Crime News

ಅಕ್ರಮ ಮದ್ಯ ಮಾರಾಟ ಪ್ರಕರಣ

          ದಿನಾಂಕಃ 05-12-2019 ರಂದು ವಿರಾಜಪೇಟೆ ತಾಲ್ಲೂಕು ಕುಂಜಿಲಗೇರಿ ಗ್ರಾಮದ ಸಾರ್ವಜನಿಕ ಬಸ್ ತಂಗುದಾಣದ ಬಳಿ ಅಕ್ರಮವಾಗಿ ಮದ್ಯ  ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ವಿರಾಜಪೇಟೆ ಗ್ರಾಮಾಂತರ ಠಾಣೆ ಪಿ.ಎಸ್.ಐ ವೀಣಾ ನಾಯಕ್ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಅದೇ ಗ್ರಾಮದ ನಿವಾಸಿ ಸಿ.ಕೆ ಮುತ್ತಪ್ಪ ಎಂಬುವವರ ವಿರುದ್ದ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

          ದಿನಾಂಕಃ 05-12-2019 ರಂದು ವಿರಾಜಪೇಟೆ ತಾಲ್ಲೂಕು ಬಾಳುಗೋಡು ಗ್ರಾಮದ ಕಂಡಿಮಕ್ಕಿ ದೇವಸ್ಥಾನದ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ವಿರಾಜಪೇಟೆ ಗ್ರಾಮಾಂತರ ಠಾಣೆ ಪಿ.ಎಸ್.ಐ ವೀಣಾ ನಾಯಕ್ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಅದೇ ಗ್ರಾಮದ ನಿವಾಸಿ ಬಿ.ಎನ್ ಜಯಂತ ಎಂಬುವವರ ವಿರುದ್ದ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ಕಾರು ಡಿಕ್ಕಿ, ಪಾದಚಾರಿ ಸಾವು

          ದಿನಾಂಕ: 05-12-2019 ರಂದು ವಿರಾಜಪೇಟೆ ತಾಲ್ಲೂಕು ಪೊನ್ನಂಪೇಟೆ ಕಾರು ನಿಲ್ದಾಣದ ಬಳಿ ಸಾರ್ವಜನಿಕ ರಸ್ತೆಯಲ್ಲಿ ಕೆಎ-02-ಪಿ-4292 ರ ಕಾರನ್ನು ಅದರ ಚಾಲಕ ವಿಜು ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಲ್ಯಮಂಡೂರು ಗ್ರಾಮದ ನಿವಾಸಿ ಗಣಪತಿ ಎಂಬುವವರಿಗೆ ಡಿಕ್ಕಿಪಡಿಸಿದ ಪರಿಣಾಮ ಗಾಯಗೊಂಡು ಮೃತಪಟ್ಟಿದ್ದು ಈ ಬಗ್ಗೆ ಮೃತರ ಸಹೋದರ ಗೋಪಾಲ ಎಂಬುವವರು ನೀಡಿದ ಪುಕಾರಿನ ಮೇರೆ ಪೊನ್ನಂಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ವ್ಯಕ್ತಿ ಆತ್ಮಹತ್ಯೆ

          ದಿನಾಂಕ: 15-12-2019 ರಂದು ಸೋಮವಾರಪೇಟೆ ತಾಲ್ಲೂಕು ಮಳೂರು ನಾಕೂರು ಶಿರಂಗಾಲ ಗ್ರಾಮದ ನಿವಾಸಿ ಶೇಖರ ಎಂಬುವವರು ಅನಾರೋಗ್ಯವಿದ್ದುದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಈ ಬಗ್ಗೆ ಮೃತರ ಮಗ ನೀಡಿದ ದೂರಿನ ಮೇರೆ ಸುಂಟಿಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.