Crime News

ಅಕ್ರಮ ಗಾಂಜಾ ಮಾರಾಟ ಯತ್ನ, ಆರೋಪಿ ಬಂಧನ:

ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಹಾರಂಗಿ ಗ್ರಾಮದ ಬೆಂಡೆಬೆಟ್ಟದ ಹಾಡಿಯಲ್ಲಿ ಗಾಂಜಾ ಗಿಡವನ್ನು ಬೆಳೆಸಿ, ಅದನ್ನು ಕಡಿದು ಮಾರಾಟ ಮಾಡಲು ಯತ್ನಿಸುತ್ತಿದ್ದವನನ್ನು ಕುಶಾಲನಗರ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿರುತ್ತಾರೆ.    

ದಿನಾಂಕ: 16-01-2020 ರಂದು ದೊರೆತ ಖಚಿತ ವರ್ತಮಾನದ ಮೇರೆಗೆ ಕಾರ್ಯೋನ್ಮುಖರಾದ ಕುಶಾಲನಗರ ಗ್ರಾಮಾಂತರ ಠಾಣಾ ಪೊಲೀಸರು ಮೊ.ಸಂ. 06/2020 ಕಲಂ 20 ಎನ್.ಡಿ.ಪಿ.ಎಸ್ ಕಾಯ್ದೆ ರೀತ್ಯ ಪ್ರಕರಣ ದಾಖಲಿಸಿ, ಬೆಂಡೆಬೆಟ್ಟ ಬಸ್ ತಂಗುದಾಣದ ಬಳಿ ಕುಳಿತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದು ಪರಿಶೀಲಿಸಲಾಗಿ ಗೋಣಿಚೀಲದಲ್ಲಿ ಗಾಂಜಾ ಗಿಡದ ಹಸಿ ಸೊಪ್ಪು ಇದ್ದು, ಆರೋಪಿ ಸೋಮವಾರಪೇಟೆ ತಾಲ್ಲೂಕು ದೊಡ್ಡತ್ತೂರು ಗ್ರಾಮದ ಬೆಂಡೆಬೆಟ್ಟ ಕಾಲೋನಿ ನಿವಾಸಿ ಮೋಹನ ಎಂಬುವವರನ್ನು ವಶಕ್ಕೆ ಪಡೆದು ಸುಮಾರು 6 ಕೆಜಿ ಗಾಂಜಾ ಸೊಪ್ಪನ್ನು ವಶಪಡಿಸಿಕೊಳ್ಳಲಾಗಿದೆ. ಈ ಕಾರ್ಯಾಚರಣೆಯಲ್ಲಿ ಕೊಡಗು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಸುಮನ್.ಡಿ.ಪಿ, ಐಪಿಎಸ್ ಹಾಗೂ ಸೋಮವಾರಪೇಟೆ ಉಪಾಧೀಕ್ಷಕರಾದ ಹೆಚ್.ಎಂ. ಶೈಲೇಂದ್ರ ರವರ ಮಾರ್ಗದರ್ಶನದಲ್ಲಿ, ಕುಶಾಲನಗರ ವೃತ್ತ ನಿರೀಕ್ಷಕರಾದ ಎಂ. ಮಹೇಶ್ ರವರ ನೇತೃತ್ವದಲ್ಲಿ ಕುಶಾಲನಗರ ಗ್ರಾಮಾಂತರ ಪೊಲೀಸ್ ಉಪನಿರೀಕ್ಷಕರಾದ ಸಿ.ನಂದೀಶ್ ಕುಮಾರ್ ಹಾಗೂ ಸಿಬ್ಬಂದಿಗಳಾದ ಎ.ಎಸ್.ಜೋಸೆಫ್, ದಯಾನಂದ, ಧನುಕುಮಾರ್, ಅಜಿತ್, ಸಂಪತ್ ಕುಮಾರ್ ಚಾಲಕರಾದ, ಅರುಣ, ಗಣೇಶ್, ರಾಜು ರವರು ಪಾಲ್ಗೊಂಡಿದ್ದರು.

ರಸ್ತೆ ಅಪಘಾತ

            ದಿನಾಂಕ: 14-01-2020 ರಂದು ಸೋಮವಾರಪೇಟೆ ತಾಲ್ಲೂಕು ಕೊಡಗರ ಹಳ್ಳಿ ಗ್ರಾಮದ ಬಳಿ ಹೆದ್ದಾರಿ ರಸ್ತೆಯಲ್ಲಿ ಮಂಜುನಾಥ್ ಎಂಬುವವರು ಕೆಎ-12-ಕ್ಯೂ-5949 ರ ಬೈಕನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುಗಡೆಯಿಂದ ಬರುತ್ತಿದ್ದ ಕೆಎ-12-ಕ್ಯೂ-4685 ರ ಸ್ಕೂಟರ್ ಗೆ ಡಿಕ್ಕಿಪಡಿಸಿದ ಪರಿಣಾಮ ಸ್ಕೂಟರ್ ಸವಾರ ಮಣಿವಣ್ಣನ್ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ಶರೀಫ್ ಎಂ,.ಕೆ ಎಂಬುವವರು ನೀಡಿದ ಪುಕಾರಿನ ಮೇರೆ ಸುಂಟಿಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ರಸ್ತೆ ಅಪಘಾತ

            ದಿನಾಂಕ; 15-01-2020 ರಂದು ಸೋಮವಾರಪೇಟೆ ತಾಲ್ಲೂಕು ಚಿಕ್ಕಕುಂದ ಗ್ರಾಮದ ಬಳಿ ಸಾರ್ವಜನಿಕ ರಸ್ತೆಯಲ್ಲಿ ಕೆಎ-4-ಎಂಪಿ-7351 ರ ಕಾರನ್ನು ಅದರ ಚಾಲಕ ಯಶವಂತ್ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಸ್ಕೂಟರ್ ಗೆ ಡಿಕ್ಕಿಪಡಿಸಿದ ಪರಿಣಾಮ ಸ್ಕೂಟರ್ ಸವಾರ ಷಣ್ಮುಖ ಎಂಬುವವರು ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ರೇವಣ್ಣ ಎಂಬುವವರು ನೀಡಿದ ಪುಕಾರಿನ ಮೇರೆ ಶನಿವಾರಸಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ರಸ್ತೆ ಅಪಘಾತ           

  ದಿನಾಂಕ: 15-01-2020 ರಂದು ವಿರಾಜಪೇಟೆ ತಾಲ್ಲೂಕು ಹೈಸೊಡ್ಲೂರು ಗ್ರಾಮದ ಬಿ.ಪಿ.ಎಲ್ ಜಂಕ್ಷನ್ ಬಳಿ ರಸ್ತೆಯಲ್ಲಿ ರೋಶನ್ ಎಂಬುವವರು ಅವರ ಸ್ಕೂಟರನ್ನು ಚಾಲನೆ ಮಾಡಿಕೊಂಡು ಹೋಗುವಾಗ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ ಪರಿಣಾಮ ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದರಿಂದ ಸವಾರ ರೋಶನ್ ಮತ್ತು ಹಿಂಬದಿ ಸವಾರ ಶೇಖರ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ಶ್ರೀಮತಿ ಪಾರ್ವತಿ ಎಂಬುವವರು ನೀಡಿದ ಪುಕಾರಿನ ಮೇರೆ ಶ್ರೀಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.