Crime News

ವ್ಯಕ್ತಿ ಆತ್ಮಹತ್ಯೆ

          ದಿನಾಂಕ: 12-11-2019 ರಂದು ಮಡಿಕೇರಿ ನಗರದ ಡೈರಿ ಫಾರಂ ನಿವಾಸಿ ಫಯಾಜ್ ಅಹಮ್ಮದ್ ಎಂಬುವವರು ವೈಯಕ್ತಿಕ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಈ ಬಗ್ಗೆ ಮೃತರ ಪತ್ನಿ ನೀಡಿದ ದೂರಿನ ಮೇರೆ ಮಡಿಕೇರಿ  ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ವ್ಯಕ್ತಿ ಆತ್ಮಹತ್ಯೆ

          ದಿನಾಂಕ: 12-11-2019 ರಂದು ವಿರಾಜಪೇಟೆ ತಾಲ್ಲೂಕು ಬೊಳ್ಳುಮಾಡು ಗ್ರಾಮದ ನಿವಾಸಿ ಮಂಜು ಎಂಬುವವರು ವೈಯಕ್ತಿಕ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಈ ಬಗ್ಗೆ ಮೃತರ ಪತ್ನಿ ನೀಡಿದ ದೂರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ರಸ್ತೆ ಅಪಘಾತ ಪ್ರಕರಣ

          ದಿನಾಂಕ: 11-11-2019 ರಂದು ವಿರಾಜಪೇಟೆ ತಾಲ್ಲೂಕು ತಿತಿಮತಿ ಗ್ರಾಮದ ಬಳಿ  ಸಾರ್ವಜನಿಕ ರಸ್ತೆಯಲ್ಲಿ ಕೆಎ-09-ಹೆಚ್ಎಂ-7289 ರ ಬೈಕನ್ನು ಸವಾರ ಚೇತನ್ ಎಂಬುವವರು ಅತವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ ಪರಿಣಾಮ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಬಿದ್ದುದರಿಂದ ಹಿಂಬದಿ ಸವಾರ ಶಿವಕುಮಾರ್ ಎಂಬುವವರು ರಸ್ತೆಗೆ ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ಲೋಕೇಶ್ ಎಂಬುವವರು ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಮರ ಕಳವು ಪ್ರಕರಣ

          ವಿರಾಜಪೇಟೆ ತಾಲ್ಲೂಕು ಕುಟ್ಟ ಬಾಡಗ ಗ್ರಾಮದ ಪಾಲ್ ತೋಪು ಕಾಫಿ ತೋಟದಲ್ಲಿ ಬೆಳೆದಿದ್ದ 70 ಲಕ್ಷ ರೂ ಬೆಲೆ ಬಾಳುವ ಸಿಲ್ವರ್ ಮರಗಳನ್ನು ಯಾರೋ ಕಡಿದು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ಶ್ರೀಮತಿ ಲೀನ ಕುಟ್ಟಪ್ಪ ಎಂಬುವವರು ನೀಡಿದ ಪುಕಾರಿನ ಮೇರೆ ಕುಟ್ಟ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

          ದಿನಾಂಕ: 12-11-20019 ರಂದು ವಿರಾಜಪೇಟೆ ತಾಲ್ಲೂಕು ಹೆಗ್ಗಳ ಗ್ರಾಮದ ಎಡಮಕ್ಕಿ ಗ್ರಾಮದ ಪೂವಯ್ಯ ಎಂಬುವವರು ಅಕ್ರಮವಾಗಿ ಸಾರ್ವಜನಿಕರಿಗೆ ಮದ್ಯ ಮಾರಾಟ ಮಾಡಿ ಮದ್ಯ ಸೇವನೆ ಮಾಡಲು ಅವಕಾಶ ಮಾಡುತ್ತಿದ್ದ ಪ್ರಕರಣವನ್ನು ವಿರಾಜಪೇಟೆ ಗ್ರಾಮಾಂತರ ಠಾಣೆ ಪಿ.ಎಸ್.ಐ ವೀಣಾ ನಾಯಕ್ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪೂವಯ್ಯ ರವರ ವಿರುದ್ದ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿರುತ್ತಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ         

  ದಿನಾಂಕ: 12-11-20019 ರಂದು ವಿರಾಜಪೇಟೆ ತಾಲ್ಲೂಕು ಕಾಕೊಟುಪರಂಬು ಗ್ರಾಮದ ಕುಟ್ಟಪ್ಪ ಎಂಬುವವರು ಅಕ್ರಮವಾಗಿ ಸಾರ್ವಜನಿಕರಿಗೆ ಮದ್ಯ ಮಾರಾಟ ಮಾಡಿ ಮದ್ಯ ಸೇವನೆ ಮಾಡಲು ಅವಕಾಶ ಮಾಡುತ್ತಿದ್ದ ಪ್ರಕರಣವನ್ನು ವಿರಾಜಪೇಟೆ ಗ್ರಾಮಾಂತರ ಠಾಣೆ ಪಿ.ಎಸ್.ಐ ವೀಣಾ ನಾಯಕ್ ಮ