Crime News

ರಸ್ತೆ ಅಪಘಾತ ಪ್ರಕರಣ

          ದಿನಾಂಕ: 24-11-2019 ರಂದು ವಿರಾಜಪೇಟೆ ತಾಲ್ಲೂಕು ಹೈಡೊಡ್ಲೂರು ಗ್ರಾಮದ ಬಳಿ ಸಾರ್ವಜನಿಕ ರಸ್ತೆಯಲ್ಲಿ ಸಿ.ಎನ್.ಜೆಡ್ 7202 ರ ಜೀಪನ್ನು ಚಾಲಕ ಚರ್ಮಣ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುಗೆಡಯಿಂದ ಬರುತ್ತಿದ್ದ ಕೆಎ-12-ಜೆಡ್-4725 ರ ವ್ಯಾನ್ ಗೆ ಡಿಕ್ಕಿಪಡಿಸಿದ ಪರಿಣಾಮ ವಾಹನಗಳು ಜಖಂಗೊಂಡು ವ್ಯಾನಿನ ಚಾಲಕ ಕುಟ್ಟಪ್ಪ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ಶ್ರೀಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ರಸ್ತೆ ಅಪಘಾತ ಪ್ರಕರಣ

          ದಿನಾಂಕ: 24-11-2019 ರಂದು ವಿರಾಜಪೇಟೆ ಪಟ್ಟಣದ ವಿಜಯನಗರ ಬಳಿ ಸಾರ್ವಜನಿಕ ರಸ್ತೆಯಲ್ಲಿ ಕೆಎ-12-ಕೆ-3342 ರ ಸ್ಕೂಟರ್ ಗೆ ಹಿಂಬದಿಯಿಂದ ಬಂದ ಕೆಎ-12-ಆರ್-3464 ರ ಬೈಕನ್ನು ಅದರ ಸವಾರ ಶ್ರವಣ್ ಕಾಂಬ್ಳೆ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿ ಡಿಕ್ಕಿಪಡಿಸಿದ ಪರಿಣಾಮ ಎರಡೂ ವಾಹನಗಳು ಕೆಳಗೆ ಬಿದ್ದು ಸ್ಕೂಟರ್ ಹಾಗು ಬೈಕ್ ನಲ್ಲಿದ್ದ ಸವಾರರು ಕೆಳಗ ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ಷಣ್ಮಗಂ ಎಂಬುವವರು ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಬೈಕ್ ಡಿಕ್ಕಿ, ಬಾಲಕನಿಗೆ ಗಾಯ

          ದಿನಾಂಕ: 24-11-2019 ರಂದು ಜೋಡುಬಿಟ್ಟಿ ಗ್ರಾಮದ ಬಳಿ ಸಾರ್ವಜನಿಕ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸೊರೆಯೂ ಎಂಬ ಬಾಲಕನಿಗೆ ಕೆಎ-12-ಆರ್-3301 ರ ಬೈಕನ್ನು ಸವಾರನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಡಿಕ್ಕಿಪಡಿಸಿದ ಪರಿಣಾಮ ಬಾಲಕ ಗಾಯಗೊಂಡಿದ್ದು ಈ ಬಗ್ಗೆ ಶ್ರೀಮತಿ ರಾಗಿಣಿ ಎಂಬುವವರು ನೀಡಿದ ಪುಕಾರಿನ ಮೇರೆ ಪೊನ್ನಂಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಆಕಸ್ಮಿಕವಾಗಿ ಗಾಯ, ವ್ಯಕ್ತಿ ಸಾವು

          ದಿನಾಂಕ: 24-11-2019 ರಂದು ಮಡಿಕೇರಿ ತಾಲ್ಲೂಕು ಮದೆನಾಡು ಗ್ರಾಮದ ನಿವಾಸಿ ನಾಣಯ್ಯ ಎಂಬುವವರು ಅವರ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಎಡ ಮೊಣಕೈಗೆ ಕತ್ತಿ ತಾಗಿದ್ದರಿಂದ ಗಾಯವಾಗಿ ರಕ್ತಸ್ರಾವಗೊಂಡು ಮನೆಗೆ ಬಂದು ಅಸ್ವಸ್ಥರಾದವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ಕರೆತಂದಾಗ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದು ಈ ಬಗ್ಗೆ ಮೃತರ ಪತ್ನಿ ಶ್ರೀಮತಿ ಗಿರಿಜಾ ಎಂಬುವವರು ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಬೆದರಿಕೆ ಪ್ರಕರಣ

          ದಿನಾಂಕ: 23-11-2019 ರಂದು ಮಡಿಕೇರಿ ತಾಲ್ಲೂಕು ನರಿಯಂದಡ ಗ್ರಾಮದ ನಿವಾಸಿ ಯತೀಶ್ ಕುಮಾರ್ ಎಂಬುವವರು ತಮ್ಮ ಕಾರಿನಲ್ಲಿ ಮನೆಗೆ ಹೋಗುತ್ತಿರುವಾಗ ಮೂರ್ನಾಡು ಜೂನಿಯರ್ ಕಾಲೇಜು ಬಳಿ ರಸ್ತೆಯಲ್ಲಿ ಪಂಚಮ್, ಹರೀಶ, ಚೆಲುವ ಎಂಬುವವರು ಕಾರಿಗೆ ದಾರಿ ಬಿಡುವ ವಿಚಾರದಲ್ಲಿ ಜಗಳ ಮಾಡಿ ಅವಾಚ್ಯ ಪದಗಳಿಂದ ಬೈದು ಬೆದರಿಕೆ ಹಾಕಿದ್ದು ಈ ಬಗ್ಗೆ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಸುಲಿಗೆ ಪ್ರಕರಣ

          ದಿನಾಂಕ: 24-11-2019 ರಂದು ಮಡಿಕೇರಿ ತಾಲ್ಲೂಕು ಕೋರಂಗಾಲ ಗ್ರಾಮದ ನಿವಾಸಿ ಮಹಿಳೆಯೊಬ್ಬರು ತಲಕಾವೇರಿ ರಸ್ತೆಯಲ್ಲಿರುವ ಸ್ಪೈಸಸ್ ಮಳಿಗೆಯಲ್ಲಿ ಕೆಲಸ ಮಾಡಿಕೊಂಡಿರುವಾಗ ಇಬ್ಬರು ಅಪರಿಚಿತರು ಸ್ಕೂಟರ್ ನಲ್ಲಿ ಬಂದು ವ್ಯಾಪಾರ ಮಾಡುವ ನೆಪದಲ್ಲಿ ಏಕಾಏಕಿ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಮತ್ತು ಮೊಬೈಲ್ ಫೋನನ್ನು ಕಿತ್ತುಕೊಂಡು  ಹೋಗಿದ್ದು ಈ ಬಗ್ಗೆ ಭಾಗಮಂಡಲ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

          ದಿನಾಂಕ: 24-11-2019 ರಂದು ವಿರಾಜಪೇಟೆ ತಾಲ್ಲೂಕು ಗುಹ್ಯ ಗ್ರಾಮದ ನಿವಾಸಿ ರಮೇಶ್ ಎಂಬುವವರು ಅವರಿಗೆ ಪರಿಚಯವಿರುವ ಪಾಲಿಬೆಟ್ಟ್ ರಸ್ತೆಯಲ್ಲಿರುವ ಸ್ವಾಮಿ ಮತ್ತು ಮಹೇಶ್ ಎಂಬುವವರ ಮನೆಗೆ ಹೋಗಿ ಮಾತನಾಡಿಕೊಂಡಿರುವಾಗ ಕ್ಷುಲ್ಲಕ ಕಾರಣಕ್ಕೆ ಮಹೇಶ್ ಮತ್ತು ಸ್ವಾಮಿ ರವರು ಪರಸ್ಪರ ಜಗಳ ಮಾಡುತ್ತಿದ್ದಾಗ ಸಮಾಧಾನಪಡಿಸಿಲು ಹೋದ ರಮೇಶ್ ರವರಿಗೆ ಸ್ವಾಮಿ ಮತ್ತು ಮಹೇಶ್ ರವರು ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿ ಗಾಯಗೊಳಿಸಿದ್ದು ಈ ಬಗ್ಗೆ ರಮೇಶ್ ರವರು ನೀಡಿದ ಪುಕಾರಿನ ಮೇರೆ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ರಸ್ತೆ ಅಪಘಾತ ಪ್ರಕರಣ

          ದಿನಾಂಕ: 24-11-2019 ರಂದು ಸೋಮವಾರಪೇಟೆ ತಾಲ್ಲೂಕು ಶಿರಂಗಾಲ ಗ್ರಾಮದ ಬಳಿ ಹೆದ್ದಾರಿ ರಸ್ತೆಯಲ್ಲಿ ಕೆಎ-27-ಬಿ-4830 ರ ಲಾರಿಯನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-12-ಬಿ-2375 ರ ಕಾರಿಗೆ ಡಿಕ್ಕಿಪಡಿಸಿದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಗಾಯಗೊಂಡಿದ್ದು ಈ ಬಗ್ಗೆ ರಂಗಸ್ವಾಮಿ ಎಂಬುವವರು ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ರಸ್ತೆ ಅಪಘಾತ ಪ್ರಕರಣ

          ದಿನಾಂಕ: 23-11-2019 ರಂದು ಸೋಮವಾರಪೇಟೆ ತಾಲ್ಲೂಕು ಸುಂಟಿಕೊಪ್ಪ ಗ್ರಾಮದ ಬಳಿ ಹೆದ್ದಾರಿ ರಸ್ತೆಯಲ್ಲಿ ಒಂದು ಬೈಕನ್ನು ಅದರ ಸವಾರ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡಿ ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-03-ಹೆಚ್.ಎಫ್-6058 ರ ಬೈಕ್ ಗೆ ಡಿಕ್ಕಿಪಡಿಸಿದ ಪರಿಣಾಮ ಬೈಕ್ ನಲ್ಲಿದ್ದ ಮಣಿಕಂಠ ಮತ್ತು ಅಶ್ವತ್ ಎಂಬುವವರು ಕೆಳಗೆ ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ಮಣಿಕಂಠ ಎಂಬುವವರು ನೀಡಿದ ಪುಕಾರಿನ ಮೇರೆ ಸುಂಟಿಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಹಲ್ಲೆ ಪ್ರಕರಣ

          ದಿನಾಂಕ: 23-11-2019 ರಂದು ಸೋಮವಾರಪೇಟೆ ತಾಲ್ಲೂಕು ಮುಳ್ಳೂರು ಗ್ರಾಮದ ನಿವಾಸಿ ಸಂತೋಷ್ ಎಂಬುವವರು ಅವರ ಸ್ನೇಹಿತರೊಂದಿಗೆ ಆಲೂರು ಸಿದ್ದಾಪುರ ಗ್ರಾಮದ ವಿ.ಎಸ್.ಎಸ್ ಪೆಟ್ರೋಲ್ ಬಂಕ್ ಬಳಿ ಮಾತನಾಡುತ್ತಿರುವಾಗ ಮುಳ್ಳೂರು ಗ್ರಾಮದ ನಿವಾಸಿಗಳಾದ ಅಭಿಲಾಷ್ ಮತ್ತು ಅಭಿಮನ್ಯು ಎಂಬುವವರು ಹಳೆ ವೈಷಮ್ಯದಿಂದ ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿ ಗಾಯಗೊಳಿಸಿದ್ದು ಈ ಬಗ್ಗೆ ಸಂತೋಷ್ ರವರು ನೀಡಿದ ಪುಕಾರಿನ ಮೇರೆ ಶನಿವಾರಸಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.