Crime News

ನೀರಿನ ಮೋಟರ್ ಕಳವು

          ದಿನಾಂಕ: 17-11-2019 ರಂದು ವಿರಾಜಪೇಟೆ ತಾಲ್ಲೂಕು ಬಾಳೆಲೆ ಗ್ರಾಮದ ಮಾರ್ಕೆಟ್ ಬಳಿ ಇರುವ ಕುಡಿಯುವ ನೀರಿನ ಘಟಕದ ಒಳಗಡೆ ಇದ್ದ ರೂ. 13,500 ಬೆಲೆಬಾಳುವ 1 ಹೆಚ್.ಪಿ ಮೋಟರ್ ಹಾಗೂ ಕಾಯಿನ್ ಬಾಕ್ಸ್ ನಲ್ಲಿದ್ದ ಅಂದಾಜು. 500 ರೂ ನಗದು ಹಣವನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ಬಾಳೆಲೆ ಗ್ರಾಮ ಪಂಚಾಯತ್ ಪಿ.ಡಿ.ಒ ಮನಮೋಹನ್ ರವರು ನೀಡಿದ ಪುಕಾರಿನ ಮೇರೆ ಪೊನ್ನಂಪೇಟೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

          ದಿನಾಂಕ: 18-11-2019 ರಂದು ಸೋಮವಾರಪೇಟೆ ತಾಲ್ಲೂಕು ನೇಗಳೆ ಗ್ರಾಮದ ನಿವಾಸಿಗಳಾದ ಸಂತೋಷ ಮತ್ತು ಭರತ ಎಂಬುವವರು ಅದೇ ಗ್ರಾಮ ನಿವಾಸಿ ದಿವಾಕರ ಎಂಬುವವರ ತಾಯೊಯವರೊಂದಿಗೆ ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡುತ್ತಿದ್ದವರನ್ನು ಸಮಾಧಾನ ಪಡಿಸಲು ಹೋದಾಗ ದಿವಾಕರ್ ರವರ ತಲೆಗೆ ಕೊಲ್ಲುವ ಉದ್ದೇಶದಿಂದ ಹಲ್ಲೆ ಮಾಡಿ ಗಾಯಗೊಳಿಸಿದ್ದು ಈ ಬಗ್ಗೆ ದಿವಾಕರ್ ರವರು ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಮರ ಸಾಗಾಟ ಪ್ರಕರಣ

          ದಿನಾಂಕ: 18-11-2019 ರಂದು ವಿರಾಜಪೇಟೆ ತಾಲ್ಲೂಕು ಬೈರಂಬಾಡ ಗ್ರಾಮದ ಮುತ್ತಣ್ಣ ಎಂಬುವವರಿಗ ಸೇರಿದ ಕಾಫಿ ತೋಟದಿಂದ ಅಕ್ರಮವಾಗಿ ಬೀಟೆ ಮರಗಳನ್ನು ಕಡಿದು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಕೊಡಗು ಜಿಲ್ಲೆ ಡಿ.ಸಿ.ಐ.ಬಿ ವಿಭಾಗದ ಪೊಲೀಸ್ ನಿರೀಕ್ಷಕರವರಾದ ಎಂ.ಮಹೇಶ್ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿದ್ದು ಈ ಬಗ್ಗೆ ಸಿದ್ದಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ವ್ಯಕ್ತಿ ಆತ್ಮಹತ್ಯೆ

          ದಿನಾಂಕ: 18-11-2019 ರಂದು ವಿರಾಜಪೇಟೆ ತಾಲ್ಲೂಕು ಕೋಣಂಗೇರಿ ಗ್ರಾಮದ ನಿವಾಸಿ ಪಣಿ ಎರವರ ಕಾವಲ ಎಂಬುವವರಿಗೆ ವಿಪರೀತ ಮದ್ಯ ಸೇವನೆ ಅಭ್ಯಾಸವಿದ್ದು ಕ್ಷುಲ್ಲಕ ಕಾರಣಕ್ಕೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಈ ಬಗ್ಗೆ ಮೃತರ ಪತ್ನಿ ನೀಡಿದ ದೂರಿನ ಮೇರೆ ಶ್ರೀಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.