Crime News

ವ್ಯಕ್ತಿ ಆತ್ಮಹತ್ಯೆ

          ದಿನಾಂಕ: 11-12-2019 ರಂದು ಮಡಿಕೇರಿ ತಾಲ್ಲೂಕು ಬೇತು ಗ್ರಾಮದ ಕಕ್ಕುಂದಕಾಡು ನಿವಾಸಿ ಶ್ರೀನಿವಾಸ ಎಂಬುವವರು ವಿಪರೀತ ಮದ್ಯಸೇವನೆ ಅಭ್ಯಾಸವಿದ್ದವರು ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಈ ಬಗ್ಗೆ ಮೃತರ ಪತ್ನಿ ನೀಡಿದ ದೂರಿನ ಮೇರೆ ನಾಪೋಕ್ಲು ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಅಕ್ರಮ ಮರಳು ಸಾಗಾಟ ಪ್ರಕರಣ

          ದಿನಾಂಕಃ 12-12-2019 ರಂದು ಪೊನ್ನಂಪೇಟೆ ಠಾಣೆ ಪಿ.ಎಸ್.ಐ ಡಿ.ಕುಮಾರ್ ರವರಿಗೆ ದೊರೆತ ಖಚಿತ ವರ್ತಮಾನದ ಮೇರೆ ಸಿಬ್ಬಂದಿಯವರೊಂದಿಗೆ ತೆರಳಿ ವಿರಾಜಪೇಟೆ ತಾಲ್ಲೂಕು ನಡಿಕೇರಿ ಗ್ರಾಮದ ಬಳಿ ಕೆಎ-12-ಬಿ-6307 ರ ಟಿಪ್ಪರ್ ಲಾರಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಮಾಡಿ ನಡಿಕೇರಿ ಗ್ರಾಮದ ನಿವಾಸಿ ಸಜಿ ಎಂಬುವವರ ವಿರುದ್ದ ಪ್ರಕರಣ ದಾಖಲಿಸಿ ಕಾನೂನ ಕ್ರಮ ಜರುಗಿಸಿದ್ದಾರೆ.

ಕಾರಿಗೆ ಸ್ಕೂಟರ್ ಡಿಕ್ಕಿ ಸವಾರನಿಗೆ ಗಾಯ.

          ದಿನಾಂಕ: 12-12-2019 ರಂದು ಸೋಮವಾರಪೇಟೆ ತಾಲ್ಲೂಕು ಸುಂಟಿಕೊಪ್ಪ ಗ್ರಾಮದ ಬಳಿ ಸಾರ್ವಜನಿಕ ರಸ್ತೆಯಲ್ಲಿ ಕೆಎ-11-ಇಜಿ-5466 ರ ಆಕ್ಟಿವಾ ಸ್ಕೂಟರ್ ಸವಾರ ಸ್ಕೂಟರನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕೆಎ-53-ಜೆಡ್-2912 ರ ಕಾರಿಗೆ ಡಿಕ್ಕಿಪಡಿಸಿದ ಪರಿಣಾಮ ಸ್ಕೂಟರ್ ಸವಾರ ನಾಗಣ್ಣ ಎಂಬುವವರು ನಿದ್ದು ಗಾಯಗೊಂಡಿದ್ದು ಈ ಬಗ್ಗೆ ಕುಟ್ಟಪ್ಪ ಎಂಬುವವರು ನೀಡಿದ ಪುಕಾರಿನ ಮೇರೆ ಸುಂಟಿಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಕಳವು ಪ್ರಕರಣ

          ದಿನಾಂಕ: 04-12-2019 ರಂದು ಸೋಮವಾರಪೇಟೆ ತಾಲ್ಲೂಕು ಕೂಡಿಗೆ ಗ್ರಾಮದ ನಿವಾಸಿ ಶ್ರೀಮತಿ ಸುಮತಿ ಎಂಬುವವರ ಮನೆಯ ಬಾಗಿಲಿನ ಬೀಗವನ್ನು ಯಾರೋ ಕಳ್ಳರು ಮುರಿದು ಒಳನುಗ್ಗಿ ಮನೆಯಲ್ಲಿದ್ದ ಅಂದಾಜು 12,000 ರೂ ಬೆಲೆಬಾಳುವ ಬೆಳ್ಳಿಯ ವಸ್ತುಗಳನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ದಿನಾಂಕ: 12-12-2019 ರಂದು ನೀಡಿದ ಪುಕಾರಿನ ಮೇರೆ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.