Crime News

ವ್ಯಕ್ತಿ ಆತ್ಮಹತ್ಯೆ

          ದಿನಾಂಕಃ 06-12-2019 ರಂದು ವಿರಾಜಪೇಟೆ  ತಾಲ್ಲೂಕು ಶ್ರೀಮಂಗಲ ಗ್ರಾಮದ ನಿವಾಸಿ ಹರೀಶ್ ಎಂಬುವವರು ಅನಾರೋಗ್ಯವಿದ್ದುದರಿಂದ ಬೇಸರದಿಂದ ವಿಪರೀತ ಮದ್ಯಪಾನ ಮಾಡುತ್ತಿದ್ದು ಅನರೋಗ್ಯದ ವಿಚಾರದಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು ಈ ಬಗ್ಗೆ ಮೃತನ ತಾಯಿ ನೀಡಿದ ದೂರಿನ ಮೇರೆ ಶ್ರೀಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ವ್ಯಕ್ತಿ ಕಾಣೆ

          ದಿನಾಂಕಃ 03-12-2019 ರಂದು ಸೋಮವಾರಪೇಟೆ ತಾಲ್ಲೂಕು ಮಾದಾಪಟ್ಟಣ ಗ್ರಾಮದ ನಿವಾಸಿ ಗಿರೀಶ್ ಎಂಬುವವರು ಅವರ ತಾಯಿಯವರೊಂದಿಗೆ ವಾಸವಿದ್ದು ವೈಯಕ್ತಿಕ ಕಾರಣದಿಂದ ಬೇಸರಗೊಂಡು ಮನೆಯಿಂದ ಹೊರಗೆ ಹೋದವರು ಈ ವರೆಗೂ ವಾಪಾಸ್ಸು ಬಾರದೇ ಕಾಣೆಯಾಗಿರುವುದಾಗಿ ನೀಲಮ್ಮ ಎಂಬುವವರು ನೀಡಿದ ದೂರಿನ ಮೇರೆ ಕುಶಾಲನಗರ ಪಟ್ಟಣ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ದೇವಸ್ಥಾನ ಹುಂಡಿ ಹಣ ಕಳವು

          ದಿನಾಂಕಃ 05-12-2019 ರಂದು ವಿರಾಜಪೇಟೆ ತಾಲ್ಲೂಕು ತಾವಳಗೇರಿ ಗ್ರಾಮದ ಶ್ರೀ ಸುಬ್ರಹ್ಮಣ್ಯ ದೇವಾಲಯದ ಗರ್ಭಗುಡಿಯ ಬಾಗಿಲಿನ ಕಬ್ಬಿಣದ ಸರಳುಗಳನ್ನು ಯಾರೋ ಕಳ್ಳರು ಒಳನುಗ್ಗಿ ಕಾಣಿಕೆ ಹುಂಡಿಯ ಬೀಗ ಮುರಿದು ಅಂದಾಜು 6000 ರೂ ಹಣವನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ದೇವಾಲಯ ಅಧ್ಯಕ್ಷರಾದ ರಮೇಶ್ ಎಂಬುವವರು ನೀಡಿದ ಪುಕಾರಿನ ಮೇರೆ ಶ್ರೀಮಂಗಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಕೆ ಕೈಗೊಂಡಿದ್ದಾರೆ.

ಅಕ್ರಮ ಮರಳು ಸಂಗ್ರಹಣೆ ಪ್ರಕರಣ

          ದಿನಾಂಕಃ 06-12-2019 ರಂದು ಸಿದ್ದಾಪುರ ಠಾಣಾ ಪಿಎಸ್ಐ ಬೋಜಪ್ಪ ರವರಿಗೆ ಬಂದ ಖಚಿತ ವರ್ತಮಾನದ ಮೇರೆ ಸಿಬ್ಬಂದಿಯವರೊಂದಿಗೆ ತೆರಳಿ ವಿರಾಜಪೇಟೆ ತಾಲ್ಲೂಕು ಯಡೂರು ಗ್ರಾಮದ ಪಳ್ಳಕೆರೆ ಬಳಿ ಹರಿಯುವ ಕೊಮ್ಮೆತೋಡು ಹೊಳೆಯಿಂದ ಶಾಜಿ ಮತ್ತು ಇತರರು ತೋಡಿನಿಂದ ಅಕ್ರಮವಾಗಿ ಮರಳನ್ನು ತೆಗೆದು ಸಂಗ್ರಹಿಸುತ್ತಿದ್ದ ಪ್ರಕರಣವನ್ನು ಪತ್ತೆ ಮಾಡಿ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ         

  ದಿನಾಂಕ: 04-12-2019 ರಂದು ಕುಶಾಲನಗರ ಜನಾತಾ ಕಾಲೋನಿ ನಿವಾಸಿ ಅಬ್ದುಲ್ ರಜಾಕ್ ಎಂಬುವವರು ಏರ್ ಟೆಲ್ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದು ಮಡಿಕೇರಿ ನಗರದ ಕೆ.ಇ.ಬಿ ಬಳಿ ಇರುವ ಏರ್ ಟೆಲ್ ಮಳಿಗೆಯ ಬಳಿ ಕವನ್ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಅಬ್ದುಲ್ ರಜಾಕ್ ರವರಿಗೆ ಅವಾಚ್ಯ ಪದಗಳಿಂದ ಬೈದು ಕೈಯಿಂದ ಹಲ್ಲೆ ಮಾಡಿದ್ದು ಈ ಬಗ್ಗೆ ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.