Crime News

ವ್ಯಕ್ತಿ ಕಾಣೆ

            ದಿನಾಂಕ: 11-01-2020 ರಂದು ಕಾಟಗೇರಿ ಗ್ರಾಮದ ನಿವಾಸಿ ಪವನ್ ಎಂಬುವವರು ಪತ್ನಿಯ ಮನೆಗೆ ಹೋಗಿಬರುವುದಾಗಿ ತಿಳಿಸಿ ಮನೆಯಿಂದ ಹೋದವರು ಪತ್ನಿಯ ಮನೆಗೆ ಹೋಗಿರುವುದಿಲ್ಲ. ಅಕ್ಕಪಕ್ಕದವರಲ್ಲಿ , ಸ್ನೇಹಿತರಲ್ಲಿ ವಿಚಾರಿಸಿದ್ದು ಈವರೆಗೂ ಪವನ್ ರವರು ಪತ್ತೆಯಾಗದೇ ಕಾಣೆಯಾಗಿದ್ದು ಈ ಬಗ್ಗೆ ಪವನ್ ರವರ ತಾಯಿ ದಿನಾಂಕ: 16-01-2020 ರಂದು ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕಾರಿನ ಚಕ್ರ ಕಳವು

            ದಿನಾಂಕ: 15-01-2020 ರಂದು ವಿರಾಜಪೇಟೆ ತಾಲ್ಲೂಕು ಚೆನ್ನಂಗೊಲ್ಲಿ ಗ್ರಾಮದ ಅಬ್ದುಲ್ ರೆಹಮಾನ್ ಎಂಬುವವರ ವರ್ಕ್ ಶಾಪ್ ಬಳೀ ರಿಪೇರಿ ಕೆಲಸಕ್ಕಾ ನಿಲ್ಲಿಸಿದ್ದ ವಿಭಿನ್ ಎಂಬುವವರ ಕಾರಿನ ರೂ. 40,000 ಬೆಲೆಬಾಳುವ 5 ಚಕ್ರಗಳನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ಅಬ್ದುಲ್ ರೆಹಮಾನ್ ಎಂಬುವವರು ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕಾರು ಡಿಕ್ಕಿ, ಸ್ಕೂಟರ್ ಸವಾರ ಸಾವು

            ದಿನಾಂಕ: 16-01-2020 ರಂದು ಸೋಮವಾರಪೇಟೆ ತಾಲ್ಲೂಕು ಕೂಡ್ಲೂರು ಗ್ರಾಮದ ಬಳಿ ಹೆದ್ದಾರಿ ರಸ್ತೆಯಲ್ಲಿ ಕೆಎ-12-ಬಿ-0048 ರ ಕಾರನ್ನು ಅದರ ಚಾಲಕ ರಮೇಶ್ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಸ್ಕೂಟರ್ ಗೆ ಡಿಕ್ಕಿಪಡಿಸಿದ ಪರಿಣಾಮ ಸ್ಕೂಟರ್ ಸವಾರ ಅಜಯ್ ಎಂಬುವವರು ರಸ್ತೆಗೆ ಬಿದ್ದು ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದಾಗ ವೈದ್ಯರು ಪರೀಕ್ಷಿಸಿ ಗಾಯಾಳು ಮೃತಪಟ್ಟಿರುವುದಾಗಿ ತಿಳಿಸಿದ್ದು ಈ ಬಗ್ಗೆ ವಿಜಯ ಎಂಬುವವರು ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ

            ದಿನಾಂಖ: 16-01-2020 ರಂದು ಸೋಮವಾರಪೇಟೆ ತಾಲ್ಲೂಕು ಶಾಂತಳ್ಳಿ ಗ್ರಾಮದ ಬಸವನಕಟ್ಟೆ ಬಳಿ ಮುಖ್ಯ ರಸ್ತೆಯಲ್ಲಿ ತಿಮ್ಮಯ್ಯ ಎಂಬುವವರು ಬೈಕನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ರಸ್ಎತ ಬದಿಯ ಮರಕ್ಕೆ ಡಿಕ್ಕಿಪಡಿಸಿದ ಪರಿಣಾಮ ಸವಾರ ತಲೆಗೆ ಗಾಯವಾಗಿ ಬೈಕ್ ಜಖಂಗೊಂಡಿರುವುದಾಗಿ ಪ್ರಸಾದ್ ಎಂಬುವವರು ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.