Crime News

ರಸ್ತೆ ಅಪಘಾತ

        ದಿನಾಂಕ: 28-12-2019 ರಂದು ಮಡಿಕೇರಿ ತಾಲ್ಲೂಕು ಕೆ.ನಿಡುಗಣೆ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-12-ಬಿ-7366 ರ ಆಟೋ ರಿಕ್ಷಾ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ  ಚಾಲನೆ ಮಾಡಿಕೊಂಡು ಹೋಗಿ ಕೆಎ-03-ಎಂವೈ-2193 ರ ಕಾರಿಗೆ ಡಿಕ್ಕಿಪಡಿಸಿದ ಪರಿಣಾಮ ಆಟೋ ರಿಕ್ಷಾ ರಸ್ತೆಯಲ್ಲಿ ಮಗುಚಿ ಬಿದ್ದುದರಿಂದ ಆಟೋ ಚಾಲಕ ವಿಕ್ರಮ್ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ಶಂಕರ್ ಸೆಲ್ವಂ ಎಂಬುವವರು ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

        ದಿನಾಂಕ: 28-12-2019 ರಂದು ವಿರಾಜಪೇಟೆ ತಾಲ್ಲೂಕು ಚೆನ್ನಯ್ಯನಕೋಟೆ ಗ್ರಾಮದಲ್ಲಿ ವಾಸದ ಮನೆಯ ಹಿಂಭಾಗದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಸಿದ್ದಾಪುರ ಠಾಣೆ ಪಿ.ಎಸ್.ಐ ಹೆಚ್.ಎಸ್ ಬೋಜಪ್ಪ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಅದೇ ಗ್ರಾಮದ ನಿವಾಸಿ ಸುನಿಲ್ ಎಂಬುವವರ ವಿರುದ್ದ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

        ದಿನಾಂಕ: 27-12-2019 ರಂದು ಮಡಿಕೇರಿ ತಾಲ್ಲೂಕು ಕಾಟಗೇರಿ ಗ್ರಾಮದ ನಿವಾಸಿ ಬಿ.ಡಿ ಗಣೇಶ್ ಎಂಬುವವರು ಹೆರವನಾಡು ಗ್ರಾಮದ ನಿವಾಸಿ ರಾಮಚಂದ್ರ ಎಂಬುವವರಿಗೆ ಕ್ಷುಲ್ಲಕ ಕಾರಣಕ್ಕೆ ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿ ಗಾಯಗೊಳಿಸಿದ್ದು ಈ ಬಗ್ಗೆ ಗಾಯಾಳು ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಮಹಿಳೆಯ ಕೊಲೆಗೆ ಸಂಚು  

        ಮಡಿಕೇರಿ ತಾಲ್ಲೂಕು ಚೇಲಾವರ ಗ್ರಾಮದ ನಿವಾಸಿ ಮಹಿಳೆಯೋರ್ವರಿಗೆ ಅದೇ ಗ್ರಾಮದ ನಿವಾಸಿ ಸುಬ್ಬಯ್ಯ ಎಂಬುವವರು ವೈಯಕ್ತಿಕ  ಕಾರಣಕ್ಕೆ ಅವರ ಮನೆಯವರು ಹಾಗೂ ಸ್ನೇಹಿತರೊಂದಿಗೆ ಸೇರಿ ಕಳೆದ ಮೂರು ತಿಂಗಳಿನಿಂದ ಬೇರೆ ಬೇರೆ ರೀತಿಯಲ್ಲಿ ಕೊಲೆ ಬೆದರಿಕೆ ಹಾಕಿಸುತ್ತಾ ಸುಪಾರಿ ನೀಡಿ ಕೊಲೆ ಮಾಡಿಸಲು ಸಂಚು ರೂಪಿಸುತ್ತಿರುವುದಾಗಿ ದಿನಾಂಕ: 28-12-2019 ರಂದು ನೀಡಿದ ಪುಕಾರಿನ ಮೇರೆ ನಾಪೋಕ್ಲು ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

        ದಿನಾಂಕ: 28-12-2019 ರಂದು ಸೋಮವಾರಪೇಟೆ ತಾಲ್ಲೂಕು ಬೆಟ್ಟದಳ್ಳಿ ಗ್ರಾಮದಲ್ಲಿ ತನ್ನ ವಾಸದ ಮನೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಸಿದ್ದಾಪುರ ಠಾಣೆ ಪಿ.ಎಸ್.ಐ ಶಿವಶಂಕರ್ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಅದೇ ಬೆಟ್ಟದಳ್ಳಿ ಗ್ರಾಮದ ನಿವಾಸಿ ದರ್ಶನ್ ಎಂಬುವವರ ವಿರುದ್ದ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ವ್ಯಕ್ತಿ ಆತ್ಮಹತ್ಯೆ

        ದಿನಾಂಕ: 28-12-2019 ರಂದು ಸೋಮವಾರಪೇಟೆ ತಾಲ್ಲೂಕು ಮಸಗೊಡು ಗ್ರಾಮದ ನಿವಾಸಿ ನವೀನ್ ಕುಮಾರ್ ಎಂಬುವವರು ವೈಯಕ್ತಿಕ ಕಾರಣಗಳಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಪಕ್ಕದ ಮರಕ್ಕೆ ನೇಣು ಬಿಗಿದುಕೊಂಡು ಆತ್ನಹತ್ಯೆ ಮಾಡಿಕೊಂಡಿದ್ದು ಈ ಬಗ್ಗೆ ಮೃತನ ತಾಯಿ ನೀಡಿದ ದೂರಿನ ಮೇರೆ ಸೋಮವಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಕೊಲೆ ಪ್ರಕರಣ

        ದಿನಾಂಕ: 13-12-2019 ರಂದು ಮಡಿಕೇರಿ ತಾಲ್ಲೂಕು ಕೊಟ್ಟೂರು ಗ್ರಾಮದ ನಿವಾಸಿ ಪವನ್ ಕಾರ್ಯಪ್ಪ ಎಂಬುವವರು ಗ್ರಾಮದಲ್ಲಿ ಹುತ್ತರಿ ಹಬ್ಬಕ್ಕೆ ಹೋಗಿ ವಾಪಾಸ್ಸು ಮನೆಗೆ ಬಂದು ಅಸ್ವಸ್ಥಗೊಂಡು ಬಿದ್ದವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ ಮೇರೆ ಮೃತ ಶರೀರವನ್ನು ಜನಾಂಗದ ಪದ್ದತಿಯಂತೆ ದಹನ ಮಾಡಿ ಅಂತ್ಯ ಸಂಸ್ಕಾರ ಮಾಡಿರುತ್ತಾರೆ. ಆದರೆ ಮೃತ ಪವನ್ ಕಾರ್ಯಪ್ಪ ಮತ್ತು ಕಿಂದನ್ ಕಾರ್ಯಪ್ಪ ಎಂಬುವವರ ಮಧ್ಯೆ ಗ್ರಾಮದ ಗೋಪಾಲಕೃಷ್ಣ ದೇವಾಲಯದ ಬಳಿ ನಡೆದ ಹುತ್ತರಿ ಹಬ್ಬದ ಕಾರ್ಯಕ್ರಮದ ವೇಳೆ ಕ್ಷುಲ್ಲಕ ಕಾರಣಕ್ಕೆ ಜಗಳಾವಾಗಿದ್ದು ಆ ಸಂದರ್ಭದಲ್ಲಿ ಕಿಂದನ್ ಕಾರ್ಯಪ್ಪ ರವರು ಪವನ್ ಕಾರ್ಯಪ್ಪ ರವರಿಗೆ ಹಲ್ಲೆ ಮಾಡಿದ್ದರಿಂದ ಮೃತಪಟ್ಟಿರುವುದಾಗಿ ಮೃತನ ತಾಯಿಯವರಿಗೆ ಮಾಹಿತಿ ತಿಳಿದುಬಂದ ಮೇರೆ  ದಿನಾಂಕ: 28-12-2019 ರಂದು ನೀಡಿದ ಪುಕಾರಿಗೆ ಭಾಗಮಂಡಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.