News

ವಿಧಿ ವಿಜ್ಞಾನ ದಂತ ಶಾಸ್ತ್ರ ಕಾರ್ಯಾಗಾರ

            ದಿನಾಂಕ: 04-12-2019 ರಂದು ಕೊಡಗು ದಂತ ವಿಜ್ಞಾನ ಸಂಸ್ಥೆ ವತಿಯಿಂದ ವಿರಾಜಪೇಟೆ ಯಲ್ಲಿರುವ ದಂತವೈದ್ಯಕೀಯ ಕಾಲೇಜಿನಲ್ಲಿ ಕೊಡಗು ಜಿಲ್ಲೆಯ ಪೊಲೀಸ್ ಅಧಿಕಾರಿಗಳಿಗೆ ವಿಧಿ ವಿಜ್ಞಾನ ದಂತ ಶಾಸ್ತ್ರದ ಬಗ್ಗೆ ಒಂದು ದಿನದ ಕಾರ್ಯಾಗಾರ ಆಯೋಜಿಸಲಾಗಿತ್ತು.

            ಈ ಕಾರ್ಯಾಗಾರವನ್ನು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ಸುಮನ್ ಡಿ.ಪಿ ರವರು ಉದ್ಘಾಟಿಸಿದ್ದು ಕಾರ್ಯಕ್ರಮದಲ್ಲಿ ಕೊಡಗು ದಂತ ವೈದ್ಯಕೀಯ ಕಾಲೇಜಿನ ಡೀನ್ ಡಾ. ಸುನಿಲ್ ಮುದ್ದಯ್ಯ ,ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ.ಸಿ ಪೊನ್ನಪ್ಪ, ಉಪ ಪ್ರಾಂಶುಪಾಲರಾದ ಡಾ.ಜಿತೇಶ್ ಜೈನ್ ಹಾಗೂ ಜಿಲ್ಲೆಯ ಡಿವೈ.ಎಸ್.ಪಿ ರವರುಗಳಾದ ಶ್ರೀ ದಿನೇಶ್ ಕುಮಾರ್, ಶ್ರೀ ಜಯಕುಮಾರ್, ಶ್ರೀ ಮುರಳೀಧರ್ ರವರು ಸೇರಿದಂತೆ ಜಿಲ್ಲೆಯ ಎಲ್ಲಾ ಪೊಲೀಸ್ ನಿರೀಕ್ಷಕರು, ಪೊಲೀಸ್ ಉಪನಿರೀಕ್ಷಕರು ಹಾಗೂ ತನಿಖಾ ಸಹಾಯಕ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು.      

       ಈ ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳ ಪೊಲೀಸ್ ಅಧಿಕಾರಿಗಳು ಮತ್ತು ತನಿಖಾ ಸಹಾಯಕರುಗಳಿಗೆ ವಿಧಿ ವಿಜ್ಞಾನ ದಂತ ಶಾಸ್ತ್ರದಿಂದ ತನಿಖೆಗೆ ಸಂಬಂಧಿಸಿದಂತೆ ಸಂಗ್ರಹಿಸಲಾದ ಹಲವು ರೀತಿಯ ನಿಖರ ಸಾಕ್ಷ್ಯಗಳನ್ನು ನ್ಯಾಯಾಲಯವು ವಿಚಾರಣೆ ಸಂಧರ್ಭದಲ್ಲಿ ಪರಿಗಣಿಸುವ ಬಗ್ಗೆ ಮಾಹಿತಿ ನೀಡಿ ವಿವಿಧ ರೀತಿಯ ಅಪರಾಧ ಪ್ರಕರಣಗಳಲ್ಲಿ ದಂತ ಸಾಕ್ಷ್ಯಗಳನ್ನು ಗುರುತಿಸುವ, ಮಾಹಿತಿ ಹಾಗೂ ಸಾಕ್ಷ್ಯಗಳನ್ನು ಸಂಗ್ರಹಿಸುವ ಬಗ್ಗೆ ಉಪನ್ಯಾಸ, ಪ್ರಾತ್ಯಕ್ಷಿಕೆ ಹಾಗೂ ತರಬೇತಿ ನೀಡಲಾಯಿತು.

Crime News

ಹಲ್ಲೆ ಪ್ರಕರಣ

          ದಿನಾಂಕ: 03-12-2019 ರಂದು ವಿರಾಜಪೇಟೆ ತಾಲ್ಲೂಕು ಚೆನ್ನಯ್ಯನಕೋಟೆ ಗ್ರಾಮದ ನಿವಾಸಿ ಕುಮಾರ ಮತ್ತು ಅವರ ಪತ್ನಿ ಹಾಗೂ ಅದೇ ಗ್ರಾಮದ ನಿವಾಸಿಗಳಾದ ನಂದೀಶ್ ಮತ್ತು ಅವರ ಪತ್ನಿ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ  ಪರಸ್ಪರ ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿಕೊಂಡಿದ್ದು ಈ ಬಗ್ಗೆ ಉಭಯ ಕಡೆಯವರು ನೀಡಿದ ಪುಕಾರಿನ ಮೇರೆ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ರಸ್ತೆ ಅಪಘಾತ ಪ್ರಕರಣ

          ದಿನಾಂಕ: 03-12-2019 ರಂದು ಸೋಮವಾರಪೇಟೆ ತಾಲ್ಲೂಕು ಶಾಂತಳ್ಳಿ ಗ್ರಾಮದ ಬಳಿ ಸಾರ್ವಜನಿಕ ರಸ್ತೆಯಲ್ಲಿ ಟಿಪ್ಪರ್ ಲಾರಿಯನ್ನು ಅದರ ಚಾಲಕ ಉದಯಕುಮಾರ್ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ ಪರಿಣಾಮ ಲಾರಿ ನಿಯಂತ್ರಣ ತಪ್ಪಿ ರಸ್ತೆ ಬದಿಗ ಮಗುಚಿಕೊಂಡಿದ್ದರಿಂದ ಲಾರಿಯಲ್ಲಿದ್ದ ನವಾಜ್ ಹಾಗೂ ಎಲ್ಲಪ್ಪ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ನವಾಜ್ ರವರು ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಜೆಸಿಬಿ ಬಿಡಿಭಾಗ ಕಳವು

ದಿನಾಂಕ: 01-12-2019 ರಂದು ಸೋಮವಾರಪೇಟೆ ತಾಲ್ಲೂಕು ಹೊಸೂರು ಗ್ರಾಮದ ನಿವಾಸಿ ಸತೀಶ್ ಎಂಬುವವರು ಚಿಕ್ಕಬೆಟ್ಟಗೇರಿ ಗ್ರಾಮದ ಬಳಿ ನಿಲ್ಲಿಸಿದ್ದ ಜೆಸಿಬಿ ಯಿಂದ 40,000 ರೂ ಬೆಲೆಬಾಳುವ ಹೈಡ್ರಾಲಿಕ್ ಆಯಿಲ್ ಪಂಪ್, ಹೋಸ್ ಪೈಪ್, ಆಯಿಲ್ ಅಡಾಪ್ಟರ್ ನ್ನು ಯಾರೋ ಕಳ್ಳತನ ಮಾಡಿಕೊಂಡು ಹೋಗಿದ್ದು ಈ ಬಗ್ಗೆ ಸತೀಶ್ ರವರು ನೀಡಿದ ಪುಕಾರಿನ ಮೇರೆ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.