Crime News

ವಿದ್ಯಾರ್ಥಿ ಆಕಸ್ಮಿಕ ಸಾವು

          ದಿನಾಂಕ: 18-11-2019 ರಂದು ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲ್ಲೂಕು ತ್ಯಾಗದ ಕಟ್ಟೆ ನಿವಾಸಿ ಪಿ.ಯು.ಸಿ ವಿದ್ಯಾರ್ಥಿಯಾಗಿರುವ ಪುನೀತ್ ಎಂಬುವವರು ಕಾಲೇಜು ವಿದ್ಯಾರ್ಥಿಗಳೊಂದಿಗೆ ಹಾರಂಗಿ ಜಲಾಶಯಕ್ಕೆ ಪ್ರವಾಸಕ್ಕೆ ಬಂದು ತನ್ನ ಸ್ನೇಹಿತರೊಂದಿಗೆ ಹೊಳೆಯ ಬಳಿ ಕಲ್ಲಿನ ಮೇಲೆ ಕುಳಿತುಕೊಂಡಿರುವಾಗ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟಿದ್ದು ಈ ಬಗ್ಗೆ ಮೃತನ ತಂದೆ ನೀಡಿದ ದೂರಿನ ಮೇರೆ ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಹಲ್ಲೆ ಪ್ರಕರಣ

          ದಿನಾಂಕ: 19-11-2019 ರಂದು ಸೋಮವಾರಪೇಟೆ ಪಟ್ಟಣದ ಸಫಾಲಿ ಬಾರ್ ನಲ್ಲಿ ಅಲೆಕಟ್ಟೆ ನಿವಾಸಿ ಕೃಷ್ಣಮೂರ್ತಿ ಹಾಗೂ ದೊಡ್ಡತೊಳೂರು ನಿವಾಸಿ ರವಿ ಎಂಬುವವವರು ಕ್ಷುಲ್ಲಕ ಕಾರಣಕ್ಕೆ ಪರಸ್ಪರ ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿಕೊಂಡಿದ್ದು ಈ ಬಗ್ಗೆ ಉಭಯ ಕಡೆಯವರು ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿರುತ್ತದೆ.

ವ್ಯಕ್ತಿ ಆತ್ಮಹತ್ಯೆ

          ದಿನಾಂಕ: 19-11-2019 ರಂದು ಮಡಿಕೇರಿ ತಾಲ್ಲೂಕು ಹಚ್ಚಿನಾಡು ಗ್ರಾಮದ ನಿವಾಸಿ ಸುರೇಶ ಎಂಬುವವರಿಗ ಮದ್ಯದೇವನೆ ಅಭ್ಯಾಸವಿದ್ದು ಯಾವುದೋ ವಿಚಾರಕ್ಕೆ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಈ ಬಗ್ಗೆ ಮೃತರ ತಾಯಿ ನೀಡಿದ ದೂರಿನ ಮೇರೆ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ರಸ್ತೆ ಅಪಘಾತ ಪ್ರಕರಣ

          ದಿನಾಂಕ: 19-11-2019 ರಂದು ಮಡಿಕೇರಿ ತಾಲ್ಲೂಕು ಮದೆನಾಡು ಗ್ರಾಮದ ಬಳಿ ಹೆದ್ದಾರಿ ರಸ್ತೆಯಲ್ಲಿ ಕೆಎ-41-ಬಿ-1923 ರ ಕಾರನ್ನು ಚಾಲಕ ಶ್ರೀನಿವಾಸ್ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ ಪರಿಣಾಮ ಕಾರು ರಸ್ತೆಬದಿಯ ಮೋರಿಗೆ ಡಿಕ್ಕಿಯಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಶ್ರೀನಿವಾಸ್, ನಾಗೇಂದ್ರ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಕಳವು ಪ್ರಕರಣ

          ದಿನಾಂಕ: 18-11-2019 ರಂದು ವಿರಾಜಪೇಟೆ ತಾಲ್ಲೂಕು ಸಿದ್ದಾಪುರ ಗ್ರಾಮದ ನಿವಾಸಿ ಶೌಕತ್ ಆಲಿ ಎಂಬುವವರು ಬಿಳುಗುಂದ ಗ್ರಾಮದ ಸುರೇಶ್ ಎಂಬುವವರು ಮನೆ ನಿರ್ಮಾಣ ಕೆಲಸಕ್ಕಾಗಿ ಮನೆಯ ಬಳಿ ಇಟ್ಟಿದ್ದ 45,000 ರೂ ಮೌಲ್ಯದ 100 ಕಬ್ಬಿಣದ ಶೀಟ್ ಗಳನ್ನು ಯಾರೋ ಕಳ್ಳರು ಕಳವು ಮಾಡಕೊಂಡು ಹೋಗಿದ್ದು ಈ ಬಗ್ಗೆ ಶೌಕರ್ ಆಲಿ ರವರು ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

          ದಿನಾಂಕ: 19-11-2019 ರಂದು ವಿರಾಜಪೇಟೆ ತಾಲ್ಲೂಕು ಅಂಬಟ್ಟಿ ಗ್ರಾಮದ ಬಳಿ ತಿಮ್ಮಯ್ಯ ಎಂಬುವವರು ಕೆಎ-12-ಹೆಚ್-5783 ರ ಬೈಕ್ ನಲ್ಲಿ ಹೋಗುತ್ತಿರುವಾಗ ಹಿಂಬದಿಯಿಂದ ಒಂದು ಕಾರನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಬೈಕ್ ಗೆ ಡಿಕ್ಕಿಪಡಿಸಿದ ಪರಿಣಾಮ ಬೈಕ್ ಸವಾರ ಕೆಳಗ ಬಿದ್ದು ಗಾಯಗೊಂಡಿದ್ದು, ಕಾರಿನ ಚಾಲಕ ಕಾರನ್ನು ನಿಲ್ಲಿಸದೇ ಹೋಗಿದ್ದು ಕಾರಿನ ನಂಬರ್ ಕೆಎ-12-ಎಂ-3298 ಆಗಿದ್ದು ಈ ಬಗ್ಗೆ ಗಾಯಾಳು ತಿಮ್ಮಯ್ಯ ರವರು ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.