Crime News

ಅಕ್ರಮ ಲಾಟರಿ ಮಾರಾಟ ಪ್ರಕರಣ

            ದಿನಾಂಕ: 09-01-2020 ರಂದು ಸೋಮವಾರಪೇಟ ತಾಲ್ಲೂಕು ನೆಲ್ಯಹುದಿಕೇರಿ ಗ್ರಾಮದ ಸಾರ್ವಜನಿಕ ಬಸ್ ತಂಗುದಾಣದ ಬಳಿ ಸಿದ್ದಾಪುರ ನಿವಾಸಿ ಅಫ್ರೋಜ್ ಎಂಬುವವರು ಅಕ್ರಮವಾಗಿ ಕೇರಳ ರಾಜ್ಯದ ಲಾಟರಿ ಮಾಡುತ್ತಿದ್ದವರನ್ನು ದಸ್ತಗಿರಿ ಮಾಡಿ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

            ದಿನಾಂಕ: 08-01-2020 ರಂದು ವಿರಾಜಪೇಟೆ ತಾಲ್ಲೂಕು ಭದ್ರಗೊಳ ಗ್ರಾಮದ ನಿವಾಸಿ ಉಮೇಶ್ ಎಂಬುವವರಿಗೆ ಅದೇ ಗ್ರಾಮದ ನಿವಾಸಿಗಳಾದ ಸುರೇಶ, ಪಾಪು ಪ್ರಸನ್ನ, ಅಣ್ಣು, ರಮೇಶ, ಮಧು, ಶರಣು ಎಂಬುವವರು ಕ್ಷುಲ್ಲಕ ಕಾರಣಕ್ಕೆ ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿ ಗಾಯಗೊಳಿಸಿದ್ದು ಈ ಬಗ್ಗೆ ಉಮೇಶ್ ರವರು ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಹಲ್ಲೆ ಪ್ರಕರಣ

            ದಿನಾಂಕ: 08-01-2020 ರಂದು ವಿರಾಜಪೇಟೆ ತಾಲ್ಲೂಕು ಲಕ್ಕುಂದ ಗ್ರಾಮದ ನಿವಾಸಿ ಪಣಿ ಎರವರ ಪಾಲ ಎಂಬುವವರಿಗೆ ಅದೇ ಗ್ರಾಮದ ನಿವಾಸಿ ರಂಜುಮಣಿ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಕತ್ತಿಯಿಂದ ಹಲ್ಲೆ ಮಾರಣಾಂತಿಕ ಹಲ್ಲೆ ಮಾಡಿ ಗಾಯಗೊಳಿಸಿದ್ದು ಈ ಬಗ್ಗೆ ಪಾಲ ರವರು ನೀಡಿದ ಪುಕಾರಿನ ಮೇರೆ ಕುಟ್ಟ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕಳವು ಪ್ರಕರಣ

            ದಿನಾಂಕ: 08-01-2020 ರಂದು ವಿರಾಜಪೇಟೆ ತಾಲ್ಲೂಕು ಬಿಳುಗುಂದ ಗ್ರಾಮದಲ್ಲಿ ಪೀಟರ್ ಎಂಬುವವರು ಮನೆಯ ಅಡಿಪಾಯಕ್ಕಾಗಿ ಶೀಟ್ ಗಳನ್ನು ಅಳವಡಿಸಿ ಮನೆಗೆ ಹೋಗಿರುವಾಗ ಯಾರೋ ಕಳ್ಳರು 20,000 ರೂ ಬೆಲೆಬಾಳುವ 62 ಮೋಲ್ಡಿಂಗ್ ಶೀಟ್ ಮತ್ತು 4 ಪ್ಲೈವುಡ್ ಪಿಲ್ಲರ್ ಶೀಟ್ ಗಳನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು [ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 09-01-2020 ರಂದು ಸೋಮವಾರಪೇಟೆ ತಾಲ್ಲೂಕು ಕುಸುಬೂರು ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ12-ಪಿ-ಪಿ8874 ರ ಕಾರಿನ ಚಾಲಕ ಕಾರನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-21-ಎಫ್-0025 ರ ಕೆ.ಎಸ್.ಆರ್.ಟಿ.ಸಿ ಬಸ್ ಗೆ ಡಿಕ್ಕಿಪಡಿಸಿದ ಪರಿಣಾಮ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡಿದ್ದು ಈ ಬಗ್ಗೆ ಬಸ್ ಚಾಲಕ ನಾಣಯ್ಯ ಎಂಬುವವರು ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಆಕಸ್ಮಿಕವಾಗಿ ಮರದಿಂದ ಬಿದ್ದು ವ್ಯಕ್ತಿ ಸಾವು

            ದಿನಾಂಕ: 09-01-2020 ರಂದು ಸೋಮವಾರಪೇಟೆ ತಾಲ್ಲೂಕು ನಂಜರಾಯಪಟ್ಟಣ ಗ್ರಾಮದ ಬೋಜಣ್ಣ ಎಂಬುವವರು ತೋಟದಲ್ಲಿ ಮರ ಕಪಾತು ಕೆಲಸ ಮಾಡುತ್ತಿರುವಾಗ ಮರದಿಂದ ಳಿಯುವಾಗ ಆಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದು ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೇ ಬೋಜಣ್ಣ ರವರು ಮೃತಪಟ್ಟಿದ್ದು ಈ ಬಗ್ಗೆ ಮೃತರ ಸಹೋದರ ನಂದ ಎಂಬುವವರು ನೀಡಿದ ದೂರಿನ ಮೇರೆ ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.