Crime News

ಹಲ್ಲೆ ಪ್ರಕರಣ 

        ದಿನಾಂಕ: 30-12-2019 ರಂದು ಸೋಮವಾರಪೇಟೆ ತಾಲ್ಲೂಕು ವಾಲ್ನೂರು ಗ್ರಾಮದ ನಿವಾಸಿ ಕೆ.ವಿಜೇಶ್ ಎಂಬುವವರಿಗೆ ಅದೇ ಗ್ರಾಮದ ನಿವಾಸಿ ಮಧನ್ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿ ಗಾಯಗೊಳಿಸಿದ್ದು ಈ ಬಗ್ಗೆ ಚಂದ್ರರಾಜು ಎಂಬುವವರು ನೀಡಿದ ಪುಕಾರಿನ ಮೇರೆ ಸಿದ್ದಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಪ್ರಕರಣದ ಸಾಕ್ಷಿದಾರರಿಗೆ ಬೆದರಿಕೆ

        ದಿನಾಂಕ: 21-12-2019 ರಂದು ವಿರಾಜಪೇಟೆ ತಾಲ್ಲೂಕು ಗೋಣಿಕೊಪ್ಪ ಹರಿಶ್ಚಂದ್ರಪುರದಲ್ಲಿರುವ ಪಲ್ಲೇರಿ ಟಿಂಬರ್ಸ್ ಮಳಿಗೆಯ ಬಳಿ ಅರಣ್ಯ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂದಿಸಿದಂತೆ ಮಹಜರು ತಯಾರಿಸಲು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಾಕ್ಷಿದಾರರಾಗಿ ಕೆ.ಎನ್ ಮಾದಪ್ಪ ಎಂಬುವವರು ಹಾಜರಿದ್ದರು. ಆ ಸಮಯದಲ್ಲಿ ಸಾಕ್ಷಿಯಾಗಿ ಬಂದಿರುವ ಕಾರಣಕ್ಕೆ ಪ್ರಕರಣದಲ್ಲಿ ಆರೋಪಿಯಾಗಿರುವ ಕಳ್ಳಿಚಂಡ ನೋಬನ್ ಎಂಬುವವರು ಮಾದಪ್ಪ ರವರನ್ನು ಮಳಿಗೆಯಲ್ಲಿ ಕೂಡಿಹಾಕಿ ಅವಾಚ್ಯ ಪದಗಳಿಂದ ಬೈದು ಕೊಲೆ ಬೆದರಿಕೆ ಹಾಕಿರುವುದಾಗಿ ದಿನಾಂಕ: 30-12-2019 ರಂದು ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

        ದಿನಾಂಕ: 30-12-2019 ರಂದು ವಿರಾಜಪೇಟೆ ತಾಲ್ಲೂಕು ಅರವತ್ತೊಕ್ಲು ಗ್ರಾಮದ ಬಳಿ ರಸ್ತೆಯಲ್ಲಿ ಕೆಎ-12-ಕ್ಯೂ-7855 ರ ಬೈಕ್ ಸವಾರ ಸುನಿಲ್ ಎಂಬುವವರು ಬೈಕನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-12-ಎಂ-1426 ರ ಕಾರಿಗೆ ಡಿಕ್ಕಿಪಡಿಸಿದ ಪರಿಣಾಮ ಬೈಕ್ ಸವಾರ ಗಾಯಗೊಂಡಿದ್ದು ಈ ಬಗ್ಗೆ ಖಾದರ್ ಎಂಬುವವರು ನೀಡಿದ ಪುಕಾರಿಗೆ ಗೋಣಿಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಅಕ್ರಮ ಮರಳು ಸಾಗಾಟ ಪ್ರಕರಣ

        ದಿನಾಂಕ: 30-12-2019 ರಂದು ವಿರಾಜಪೇಟೆ ತಾಲ್ಲೂಕು ಕದನೂರು ಗ್ರಾಮದ ಬಳಿ ಅಕ್ರಮ ವಾಗಿ ಕೆಎ-12-ಎ-5122 ರ ಟಿಪ್ಪರ್ ಲಾರಿಯಲ್ಲಿ ಮರಳು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ವಿರಾಜಪೇಟೆ ಗ್ರಾಮಾಂತರ ಠಾಣೆ ಪಿಎಸ್ಐ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ವಾಹನ ಮತ್ತು ಮರಳನ್ನು ವಶಕ್ಕೆ ಪಡೆದು ಲಾರಿ ಚಾಲಕನ ಮೇಲೆ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ವ್ಯಕ್ತಿ ಕಾಣೆ

        ದಿನಾಂಕ: 21-12-2019 ರಂದು ಸೋಮವಾರಪೇಟೆ ತಾಲ್ಲೂಕು ಗರ್ವಾಲೆ ಗ್ರಾಮದ ಬಳಿ ರಸ್ತೆಯಲ್ಲಿ ಶರತ್ ಕಾವೇರಪ್ಪ ರವರು ಓಮ್ನಿ ಕಾರು ಚಾಲನೆ ಮಾಡಿಕೊಂಡು ಹೋಗುತ್ತಿರುವಾಗ ಎದುಗೆಡೆಯಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿಪಡಿಸಿರುತ್ತಾರೆ. ಅಪಘಾತವಾದ ನಂತರ ಶರತ್ ಕಾವೇರಪ್ಪ ಯಾರಿಗೂ ತಿಳಿಸದೇ ಎಲ್ಲಿಗೋ ಹೋಗಿದ್ದು ಈ ವರೆಗೆ ವಾಪಾಸ್ಸು ಬಂದಿರುವುದಿಲ್ಲ.  ಬಗ್ಗೆ ಗಣಪತಿ ರವರು ದಿನಾಂಕ: 30-12-2019 ರಂದು ನೀಡಿದ ದೂರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.