Crime News

ವ್ಯಕ್ತಿಯ ಆತ್ಮಹತ್ಯೆ

ವ್ಯಕ್ತಿಯೊಬ್ಬರು ಜೀವನದಲ್ಲಿ ಜುಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಡಿಕೇರಿ ತಾಲೂಕಿನ ಹೊದ್ದೂರು ಗ್ರಾಮದಲ್ಲಿ ವರದಿಯಾಗಿದೆ. ಹೊದ್ದೂರು ಗ್ರಾಮದ ಪಾಲೆಮಾಡು ಪೈಸಾರಿಯ ನಿವಾಸಿಯಾದ ನಾರಾಯಣ ಎಂಬುವವರು ಅನಾರೋಗ್ಯದಿಂದ ಬಳಲುತ್ತಿದ್ದವರು ದಿನಾಂಕ 28-05-2018 ರಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಈ ಬಗ್ಗೆ ರಘುರವರು ನೀಡಿದ ದೂರಿನ ಮೇರೆಗೆ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಅಪಘಾತ ಪ್ರಕರಣ

ದಿನಾಂಕ 29-05-2018 ರಂದು ಪೊನ್ನಂಪೇಟೆಯ ನಿವಾಸಿಯಾದ ಗಣಪತಿ @ ಗಪ್ಪುರವರು ಕಾರಿನಲ್ಲಿ ಚಾಲಕ ಈಶ್ವರರವರೊಂದಿಗೆ ಮೈಸೂರಿಗೆ ಹೋಗುತ್ತಿರುವಾಗ ತಿತಿಮತಿ ಎಂಬಲ್ಲಿಗೆ ತಲುಪುವಾಗ ಎದುರುಗಡೆಯಿಂದ ಮಾರುತಿ 800 ಕಾರನ್ನು ಅದರ ಚಾಲಕ ಅಜಾಗರೂಕತೆಯಿಂದ ಚಾಲನೆ ಮಾಡಿ ಕಾರಿಗೆ ಡಿಕ್ಕಿಪಡಿಸಿದ ಪರಿಣಾಮ ಕಾರುಗಳು ಜಖಂಗೊಂಡು ಕಾರಿನಲ್ಲಿದ್ದ ಗಣಪತಿಯವರಿಗೆ ಗಾಯವಾಗಿದ್ದು, ಈ ಬಗ್ಗೆ ಗಣಪತಿಯವರು ನೀಡಿದ ಪುಕಾರಿನ ಮೇರೆಗೆ ಪೊನ್ನಂಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Leave a Reply

Your email address will not be published.