Crime News

ಬಸ್‌ ಡಿಕ್ಕಿ ಮಹಿಳೆ ಸಾವು

          ದಿನಾಂಕ: 13-11-2019 ರಂದು ವಿರಾಜಪೇಟೆ ತಾಲ್ಲೂಕು ಹಾತೂರು ಗ್ರಾಮದ ಬಳಿ ಹೆದ್ದಾರಿ ರಸ್ತೆಯಲ್ಲಿ ಕೆಎ10-ಎಫ್-310 ರ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಚಂದ್ರಪ್ಪ ಎಂಬುವವರು ಬಸ್ಸನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿ ರಸ್ತೆ ಬದಿಯಲ್ಲಿ ನಿಂತಿದ್ದ ತಂಗಮ್ಮ ಎಂಬುವವರಿಗ ಡಿಕ್ಕಿಪಡಿಸಿದ ಪರಿಣಾಮ ತಂಗಮ್ಮ ರವರು ಸ್ಥಳದಲ್ಲಿಯೇ ಮತಪಟ್ಟಿದ್ದು ಈ ಬಗ್ಗೆ ಮೃತರ ಮಗ ಕುಟ್ಟಪ್ಪ ಎಂಬುವವರು ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

          ದಿನಾಂಕ: 13-11-2019 ರಂದು ವಿರಾಜಪೇಟೆ ತಾಲ್ಲೂಕು ಕೆದಮುಳ್ಳೂರು ಗ್ರಾಮದ ನಿವಾಸಿ ಫೌಸ್ಟಿನ್ ಫರ್ನಾಂಡಿಸ್ ಎಂಬುವವರು ಅಕ್ರಮವಾಗಿ ಅವರ ಮನೆಯ ಬಳಿ ಸಾರ್ವಜನಿಕರಿಗೆ ಮದ್ಯ ಮಾರಾಟ ಮಾಡಿ ಮದ್ಯಸೇವನೆ ಮಾಡಲು ಅವಕಾಶ ಮಾಡಿಕೊಡುತ್ತಿದ್ದ ಪ್ರಕರಣವನ್ನು ಪ್ರಕರಣವನ್ನು ವಿರಾಜಪೇಟೆ ಗ್ರಾಮಾಂತರ ಠಾಣೆ ಪಿ.ಎಸ್.ಐ ವೀಣಾ ನಾಯಕ್ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಆರೋಪಿ ದಸ್ತಗಿರಿ ಮಾಡಿ ಕಾನೂನು ಕ್ರಮ ಜರುಗಿಸಿರುತ್ತಾರೆ.

ರಸ್ತೆ ಅಪಘಾತ ಪ್ರಕರಣ

          ದಿನಾಂಕ; 13-11-2019 ರಂದು ಸೋಮವಾರಪೇಟೆ ತಾಲ್ಲೂಕು ಗುಡ್ಡಹೊಸೂರು ಗ್ರಾಮದ ಬಳಿ ಹೆದ್ದಾರಿ ರಸ್ತೆಯಲ್ಲಿ ಕೆಎ-12-ಆರ್-5816 ರ ಸ್ಕೂಟರನ್ನು ಸವಾರನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕಾರಿಗೆ ಡಿಕ್ಕಿಪಡಿಸಿದ ಪರಿಣಾಮ ಸ್ಕೂಟರ್ ನಲ್ಲಿದ್ದವರು ಕೆಳಗ ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ಸುನಿಲ್ ಕುಮಾರ್ ಎಂಬುವವರು ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಬೈಕ್ ಡಿಕ್ಕಿ ಪಾದಚಾರಿಗೆ ಗಾಯ

          ದಿನಾಂಕ: 12-11-2019 ರಂದು ಸೋಮವಾರಪೇಟೆ ತಾಲ್ಲೂಕು ನಿಡ್ತ ಗ್ರಾಮದ ಬಳಿ ಸಾರ್ವಜನಿಕ ರಸ್ತೆಯಲ್ಲಿ ಕೆಎ-12-ಕೆ-4005 ರ ಬೈಕನ್ನು ಸವಾರ ಕೊಡ್ಲಿಪೇಟೆ ಕೂಡ್ಲೂರು ಗ್ರಾಮದ ನಿವಾಸಿ ಸ್ವಾಮಿ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿ ರಸ್ತೆ ದಾಟುತ್ತಿದ್ದ ಮಲ್ಲಿಕಾರ್ಜುನ ಎಂಬುವವರಿಗೆ ಡಿಕ್ಕಿಪಡಿಸಿದ ಪರಿಣಾಮ ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ಗಾಯಾಳುವಿನ ಮಗ ವಿನಯ್ ಕುಮಾರ್ ಎಂಬುವವರು ನೀಡಿದ ಪುಕಾರಿನ ಮೇರೆ ಶನಿವಾರಸಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಆಕಸ್ಮಿಕ ಸಾವು

          ದಿನಾಂಕ: 13-11-2019 ರಂದು ವಿರಾಜಪೇಟೆ ತಾಲ್ಲೂಕು ಅರವತ್ತೊಕ್ಲು ಗ್ರಾಮದ ನಿವಾಸಿ ಕೀರ್ತನ್ ಎಂಬುವವರು ಹಳ್ಳಿಗಟ್ಟು ಗ್ರಾಮದ ಬಳಿ ಹೊಳೆಯಲ್ಲಿ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದು ಈ ಬಗ್ಗೆ ಮೃತರ ಸಹೋದರ ಕಾರ್ತಿಕ್ ಎಂಬುವವರು ನೀಡಿದ ದೂರಿನ ಮೇರೆ ಪೊನ್ನಂಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

          ದಿನಾಂಕ: 13-11-2019 ರಂದು ಮಡಿಕೇರಿ ತಾಲ್ಲೂಕು ಕಡಿಯತ್ತೂರು ಗ್ರಾಮದ ನಿವಾಸಿ ಕುಂಜಿಲನ ಸುರೇಶ ಎಂಬುವವರು ವೈಯಕ್ತಿಕ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ಈ ಬಗ್ಗೆ ಮೃತರ ಸಂಬಂಧಿಕರಾದ ಗಗನ್ ಎಂಬುವವರು ನೀಡಿದ ದೂರಿನ ಮೇರೆ ನಾಪೋಕ್ಲು ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.