Crime News

ಕಾಫಿ ಕಳವು ಪ್ರಕರಣ

            ದಿನಾಂಕ: 07-01-2020 ರಂದು ವಿರಾಜಪೇಟೆ ತಾಲ್ಲೂಕು ಬೀರುಗ ಗ್ರಾಮದ ನಿವಾಸಿ ಕಳ್ಳಿಚಂಡ ಮುತ್ತಣ್ಣ ಎಂಬುವವರು ಅವರ ತೋಟದಿಂದ ಅವರ ತೋಟದ ಕಾರ್ಮಿಕರು ಕಾಫಿ ಹಣ್ಣನ್ನು ಕುಯ್ದು ಮನೆಗೆ ಹೋಗುವ ರಸ್ತೆ ಬದಿಯಲ್ಲಿ 55 ಚೀಲಗಳಲ್ಲಿ ತುಂಬಿಸಿ ಇಟ್ಟಿದ್ದ ಹಸಿ ಕಾಫಿಯನ್ನು ಕಿರಣ್ ಕುಮಾರ್, ದೇವಯ್ಯ ಸಿದ್ದು ಮತ್ತು ಇತರ 4 ಜನ ಕಾರ್ಮಿಕರು ಕಳ್ಳತನ ಮಾಡಿಕೊಂಡು ಹೋಗಿದ್ದು ಈ ಬಗ್ಗೆ ಮುತ್ತಣ್ಣ ರವರು ನೀಡಿದ ಪುಕಾರಿನ ಮೇರೆ ಶ್ರೀಮಂಗಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 08-01-2019 ರಂದು ವಿರಾಜಪೇಟೆ ತಾಲ್ಲೂಕು ಶ್ರೀಮಂಗಲ ಗ್ರಾಮದ ಸೇತುವ ಬಳಿ ರಸ್ತೆ ಬದಿಯಲ್ಲಿ ಶ್ರೀಮಂಗಲ ಗ್ರಾಮದ ನಿವಾಸಿ ಪಣಿ ಎರವರ ಮುತ್ತ ಎಂಬುವವರು ನೆಡದುಕೊಂಡು ಹೋಗುತ್ತಿರುವಾಗ ಟಿ.ಶೆಟ್ಟಿಗೇರಿ ರಸ್ತೆಯ ಕಡೆಯಿಂದ ಒಂದು ಬಿಳಿ ಬಣ್ಣದ ಕಾರನ್ನು ಅದರ ಚಾಲಕ  ಅತಿವೇಗಮತ್ತುಅಜಾಗರೂಕತೆಯಿಂದ ಚಾಲನೇ ಮಾಡಿಕೊಂಡು ಹೋಗಿ ಡಿಕ್ಕಿಪಡಿಸಿದ್ದರಿಂದ ಗಾಯಗೊಂಡಿರುತ್ತಾರೆ. ಚಾಲಕನು ಕಾರನ್ನು ನಿಲ್ಲಿಸದೇ ಹೊರಟುಹೋಗಿದ್ದು ಈ ಬಗ್ಗೆ ಕುಳಿಯ ಎಂಬುವವರು ನೀಡಿದ ಪುಕಾರಿನ ಮೇರೆ ಶ್ರೀಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 08-01-2020 ರಂದು ವಿರಾಜಪೇಟೆ ತಾಲ್ಲೂಕು ಅರವತ್ತೊಕ್ಲು ಗ್ರಾಮದ ಜೋಡುಬೀಟಿ ಬಳಿ ಮುಖ್ಯ ರಸ್ತೆಯಲ್ಲಿ ಕಿಟ್ಟು ಎಂಬುವವರು ನಡೆದುಕೊಂಡು ಹೋಗುತ್ತಿರುವಾಗ ಮಹಿಂದ್ರಾ ಎಂ.ಎಂ 540 ಜೀಪನ್ನು ಅದರ ಚಾಲಕನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಡಿಕ್ಕಿಪಡಿಸಿ ಜೀಪನ್ನು ನಿಲ್ಲಿಸದೇ ಹೋಗಿದ್ದು ಈ ಬಗ್ಗೆ ಗಾಯಾಳುವಿನ ಮಗ ಉತ್ತಪ್ಪ ಎಂಬುವವರು ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 07-01-2020 ರಂದು ಕುಶಾಲನಗರ ಪಟ್ಟಣದ ಸೋಮೇಶ್ವರ ದೇವಸ್ಥಾನ ರಸ್ತೆಯಲ್ಲಿ ಮುಳ್ಳುಸೋಗೆ ಗ್ರಾಮದ ನಿವಾಸಿ ಮಧು ಎಂಬುವರು ಸೈಕಲ್ ನಲ್ಲಿ ಅವರ ಮನೆಗೆ ಹೋಗುತ್ತಿರುವಾಗ ಕೆಎ-12-ಎಸ್-2789 ರ ಬೈಕನ್ನು ಅದರ ಸವಾರ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಡಿಕ್ಕಿ ಪಡಿಸಿದ ಪರಿಣಾಮ ರಸ್ತೆಗೆ ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ಮಧು ರವರು ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಹಲ್ಲೆ ಪ್ರಕರಣ

            ದಿನಾಂಕ: 08-01-2020 ರಂದು ಸೋಮವಾರಪೇಟೆ ತಾಲ್ಲೂಕು ದೊಡ್ಡಬೆಟ್ಟಗೇರಿ ಗ್ರಾಮದ ನಿವಾಸಿ ಭರತ್ ಎಂಬುವವರು ಬೈಕ್ ನಲ್ಲಿ ಹೋಗುತ್ತಿರುವಾಗ ರಾಜು ಎಂಬುವವರು ಬೈಕನ್ನು ತಡೆದು ನಿಲ್ಲಿಸಿ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿ ಗಾಯಗೊಳಿಸಿದ್ದು ಈ ಬಗ್ಗೆ ಭರತ್ ರವರು ನೀಡಿದ ಪುಕಾರಿನ ಮೇರೆ ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.