ ಬೀಗವನ್ನು ಯಾರೋ ಕಳ್ಳರು ಮುರಿದು ಒಳನುಗ್ಗಿ ಬೀರುವಿನಲ್ಲಿಟ್ಟಿದ್ದ 4,45,000 ರೂ ಬೆಲೆಬಾಳುವ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ಸೋಮವಾರಪೇಟೆ ಪೊಲೀಸರು ಎರಡು ಪ್ರತ್ಯೇಕ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.