Crime News

ಹಲ್ಲೆ ಪ್ರಕರಣದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು     

        ದಿನಾಂಕ: 30-12-2019 ರಂದು ವಿರಾಜಪೇಟೆ ತಾಲ್ಲೂಕು ಮರಪಾಲ ಗ್ರಾಮದ ಚೀನಿಹಡ್ಲು ನಿವಾಸಿಗಳಾದ ಕಾಳ ಮತ್ತು ಬೋಜ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಪರಸ್ಪರ ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿದ್ದು ಈ ಬಗ್ಗೆ ಉಭಯ ಕಡೆಯವರು ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು. ಪ್ರಕರಣದಲ್ಲಿ ಬೋಜ ಎಂಬುವವರಿಂದ  ಹಲ್ಲೆಗೊಳಗಾಗಿ ಗಾಯಗೊಂಡಿದ್ದ ಕಾಳ ಎಂಬುವವರನ್ನು ಮಂಗಳೂರು ವೆನ್ ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಕಾಳ ರವರು ದಿನಾಂಕ: 04-01-2020 ರಂದು ಮೃತಪಟ್ಟಿದ್ದು ಈ ಬಗ್ಗೆ ಬೋಜ ರವರ ವಿರುದ್ದ ಗೋಣಿಕೊಪ್ಪ ಪೊಲೀಸರು ಕೊಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಹಲ್ಲೆ ಪ್ರಕರಣ

        ದಿನಾಂಕ: 04-01-2020 ರಂದು ವಿರಾಜಪೇಟೆ ತಾಲ್ಲೂಕು ಧನುಗಾಲ ಗ್ರಾಮದ ನಿವಾಸಿ ವಿಠಲ ಎಂಬುವವರಿಗೆ ಪಕ್ಕದ ಮನೆಯ ನಿವಾಸಿ ಗುರುಮೂರ್ತಿ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿ ಗಾಯಗೊಳಿಸಿದ್ದು ಈ ಬಗ್ಗೆ ಗಾಯಾಳುವಿನ ಪತ್ನಿ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕೊಲೆ ಪ್ರಕರಣ

        ದಿನಾಂಕ: 04-01-2020 ರಂದು ಮಡಿಕೇರಿ ತಾಲ್ಲೂಕು ಅರೆಕಾಡು ಗ್ರಾಮದಲ್ಲಿರು ಟಾಟಾ ಕಾಫಿ ಕಾನನ್ ಕಾಡು ತೋಟದಲ್ಲಿ ಕೆಲಸ ಮಾಡಿಕೊಂಡು ಜಾರ್ಕಂಡ್ ರಾಜ್ಯ ಮೂಲದ ದಯಾನಂದ ಗುಪ್ತ ರವರ ತಮ್ಮ ಇಬ್ಬರು ಪತ್ನಿಯರೊಂದಿಗೆ ವಾಸವಿದ್ದರು. ಮೊದಲನೇ ಪತ್ನಿ ಆಶಿಕಾ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಗಂಡನ ಎರಡನೇ ಪತ್ನಿ ಓಶಿಕಾ ಎಂಬುವವರ ಕುತ್ತಿಗೆ, ತಲೆಗೆ ಹಲ್ಲೆ ಮಾಡಿದ್ದರಿಂದ ಗಾಯಗೊಂಡವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೇ ಓಶಿಕಾ ರವರು ಮೃತಪಟ್ಟಿದ್ದು ಈ ಬಗ್ಗೆ ಟಾಟಾ ಕಾಫಿ ಸಂಸ್ಥೆ ಕಾನನ್ ಕಾಡು ಎಸ್ಟೇಟ್ ಉಪ ವ್ಯವಸ್ಥಾಪಕರಾದ ತಮ್ಮಯ್ಯ ಎಂಬುವವರು ನೀಡಿದ ಪುಕಾರಿನ ಮೇರೆ ಸಿದ್ದಾಪುರ ಠಾಣೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ವ್ಯಕ್ತಿ ಆತ್ಮಹತ್ಯೆ

        ದಿನಾಂಕ: 03-01-2020 ರಂದು ರಾತ್ರಿ ವಿರಾಜಪೇಟ ತಾಲ್ಲಕು ಹೆಗ್ಗಳ ಗ್ರಾಮದ ನಿವಾಸಿ ಜಯ ಎಂಬುವವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಈ ಬಗ್ಗೆ ಮೃತರ ಮಗ ವಿನೋದ್ ಎಂಬುವವರು ತಂದೆಯವರು ಆರ್ಥಿಕ ಸಮಸ್ಯೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ನೀಡಿದ ದೂರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಯುವಕ ಆತ್ಮಹತ್ಯೆ

        ದಿನಾಂಕ: 03-01-2020 ರಂದು ಮಡಿಕೇರಿ ತಾಲ್ಲೂಕು ಹಾಕತ್ತೂರು ಗ್ರಾಮದ ನಿವಾಸಿ ದೀಕ್ಷಿತ್ ಎಂಬುವರು ಯಾವುದೋ ವಿಚಾರಕ್ಕೆ ಜೀವನದಲ್ಲಿ ಜಿಗುಪ್ಸೆಗೊಂಡು ಮಡಿಕೇರಿ ನಗರದ ಲಾಡ್ಜ್ ನಲ್ಲಿ ಕೊಠಡಿ ಪಡೆದುಕೊಂಡು ನೇಣಿಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಈ ಬಗ್ಗೆ ಮೃತನ ತಂದೆ ಚಂದ್ರಶೇಖರ್ ಎಂಬುವವರು ನೀಡಿದ ಪುಕಾರಿನ ಮೇರೆ ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.