Crime News

ರಸ್ತೆ ಅಪಘಾತ ಪ್ರಕರಣ

        ದಿನಾಂಕಃ 22-12-2019 ರಂದು ಮಡಿಕೇರಿ ನಗರದ ಚೈನ್ ಗೇಟ್ ಬಳಿ ಹೆದ್ದಾರಿ ರಸ್ತೆಯಲ್ಲಿ ಕೆಎ-03- ಎಂಕ್ಯೂ-8178 ರ ಸ್ವಿಫ್ಟ್ ಕಾರನ್ನು ಚಾಲಕ ಅಮಿತ್ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುಗಡೆಯಿಂದ ಬರುತ್ತಿದ್ದ ಲಾರಿಗೆ ಡಿಕ್ಕಿಪಡಿಸಿದ ಪರಿಣಾಮ ಕಾರಿನಲ್ಲಿದ್ದ ಅಂಜನ್, ಲಿಂಗೇಶ್, ಸಿದ್ದರಾಜು ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ಲಾರಿ ಚಾಲಕ ಕಿರಣ್ ಕುಮಾರ್ ಎಂಬುವವರು ನೀಡಿದ ಪುಕಾರಿನ ಮೇರೆ ಮಡಿಕೇರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಕಾಫಿ ಕಳವು

        ದಿನಾಂಕ: 22-12-2019 ರಂದು ವಿರಾಜಪೇಟೆ ತಾಲ್ಲೂಕು ಪಾಲಿಬೆಟ್ಟ ಗ್ರಾಮದಲ್ಲಿರುವ ದುಬಾರಿ ಗ್ರೂಪ್ ಎಸ್ಟೇಟ್ ಕಾಫಿ ತೋಟದಲ್ಲಿ ಬೆಳೆದಿದ್ದ ಕಾಫಿಯನ್ನು ಎಂ.ಎ.ಎಂ.ಆರ್ ಚಾರಿಟಬಲ್ ಟ್ರಸ್ಟ್ ನ ನಟರಾಜು, ಕೊಳಂದವೇಲು, ಜೋಸು, ಮಣಿಕಂಠನ್, ಸುರೇಂದ್ರ ಎಂಬುವವರು ಅಕ್ರಮ ಪ್ರವೇಶ ಮಾಡಿ ಕಾರ್ಮಿಕರನ್ನು ಬಳಸಿಕೊಂಡು ಕುಯ್ದು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ಎಸ್ಟೇಟ್ ವ್ಯವಸ್ಥಾಪಕರಾದ ಕೆ.ಕಲ್ಯಾಣಸುಂದರಂ ಎಂಬುವವರು ನೀಡಿದ ಪುಕಾರಿನ ಮೇರೆ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ದೇವಸ್ಥಾನದಲ್ಲಿ ಕಳವು

        ದಿನಾಂಕ: 21-12-2019 ರಂದು ರಾತ್ರಿ ವೇಳೆಯಲ್ಲಿ ಮಡಿಕೇರಿ ತಾಲ್ಲೂಕು ಕೊಳಕೇರಿ ಗ್ರಾಮದ ಮೋಟೇರಿ ಶ್ರೀ ಉಮಾಮಹೇಶ್ವರಿ ದೇವಸ್ಥಾನದ ಬಾಗಿಲಿನ ಬೀಗವನ್ನು ಯಾರೋ ಕಳ್ಳರು ಮುರಿದು ಒಳನುಗ್ಗಿ ಅಂದಾಜು 45,000 ರೂ ಹುಂಡಿ ಹಣ ಹಾಗೂ 75,000 ರೂ ಬೆಲೆಬಾಳುವ ವಿಗ್ರಹಗಳನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ಎ.ಕೆ ನಾಣಯ್ಯ ಎಂಬುವವರು ನೀಡಿದ ಪುಕಾರಿನ ಮೇರೆ ನಾಪೋಕ್ಲು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

        ದಿನಾಂಕ: 22-12-2019 ರಂದು ಸೋಮವಾರಪೇಟೆ ತಾಲ್ಲೂಕು ತೋಳೂರು ಶೆಟ್ಟಳ್ಳಿ ಗ್ರಾಮದಲ್ಲಿ ದಿನಸಿ ಅಂಗಡಿ ಮಳಿಗೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಸೋಮವಾರಪೇಟೆ ಠಾಣೆ ಪಿ.ಎಸ್.ಐ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಅದೇ ಗ್ರಾಮದ ನಿವಾಸಿ ಕುಮಾರ್ ಎಂಬುವವರ ವಿರುದ್ದ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.